Menu

ರಾಜ್ಯದ ಆರೋಗ್ಯ ಇಲಾಖೆ ಹುದ್ದೆಗಳು ತಿಂಗಳೊಳಗೆ ಭರ್ತಿಯೆಂದ ಆರೋಗ್ಯ ಸಚಿವರು

ಸರ್ಕಾರವು ಮುಂದಿನ ಒಂದು ತಿಂಗಳೊಳಗೆ ರಾಜ್ಯದ ಆರೋಗ್ಯ ಇಲಾಖೆಯಲ್ಲಿರುವ ಎಲ್ಲ ಪ್ರಮುಖ ಹುದ್ದೆಗಳನ್ನು ಭರ್ತಿ ಮಾಡಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ್ ಅವರ ಪ್ರಶ್ನೆಗೆ ಉತ್ತರಿಸಿದ ದಿನೇಶ್ ಗುಂಡೂರಾವ್, ಸಮುದಾಯ ಆರೋಗ್ಯ ಕೇಂದ್ರಗಳು (ಸಿಎಚ್‌ಸಿ), ಪ್ರಾಥಮಿಕ ಆರೋಗ್ಯ ಕೇಂದ್ರಗಳು (ಪಿಎಚ್‌ಸಿ) ಮತ್ತು ತಾಲೂಕು ಆಸ್ಪತ್ರೆಗಳಲ್ಲಿನ ಕೊರತೆಯನ್ನು ನೀಗಿಸಲು ಸರ್ಕಾರ ತ್ವರಿತ