Sunday, September 20, 2026
Menu

ಬೆಂಗಳೂರು ಏರ್‌ಪೋರ್ಟ್‌ಗೆ ಬಂದಿಳಿದ ಮಹಿಳೆ ಹೃದಯಾಘಾತಕ್ಕೆ ಬಲಿ

ಕೇರಳದಿಂದ ಬೆಂಗಳೂರು ಕೆಂಪೇಗೌಡ ನಿಲ್ದಾಣಕ್ಕೆ ವಿಮಾನದಲ್ಲಿ ಬಂದಿಳಿದ ಮಹಿಳೆ ತಕ್ಷಣ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ನಿಲ್ದಾಣದ ಟರ್ಮಿನಲ್‌ ಒಂದರ ಎಕ್ಸಿಲೇಟರ್‌ನಲ್ಲಿ ಮಹಿಳೆ ಕುಸಿದು ಅಸು ನೀಗಿದ್ದಾರೆ. ಕೇರಳದ ಕೋಜಿಕೋಡ್​ನಿಂದ ಬಂದಿದ್ದ ಶಿವದಾಸ್ ಲತಾ ( 66 ) ಹೃದಯಾಘಾತದಿಂದ ಮೃತಪಟ್ಟವರು, ಆಕಾಶ್ ಏರ್​ಲೈನ್ಸ್ ನಲ್ಲಿ ಅವರು ಕೇರಳದಿಂದ ಬೆಂಗಳೂರಿಗೆ ಬಂದಿದ್ದರು. ಎಕ್ಸಿಲೇಟರ್‌ನಲ್ಲಿ ಕುಸಿದು ಬಿದ್ದ ಕೂಡಲೇ ಸಿಬ್ಬಂದಿ ಪ್ರಥಮ‌ ಚಿಕಿತ್ಸೆ ನೀಡಿದ್ದು, ಅಷ್ಟರಲ್ಲೇ ಆಕೆಯ ಪ್ರಾಣ ಹೋಗಿತ್ತು.

ಶಾಲೆಯಲ್ಲಿ ಕುಸಿದು ಐದನೇ ತರಗತಿ ವಿದ್ಯಾರ್ಥಿ ಸಾವು

ಬೆಂಗಳೂರು ಬನ್ನೇರುಘಟ್ಟ ರಸ್ತೆಯ ವಿವರ್ಸ್ ಕಾಲೋನಿಯಲ್ಲಿರುವ ನ್ಯೂ ಬ್ಲಾಸಮ್ ಶಾಲೆಯಲ್ಲಿ 12 ವರ್ಷದ ಬಾಲಕನೊಬ್ಬ ತರಗತಿ ಕೊಠಡಿಯಲ್ಲೇ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ. ಅರ್ಹಾನ್ ಪಾಷಾ (12) ಮೃತಪಟ್ಟ ವಿದ್ಯಾರ್ಥಿ. ನ್ಯೂ ಬ್ಲಾಸಮ್ ಶಾಲೆಯಲ್ಲಿ 5ನೇ ತರಗತಿ ಓದುತ್ತಿದ್ದ. ತರಗತಿಯಲ್ಲಿದ್ದ

ಹಾವೇರಿಯಲ್ಲಿ ಆಟವಾಡುತ್ತಿದ್ದ ಮಗು ಕುಸಿದು ಸಾವು

ಹಾವೇರಿಯಲ್ಲಿ ಆಟವಾಡುತ್ತಿದ್ದ ಒಂದು ವರ್ಷದ ಮಗು ಏಕಾಏಕಿ ಕುಸಿದು ಬಿದ್ದು ಅಸು ನೀಗಿದೆ. ಕುಸಿದು ಬಿದ್ದ ಮಗುವನ್ನು ಪೋಷಕರು ಹಾವೇರಿಯ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ವೈದ್ಯರು ಇರಲಿಲ್ಲ. ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ಸಿಗದೆ ಮಗು ಮೃತಪಟ್ಟಿದ್ದಾಗಿ ಪೋಷಕರು

ಮೈಸೂರು ಕಾಲೇಜು ಕ್ಯಾಂಪಸ್‌ನಲ್ಲೇ ಕುಸಿದು ವಿದ್ಯಾರ್ಥಿ ಸಾವು

ಮೈಸೂರಿನ ಮರಿಮಲ್ಲಪ್ಪ ಕಾಲೇಜು ಕ್ಯಾಂಪಸ್‌ನಲ್ಲೇ ವಿದ್ಯಾರ್ಥಿಯೊಬ್ಬರು ಹೃದಯಾಘಾತಗೊಂಡು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಮಾದೇಶ್ ಮೃತಪಟ್ಟ ವಿದ್ಯಾರ್ಥಿ. ಇವರು ಮದ್ದೂರು ತಾಲೂಕಿನವರಾಗಿದ್ದು, ಮೈಸೂರು ಮರಿಮಲ್ಲಪ್ಪ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಎಂದಿನಂತೆ ಕಾಲೇಜಿಗೆ ಬಂದಿದ್ದ ಮಾದೇಶ್, ಕ್ಯಾಂಪಸ್‌ನಲ್ಲಿ ಇದ್ದಕ್ಕಿದ್ದಂತೆ ಕುಸಿದುಬಿದ್ದಿದ್ದಾರೆ. ಕಾಲೇಜಿನ ಸಿಬ್ಬಂದಿ

ಹಿರಿಯೂರಿನಲ್ಲಿ ಹೃದಯಾಘಾತದಿಂದ ನಾಲ್ಕು ವರ್ಷದ ಮಗು ಸಾವು

ಎದೆ ಉರಿ ಎಂದು ಹೇಳಿದ ನಾಲ್ಕು ವರ್ಷದ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿರುವಾಗಲೇ ಮೃತಪಟ್ಟಿರುವ ಘಟನೆ ಚಿತ್ರದುರ್ಗದ ಹಿರಿಯೂರಿನಲ್ಲಿ ನಡೆದಿದೆ.  ಹಿರಿಯೂರು ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ ವೈಷ್ಣವ್ ಮೃತ ಬಾಲಕ. ವೈಷ್ಣವ್ ಎದೆ ಉರಿಯುತ್ತಿದೆ ಎಂದು ಪೋಷಕರಿಗೆ ತಿಳಿದ್ದು, ಕೂಡಲೇ

ಬಿಹಾರದ 7 ಜಿಲ್ಲೆಗಳ ತಾಯಿ ಎದೆಹಾಲಿನಲ್ಲಿ ವಿಷಕಾರಿ ಯುರೇನಿಯಂ

ಪಾಟ್ನಾದ ಮಹಾವೀರ ಕ್ಯಾನ್ಸರ್ ಸಂಸ್ಥಾನ, ನವದೆಹಲಿಯ ಏಮ್ಸ್ ಮತ್ತು ಜೀವರಸಾಯನಶಾಸ್ತ್ರ ವಿಭಾಗದ ಸಂಶೋಧಕರ ಒಕ್ಕೂಟ ನಡೆಸಿರುವ ಅಧ್ಯಯನವೊಂದರಲ್ಲಿ ಬಿಹಾರದ ಏಳು ಜಿಲ್ಲೆಗಳ ತಾಯಂದಿರ ಎದೆಹಾಲಿನಲ್ಲಿ ವಿಷಕಾರಿ ಯುರೇನಿಯಂ ಪತ್ತೆಯಾಗಿದೆ. ಬಿಹಾರದಲ್ಲಿ ನಡೆದ ಮಹತ್ವದ ವೈದ್ಯಕೀಯ-ವೈಜ್ಞಾನಿಕ ಅಧ್ಯಯನ ಇದಾಗಿದ್ದು, ಆಘಾತಕಾರಿ ಮಾಹಿತಿಯೊಂದನ್ನು ಹೊರ