health sector
Karnataka Budget 2025: ಆರೋಗ್ಯ ಕ್ಷೇತ್ರಕ್ಕೆ ಬಜೆಟ್‌ನಲ್ಲಿ ಏನೇನಿದೆ
ರಾಜ್ಯದಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವುದಕ್ಕಾಗಿ ಈ ಬಾರಿಯ ಬಜೆಟ್‌ಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಲವು ಕ್ರಮಗಳನ್ನು ಪ್ರಕಟಿಸಿದ್ದಾರೆ. ವೈದ್ಯಕೀಯ ಇಲಾಖೆಯಡಿ ರಾಜ್ಯದಲ್ಲಿ 177 ಕೋಟಿ ರೂ. ಮೊತ್ತದಲ್ಲಿ 114 Modular Operation Theater ಗಳನ್ನು, 34 ಕೋಟಿ ರೂ. ವೆಚ್ಚದಲ್ಲಿ 64 Anaesthesia Work Station ಗಳನ್ನು ಸ್ಥಾಪಿಸಲಾಗಿದೆ. ಗದಗ ಮೆಡಿಕಲ್ ಕಾಲೇಜಿನಲ್ಲಿ Cathlab ಸೌಲಭ್ಯದೊಂದಿಗೆ Super Speciality Cardiac Unit ಅನ್ನು 10 ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭಿಸಲಾಗಿದೆ.