Menu

ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಜೊತೆ ಮೈತ್ರಿ ಇಲ್ಲ: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ

ಬಿಜೆಪಿ ಜೊತೆಗಿನ ಮೈತ್ರಿ ವಿಧಾನಸಭೆ, ಲೋಕಸಭೆಗಷ್ಟೇ ಸೀಮಿತವಾಗಿದ್ದು, ಸ್ಥಳೀಯ ಸಂಸ್ಥೆ ಚುನಾವಣೆಗೆ ಅಲ್ಲ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್ ಪ್ರತ್ಯೇಕವಾಗಿ ಹೋರಾಟಮಾಡಲಿದ್ದು, ಬಿಜೆಪಿ ಜೊತೆ ಹೊಂದಾಣಿಕೆ ಇಲ್ಲ ಎಂದರು. ಜಿಬಿಎ, ನಗರಸಭೆ, ಪಾಲಿಕೆ ಸೇರಿದಂತೆ ಸ್ಥಳೀಯ ಚುನಾವಣೆಯ ಸೀಟು ಹಂಚಿಕೆ ಬಗ್ಗೆ ಮೋದಿ, ಶಾ ಜೊತೆಗೆ ಚರ್ಚೆ

ವೋಟ್‌ ಚೋರಿ ನೆಪದಲ್ಲಿ ಸುಳ್ಳು ಕಥೆ ಸೃಷ್ಟಿ: ಪ್ರತಿಪಕ್ಷಗಳ ವಿರುದ್ಧ ಹೆಚ್.ಡಿ. ದೇವೇಗೌಡ ವಾಗ್ದಾಳಿ

ನವದೆಹಲಿ: ವೋಟ್‌ ಚೋರಿ ಹೆಸರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸರಕಾರ ಹಾಗೂ ಸಾಂವಿಧಾನಿಕ ಸಂಸ್ಥೆಗಳ ವಿರುದ್ಧ ಸುಳ್ಳಿನ ಸಂಕಥನ ಸೃಷ್ಟಿಸುತ್ತಿರುವ ಪ್ರತಿಪಕ್ಷಗಳು ಭವಿಷ್ಯದಲ್ಲಿ ಘೋರ ಪರಿಣಾಮ ಅನುಭವಿಸುತ್ತವೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಗಂಭೀರ ಎಚ್ಚರಿಕೆ ನೀಡಿದರು. ರಾಜ್ಯಸಭೆಯಲ್ಲಿ

ನೀರಾವರಿ ವಿಚಾರದಲ್ಲಿ ಮಾಜಿ ಪ್ರಧಾನಿ ಹೆಚ್‌ಡಿಡಿಗೆ ಸರ್ಕಾರ ಸಂಪೂರ್ಣ ಬೆಂಬಲ: ಸಿಎಂ

ನೀರಾವರಿ ವಿಚಾರದಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯದ ವಿರುದ್ಧ ಪಕ್ಷಾತೀತವಾಗಿ ಹೋರಾಡಲು ಸಿದ್ಧ ಎಂಬ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಹೇಳಿಕೆಯನ್ನು ಸ್ವಾಗತಿಸುತ್ತೇನೆ.  ನೆಲ-ಜಲ-ಭಾಷೆ ವಿಚಾರದಲ್ಲಿ ನಾನು ಸದಾ ಕನ್ನಡಿಗನಾಗಿ ನಡೆದುಕೊಂಡಿದ್ದೇನೆಯೇ ಹೊರತು ರಾಜಕಾರಣಿಯಾಗಿ ಅಲ್ಲ ಎನ್ನುವುದನ್ನು ಹಿರಿಯರಾದ ದೇವೇಗೌಡರ ಗಮನಕ್ಕೆ ತರಬಯಸುತ್ತೇನೆ ಎಂದು

ಸಂಕ್ರಾಂತಿ ಶುಭಾಶಯ ಕೋರಿದ ಮಾಜಿ ಪ್ರಧಾನಿ ದೇವೇಗೌಡ

ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರು ನಾಡಿನ ಜನತೆಗೆ ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದ್ದಾರೆ. ಸಮೃದ್ಧಿಯ ಸಂಕೇತವಾದ ಸುಗ್ಗಿ ಹಬ್ಬ ಎಲ್ಲರ ಬಾಳಿನಲ್ಲೂ ಸಂಭ್ರಮವನ್ನು ತರಲಿ. ದಕ್ಷಿಣಾಯಣದಿಂದ ಉತ್ತರಾಯಣಕ್ಕೆ ಪಥ ಬದಲಿಸಿ ಬೆಳಗುತ್ತಿರುವ ಸೂರ್ಯ ದೇವ ಎಲ್ಲರಲ್ಲೂ ಉತ್ಸಾಹ,

ಕಾರ್ಯಕರ್ತರ ಮನೆಗಳಲ್ಲಿಯೇ ವಾಸ್ತವ್ಯ ಹೂಡಿ ಪಕ್ಷ ಕಟ್ಟುತ್ತೇನೆ: ಹೆಚ್.ಡಿ.ದೇವೇಗೌಡ

ನಮ್ಮದು ಸಮರ್ಥ ನಾಯಕರ, ಸಮರ್ಥ ಕಾರ್ಯಕರ್ತರ ಪಕ್ಷ. ನಮ್ಮ ಪಕ್ಷವನ್ನು ಬೇರೆಯವರು ಮುಗಿಸುವುದು ಅಸಾಧ್ಯ. ಮಾರ್ಚ್ ತಿಂಗಳಿಂದ ನಾನು ಜಿಲ್ಲೆಗಳಲ್ಲಿ ಪ್ರವಾಸ ಮಾಡುತ್ತೇನೆ, ಕಾರ್ಯಕರ್ತರ ಮನೆಗಳಲ್ಲಿಯೇ ವಾಸ್ತವ್ಯ ಹೂಡಿ ಪಕ್ಷ ಕಟ್ಟುತ್ತೇನೆ. ಸದಸ್ಯತ್ವ ಅಭಿಯಾನವನ್ನು ನೀವು ಮುಂದುವರಿಸಿ ಎಂದು ಜೆಡಿಎಸ್‌ ವರಿಷ್ಠ,