Menu

ಕೇಂದ್ರ ಸಚಿವ ಆಗಿದ್ದರೂ ನೋಟಿಸ್ ಕೊಡದೇ ಜಮೀನು ಒತ್ತುವರಿ ತೆರವು: ಎಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ನಾನು ನನ್ನ ಜೀವನದಲ್ಲಿ ಯಾವುದೇ ಆಕ್ರಮಗಳನ್ನು ಎಸಗಿಲ್ಲ. ನಲವತ್ತು ವರ್ಷಗಳ ಹಿಂದೆ ಖರೀದಿ ಮಾಡಿರುವ ಭೂಮಿ ಅದಾಗಿದ್ದು, ಈ ಸರ್ಕಾರದ ಷಡ್ಯಂತ್ರ್ಯದ ವಿರುದ್ಧ ಕಾನೂನು ವ್ಯಾಪ್ತಿಯಲ್ಲಿಯೇ ಹೋರಾಟ ನಡೆಸುತ್ತೇನೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು. ನವದೆಹಲಿಗೆ ತೆರಳುವ ಮುನ್ನ ತಮ್ಮ ನಿವಾಸದ ಬಳಿ ಅವರು ಮಾಧ್ಯಮಗಳ ಜತೆ ಮಾತನಾಡಿದ ಅವರು, ಎರಡು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದೇನೆ. ಭೂಮಿ ಒತ್ತುವರಿ ಸೇರಿದಂತೆ ನಾನು ಯಾವ ಅಕ್ರಮವನ್ನೂ

ಗ್ಯಾರಂಟಿ ಹಣ ಕೃಷಿಗೆ ಕೊಟ್ಟರೆ ಅದೇ 100 ಗ್ಯಾರಂಟಿಗೆ ಸಮ: ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಹೆಸರಘಟ್ಟದಲ್ಲಿರುವ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ (ICAR) ಯನ್ನು ಡೀಮ್ಡ್ ವಿಶ್ವವಿದ್ಯಾಲಯದ ಸ್ಥಾನಮಾನ ನೀಡುವ ಬಗ್ಗೆ ಕೇಂದ್ರದ ಶಿಕ್ಷಣ ಸಚಿವರಾದ ಧರ್ಮೇಂದ್ರ ಪ್ರಧಾನ್ ಅವರ ಜತೆ ಕೂಡಲೇ ಚರ್ಚೆ ನಡೆಸುವುದಾಗಿ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.

ಕುಮಾರಸ್ವಾಮಿದ್ದು ಬರೀ ರಾಜಕೀಯ: ಡಿಕೆ ಶಿವಕುಮಾರ್ ತಿರುಗೇಟು

ಕುಮಾರಸ್ವಾಮಿ ಬರೀ ರಾಜಕೀಯ ಮಾಡುತ್ತಾರೆ. ಕುಮಾರಸ್ವಾಮಿ ಅವರ ಕಾಲದಲ್ಲಿ ಏನು ಮಾಡಿದ್ದಾರೆ? ಎಂದು ಡಿಸಿಎಂ ಡಿಕೆ ಶಿವಕುಮಾರ್ ಪ್ರಶ್ನಿಸಿದರು. ಬೆಂಗಳೂರಿನ ಸದಾಶಿವನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕೃಷ್ಣಾ ಅವರ ಕಾಲದಲ್ಲಿ ನಗರಾಭಿವೃದ್ಧಿ ಸಚಿವನಾಗಿದ್ದಾಗ ಬೆಂಗಳೂರು ಪಾಲಿಕೆ ವ್ಯಾಪ್ತಿ ಹೆಬ್ಬಾಳ,

ಎಚ್.ಡಿಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್ ತನಿಖೆಗೆ ಎಸ್ ಐಟಿ ರಾಜ್ಯಪಾಲರ ಮೊರೆ

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ವಿಶೇಷ ತನಿಖಾ ತಂಡ ಪ್ರಾಸಿಕ್ಯೂಷನ್ ತನಿಖೆಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಮನವಿ ಮಾಡಿದೆ. ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ಗಣಿಗಾರಿಕೆಗೆ ಅಕ್ರಮವಾಗಿ ಜಮೀನು ನೀಡಿದ ಪ್ರಕರಣದಲ್ಲಿ ಎಚ್. ಡಿ ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ

ರಾಜಕೀಯ ಸೇಡಿನಿಂದ ನನ್ನ ಜಮೀನಿನ ಸರ್ವೇ: ಹೆಚ್.ಡಿ.ಕುಮಾರಸ್ವಾಮಿ ಆರೋಪ

ಬೆಂಗಳೂರು: ಬಿಡದಿ ಬಳಿಯ ಕೇತಿಗಾನಹಳ್ಳಿಯಲ್ಲಿ ತಮ್ಮ ಜಮೀನು ಸರ್ವೆ ಸೇಡಿನ ರಾಜಕೀಯದ ಸೇಡಿನ ಭಾಗ ಎಂದಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಇಷ್ಟು ಐಪಿಎಸ್ ಅಧಿಕಾರಿಗಳ ನೇತೃತ್ವದಲ್ಲಿ ಎಸ್ ಐಟಿ ರಚನೆ ಮಾಡುತ್ತಿದ್ದರು. ಈಗ ಐಎಎಸ್ ಅಧಿಕಾರಿಗಳ ಎಸ್ ಐಟಿಯನ್ನೂ ರಚನೆ ಮಾಡುತ್ತಿದ್ದಾರೆ

ಕುಮಾರಸ್ವಾಮಿಗೆ ಅಭಿವೃದ್ಧಿಗಿಂತ ದ್ವೇಷ ರಾಜಕಾರಣವೇ ಹೆಚ್ಚು: ಡಿಕೆ ಶಿವಕುಮಾರ್ ಕಿಡಿ

ಬೆಂಗಳೂರು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿಗೆ ಅಭಿವೃದ್ಧಿಗಿಂತ ದ್ವೇಷ ರಾಜಕಾರಣವೇ ಹೆಚ್ಚು ಎಂದು ಡಿಸಿಎಂ ಡಿಕೆ ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕನಕಪುರದಲ್ಲಿ ಶನಿವಾರ ಕಾಂಗ್ರೆಸ್ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆಗೆ ಆಯ್ಕೆಯಾದ ಒಂದೇ ದಿನದಲ್ಲಿ ಮೋದಿಯಿಂದ ಮೇಕೆದಾಟು ಯೋಜನೆಗೆ

ಕುಮಾರಸ್ವಾಮಿ ಮೊದಲು ಮೇಕೆದಾಟಿಗೆ ಅನುಮತಿ ಕೊಡಿಸಲಿ: ಡಿಕೆ ಶಿವಕುಮಾರ್

ಬೆಂಗಳೂರು: ಮೇಕೆದಾಟು ಅಣೆಕಟ್ಟಿಗೆ ಅನುಮತಿಯನ್ನು ಒಂದೇ ದಿನದಲ್ಲಿ ಕೊಡಿಸುತ್ತೇನೆ ಎಂದು ಕುಮಾರಸ್ವಾಮಿ ಹೇಳಿದ್ದರಲ್ಲ, ಮೊದಲು ಈ ಕೆಲಸವನ್ನು ಮಾಡಲಿ, ಆಮೇಲೆ ಮಾತಾಡಲಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗೆ ಶಿವಕುಮಾರ್ ಅವರು ಗುರುವಾರ ಉತ್ತರಿಸಿದ

ಮಧ್ಯಮ ವರ್ಗದ ಜನರ ಬದುಕನ್ನು ಸರಳಗೊಳಿಸುವ ಬಜೆಟ್: ಹೆಚ್.ಡಿ. ಕುಮಾರಸ್ವಾಮಿ

ನವದೆಹಲಿ: 2047ರ ವಿಕಸಿತ ಭಾರತ ಕನಸು ಸಾಕಾರಕ್ಕೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಆಯವ್ಯಯ ಬಹುದೊಡ್ಡ ಕೊಡುಗೆ ನೀಡಲಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಬಜೆಟ್ ಬಗ್ಗೆ ಮಾಧ್ಯಮ ಹೇಳಿಕೆ

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಭೂಕಬಳಿಕೆ ಆರೋಪ ತನಿಖೆಗೆ ಎಸ್ ಐಟಿ ರಚನೆ

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮತ್ತು ಅವರ ಕುಟುಂಬದವರ ವಿರುದ್ಧ ಜಮೀನು ಕಬಳಿಕೆ ಆರೋಪದ ತನಿಖೆಗೆ ಐಎಎಸ್ ಅಧಿಕಾರಿ ಅಮಲಾನ್ ಆದಿತ್ಯ ಬಿಸ್ವಾಸ್ ನೇತೃತ್ವದಲ್ಲಿ ಎಸ್ಐಟಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕುಮಾರಸ್ವಾಮಿ ಹಾಗೂ ಅವರ ಮನೆಯವರು ರಾಮನಗರ ಜಿಲ್ಲೆ ಬಿಡದಿ

ಕುಂಭಮೇಳದಲ್ಲಿ ಕಟ್ಟುನಿಟ್ಟಿನ ಸುರಕ್ಷತೆಗೆ ಪ್ರಧಾನಿ ಸೂಚನೆ: ಎಚ್.ಡಿ. ಕುಮಾರಸ್ವಾಮಿ

ಮೈಸೂರು: ಪ್ರಯಾಗ್ ರಾಜ್ ಕುಂಭಮೇಳದಲ್ಲಿ ನಡೆದಿರುವ ಕಾಲ್ತುಳಿತ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಆದೇಶದಂತೆ ಎಲ್ಲಾ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಬಗ್ಗೆ ಉತ್ತರ ಪ್ರದೇಶದ ಸರಕಾರಕ್ಕೆ ಪ್ರಧಾನಿಗಳು ಸೂಕ್ತ ನಿರ್ದೇಶನ ನೀಡಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು