heart attack
ಸಹ ಚಾಲಕನಿಗೆ ಬಸ್ ಕೊಟ್ಟ ಚಾಲಕ ಹೃದಯಾಘಾತಕ್ಕೆ ಬಲಿ
ಇಂದೋರ್‌ನಿಂದ ರಾಜಸ್ಥಾನ ಕಡೆಗೆ ಬಸ್ ಚಲಾಯಿಸುತ್ತಿದ್ದ ಚಾಲಕರೊಬ್ಬರು ಸಹಚಾಲಕನಿಗೆ ಬಸ್ ಚಾಲನೆ ಮಾಡುವುದಕ್ಕೆ ಕೊಟ್ಟ ಸ್ವಲ್ಪ ಹೊತ್ತಿಗೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಚಾಲಕ ಸತೀಶ್ ರಾವ್ ಅವರಿಗೆ ರಾಜಸ್ಥಾನದ ಪಾಲಿ ತಲುಪುವಾಗ ಅನಾರೋಗ್ಯ ಕಾಡುತ್ತಿದೆ ಎಂದು ಅನಿಸಲಾರಂಭಿಸಿದೆ. ತಕ್ಷಣ ಬಸ್ ಅನ್ನು ಓಡಿಸುವಂತೆ ಸಹ ಚಾಲಕನಿಗೆ ನೀಡಿದ ಕೆಲವೇ ಹೊತ್ತಿಗೆ ಅಸು ನೀಗಿದ್ದಾರೆ. ಬಸ್‌ನಲ್ಲಿ ಕುಸಿದು ಬಿದ್ದಿದ್ದ ಅವರನ್ನು ಹತ್ತಿರದ ವೈದ್ಯಕೀಯ ಕೇಂದ್ರಕ್ಕೆ ಕರೆದೊಯ್ಯಲಾಗಿತ್ತು, ಅಷ್ಟರಲ್ಲಾಗಲೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆಂದು ವೈದ್ಯರು ದೃಢಪಡಿಸಿದ್ದಾರೆ.
ಪಾರ್ಕ್ ಮಾಡಿದ್ದ ಕಾರಿನಲ್ಲಿ ಹೃದಯಾಘಾತಕ್ಕೆ ಯುವಕ ಬಲಿ
ಪಾರ್ಕ್ ಮಾಡಿದ್ದ ಕಾರಿನಲ್ಲಿ ಹೃದಯಾಘಾತದಿಂದ ಯುವಕ ಮೃತಪಟ್ಟಿರುವ ಘಟನೆ ಬೆಂಗಳೂರು ನಗರದ ಬ್ರೂಕ್ ಫೀಲ್ಡ್ ರಸ್ತೆಯಲ್ಲಿ ನಡೆದಿದೆ. ಪ್ರತಿಷ್ಠಿತ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಟೆಕ್ಕಿ, ಇಂದಿರಾನಗರ ನಿವಾಸಿ ಸಂತೋಷ್ ಪ್ರಸಾದ್ (37) ಮೃತಪಟ್ಟವರು. ಎಂದಿನಂತೆ ಕಾರಿನಲ್ಲಿ ಆಫೀಸಿಗೆ ಹೋಗುವಾಗ ಹೃದಯಾಘಾತ
ಅರಸೀಕೆರೆಯಲ್ಲಿ ಒಂದೇ ದಿನ ಹೃದಯಾಘಾತದಿಂದ ಉಸಿರು ಚೆಲ್ಲಿದ ಅತ್ತಿಗೆ,ನಾದಿನಿ
ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನಲ್ಲಿ ಅತ್ತಿಗೆ ಮತ್ತು ನಾದಿನಿ ಒಂದೇ ದಿನ ಹೃದಯಾಘಾತಕ್ಕೊಳಗಾಗಿ ಮೃತಪಟಟ್ಟಿದ್ದಾರೆ. ಅರಸೀಕೆರೆ ತಾಲೂಕು ಗಂಗಾಮತಸ್ಥ ಸಂಘದ ಅಧ್ಯಕ್ಷರಾದ ಕೇಶವಮೂರ್ತಿ ಅವರ ಸಹೋದರಿ ಜಾವಗಲ್ ಗ್ರಾಮದ ಪಿಎಸಿಎಸ್ ಹಾಲಿ ನಿರ್ದೇಶಕಿ ಹಾಗೂ ಮಾಜಿ ಅಧ್ಯಕ್ಷೆ, ಗ್ರಾ.ಪಂ ಮಾಜಿ ಸದಸ್ಯೆ
ಪಿರಿಯಾಪಟ್ಟಣದಲ್ಲಿ ಹೃದಯಾಘಾತದಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಸಾವು
ಹೃದಯಾಘಾತದಿಂದ ಯುವಕರು,ಯುವತಿಯರು, ಮಕ್ಕಳ ಸಾವಿನ ಸರಣಿ ಮುಂದುವರಿಯುತ್ತಿದ್ದು, ಪಿರಿಯಾಪಟ್ಟಣ ತಾಲೂಕಿನ ಕೆಲ್ಲೂರು ಗ್ರಾಮದಲ್ಲಿ ಇಂದು (ಸೋಮವಾರ)ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ. ನಾಗರಾಜ್, ವಸಂತ ದಂಪತಿ ಪುತ್ರಿ ದೀಪಿಕಾ (15) ಹೃದಯಾಘಾತದಿಂದ ಮೃತಪಟ್ಟ ವಿದ್ಯಾರ್ಥಿನಿ. ರಾವಂದೂರು ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿ ದೀಪಿಕಾ ಇದ್ದಕ್ಕಿದ್ದಂತೆ
ಕುಳಿತಲ್ಲೇ ಹೃದಯಾಘಾತ: ಪ್ಯಾರಾ ಮೆಡಿಕಲ್ ವಿದ್ಯಾರ್ಥಿ ಸಾವು
ಕಲಬುರಗಿಯ ಚಿತ್ತಾಪುರ ತಾಲೂಕಿನ ನಾಲವಾರ ಗ್ರಾಮದಲ್ಲಿ 17 ವರ್ಷದ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಕೋರೇಶ್ ಸಿದ್ದಣ್ಣ ಮದ್ರಿ ಮೃತಪಟ್ಟ ಯುವಕ. ಕಲಬುರಗಿ ನಗರದಲ್ಲಿ ಪ್ಯಾರಾ ಮೆಡಿಕಲ್ ವ್ಯಾಸಂಗ ಮಾಡುತ್ತಿದ್ದ ಕೋರೇಶ್ ಸ್ನೇಹಿತರ ಜೊತೆ ಕುಳಿತಿದ್ದಾಗ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಗೆಳೆಯ
ಕರ್ತವ್ಯನಿರತ ಯೋಧ ಬಾಗಲಕೋಟೆಯ ಚನ್ನಯ್ಯ ರೇಷ್ಮೆ ಹೃದಯಾಘಾತಕ್ಕೆ ಬಲಿ
ರಾಜಸ್ಥಾನದಲ್ಲಿ ಕರ್ತವ್ಯನಿರತರಾಗಿದ್ದ ಬಾಗಲಕೋಟೆಯ ಯೋಧ ಮಾಗೊಂಡಯ್ಯ ಚನ್ನಯ್ಯ ರೇಷ್ಮೆ (37) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬಾದಾಮಿ ತಾಲೂಕಿನ ನಂದಿಕೇಶ್ವರ ಗ್ರಾಮದ ಯೋಧ ಕರ್ತವ್ಯದಲ್ಲಿ ಇದ್ದಾಗಲೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಕಳೆದ 14 ವರ್ಷದಿಂದ ಇವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಬೆಳಗಾವಿ ಮರಾಠಾ ಇನ್‌ಫೆಂಟ್ರಿ