Menu

ಕಾರು ಅಪಘಾತದಲ್ಲಿ ಸಜೀವದಹನಗೊಂಡ ಲೋಕಾಯುಕ್ತ ಇನ್ ಸ್ಪೆಕ್ಟರ್

ರಸ್ತೆ ಡಿವೈಡರ್​ಗೆ ಡಿಕ್ಕಿ ಹೊಡೆದ ಕಾರು ಹೊತ್ತಿ ಉರಿದ ಪರಿಣಾಮ ಹಾವೇರಿ ಲೋಕಾಯುಕ್ತ ಇನ್ಸ್​ಪೆಕ್ಟರ್ ಸಜೀವ ದಹನಗೊಂಡ ಘಟನೆ ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪಟ್ಟಣದ ಹೊರವಲಯದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ. ಹಾವೇರಿ ಲೋಕಾಯುಕ್ತ ಇನ್ಸ್​ಪೆಕ್ಟರ್ ಪಂಚಾಕ್ಷರಯ್ಯ​ ಸಾಲಿಮಠ ಅವರು ಅಪಘಾತದಲ್ಲಿ ಸಜೀವ ದಹನವಾಗಿದ್ದು, ಕಾರ್​​ನಲ್ಲಿಯೇ ಅವರ ದೇಹ ಹೊತ್ತಿ ಉರಿದಿದೆ. ಹುಬ್ಬಳ್ಳಿ ಮಾರ್ಗವಾಗಿ ಗದಗಿನತ್ತ ಕಾರು ಹೊರಟಿತ್ತು. ರಾಷ್ಟ್ರೀಯ ಹೆದ್ದಾರಿಯಲ್ಲಿನ ರಸ್ತೆ ಡಿವೈಡರ್​ಗೆ ಕಾರು ಡಿಕ್ಕಿ ಹೊಡೆದಿದ್ದರಿಂದ ಈ ಘಟನೆ