Heart attack death
ಬೆಂಗಳೂರು ಏರ್‌ಪೋರ್ಟ್‌ಗೆ ಬಂದಿಳಿದ ಮಹಿಳೆ ಹೃದಯಾಘಾತಕ್ಕೆ ಬಲಿ
ಕೇರಳದಿಂದ ಬೆಂಗಳೂರು ಕೆಂಪೇಗೌಡ ನಿಲ್ದಾಣಕ್ಕೆ ವಿಮಾನದಲ್ಲಿ ಬಂದಿಳಿದ ಮಹಿಳೆ ತಕ್ಷಣ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ನಿಲ್ದಾಣದ ಟರ್ಮಿನಲ್ ಒಂದರ ಎಕ್ಸಿಲೇಟರ್‌ನಲ್ಲಿ ಮಹಿಳೆ ಕುಸಿದು ಅಸು ನೀಗಿದ್ದಾರೆ. ಕೇರಳದ ಕೋಜಿಕೋಡ್ನಿಂದ ಬಂದಿದ್ದ ಶಿವದಾಸ್ ಲತಾ ( 66 ) ಹೃದಯಾಘಾತದಿಂದ ಮೃತಪಟ್ಟವರು, ಆಕಾಶ್ ಏರ್ಲೈನ್ಸ್ ನಲ್ಲಿ ಅವರು ಕೇರಳದಿಂದ ಬೆಂಗಳೂರಿಗೆ ಬಂದಿದ್ದರು. ಎಕ್ಸಿಲೇಟರ್‌ನಲ್ಲಿ ಕುಸಿದು ಬಿದ್ದ ಕೂಡಲೇ ಸಿಬ್ಬಂದಿ ಪ್ರಥಮ ಚಿಕಿತ್ಸೆ ನೀಡಿದ್ದು, ಅಷ್ಟರಲ್ಲೇ ಆಕೆಯ ಪ್ರಾಣ ಹೋಗಿತ್ತು.
ಮದ್ದೂರು ಶಾಲೆಯಲ್ಲಿ ಊಟ ಮಾಡುತ್ತಿದ್ದಾಗಲೇ ವಿದ್ಯಾರ್ಥಿ ಹೃದಯಾಘಾತಕ್ಕೆ ಬಲಿ
ಮಂಡ್ಯದ ಮದ್ದೂರು ತಾಲೂಕಿನ ಸೋಮನಹಳ್ಳಿ ಗ್ರಾಮದಲ್ಲಿರುವ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸುತ್ತಿದ್ದ ಒಂಬತ್ತನೇ ತರಗತಿ ವಿದ್ಯಾರ್ಥಿ ಹೃದಯಾಘಾತದಿಂದ ಮಂಗಳವಾರ ಮೃತಪಟ್ಟಿದ್ದಾನೆ. ಸೋಮನಹಲ್ಳಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ವೀರಮಣಿ (14) ಹೃದಯಾಘಾತಕ್ಕೆ ಬಲಿಯಾದವ. ಶಾಲೆಯಲ್ಲಿ ಮಧ್ಯಾಹ್ನ ಎಂದಿನಂತೆ ಎಲ್ಲರ ಜೊತೆ ಊಟ ಮಾಡುತ್ತಿದ್ದಾಗ
ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗಲೇ ಬಿಇಒ ಹೃದಯಾಘಾತದಿಂದ ಸಾವು
ಕರ್ತವ್ಯಕ್ಕೆಂದು ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗಲೇ ಕೊಡಗಿನ ವಿರಾಜಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿ ಆನಂದ್ ಪಿ.ಜೆ. (55) ಮೃತರು. ಮೈಸೂರಿನಿಂದ ವಿರಾಜಪೇಟೆಗೆ ಕರ್ತವ್ಯಕ್ಕೆ ತೆರಳಲು ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು. ಇಲವಾಲ ಸಮೀಪ ಬಸ್ ತಲುಪುತ್ತಿದ್ದಂತೆ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು
ಶಾಲೆಯಲ್ಲಿ ಕುಸಿದು ಐದನೇ ತರಗತಿ ವಿದ್ಯಾರ್ಥಿ ಸಾವು
ಬೆಂಗಳೂರು ಬನ್ನೇರುಘಟ್ಟ ರಸ್ತೆಯ ವಿವರ್ಸ್ ಕಾಲೋನಿಯಲ್ಲಿರುವ ನ್ಯೂ ಬ್ಲಾಸಮ್ ಶಾಲೆಯಲ್ಲಿ 12 ವರ್ಷದ ಬಾಲಕನೊಬ್ಬ ತರಗತಿ ಕೊಠಡಿಯಲ್ಲೇ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ. ಅರ್ಹಾನ್ ಪಾಷಾ (12) ಮೃತಪಟ್ಟ ವಿದ್ಯಾರ್ಥಿ. ನ್ಯೂ ಬ್ಲಾಸಮ್ ಶಾಲೆಯಲ್ಲಿ 5ನೇ ತರಗತಿ ಓದುತ್ತಿದ್ದ. ತರಗತಿಯಲ್ಲಿದ್ದ
ಕೊಡಚಾದ್ರಿಗೆ ಟ್ರಕ್ಕಿಂಗ್ ಹೋಗಿದ್ದ ಬಾಮಾ ಹರೀಶ್ ಪುತ್ರ ಉಲ್ಲಾಸ್ ಹೃದಯಾಘಾತಕ್ಕೆ ಬಲಿ
ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಹಾಗೂ ಕರ್ನಾಟಕ ಫಿಲಂ ಚೇಂಬರ್ ಮಾಜಿ ಅಧ್ಯಕ್ಷ ಬಾಮಾ ಹರೀಶ್ ಪುತ್ರ ಉಲ್ಲಾಸ್ (28) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಉಲ್ಲಾಸ್ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೊಡಚಾದ್ರಿ ಗಿರಿಗೆ ಟ್ರಕ್ಕಿಂಗ್‌ಗೆ ತೆರಳಿದ್ದಾಗ ಹಠಾತ್ ಹೃದಯಾಘಾತಕ್ಕೆ ಒಳಗಾಗಿದ್ದು ನಗರ
ದೇವದುರ್ಗದಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್ಸ್‌ಸ್ಟೇಬಲ್ ಕುಸಿದು ಸಾವು
ರಾಯಚೂರು ಜಿಲ್ಲೆಯ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ೩೭ ವರ್ಷದ ಪೊಲೀಸ್ ಕಾನ್ಸ್‌ಸ್ಟೇಬಲ್ ರೇಣುಕಾ ರಾಜ್ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತದಿಂದ ಕುಸಿದು ಮೃತಪಟ್ಟಿದ್ದಾರೆ. ಅವರು ಮೊಹರಂ ಹಬ್ಬದ ಭದ್ರತೆಗೆ ನಿಯೋಜನೆಗೊಂಡಿದ್ದು, ಕರ್ತವ್ಯದಲ್ಲಿದ್ದಾಗ ತೀವ್ರ ಎದೆನೋವು ಹಾಗೂ ಎಡೆಗೈ ಸೆಳೆತ ಕಾಣಿಸಿಕೊಂಡಿತ್ತು. ಅಸ್ವಸ್ಥಗೊಂಡ ಅವರನ್ನು
ವೃದ್ಧ ದಂಪತಿ ಸಾವು ಪ್ರಕರಣ: ಪತ್ನಿಗೆ ಹೃದಯಾಘಾತ, ಪತಿ ಸುಸೈಡ್
ಬೆಂಗಳೂರಿನ ಸಂಪಿಗೆಹಳ್ಳಿಯಲ್ಲಿ ನಡೆದಿದ್ದ ವೃದ್ಧ ದಂಪತಿಯ ನಿಗೂಢ ಸಾವು ಪ್ರಕರಣದಲ್ಲಿ ಪತ್ನಿಯನ್ನು ಕೊಲೆ ಮಾಡಿ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಭಾವಿಸಲಾಗಿತ್ತು. ಆದರೆ ಮರಣೋತ್ತರ ಪರೀಕ್ಷೆಯ ವರದಿ ಪ್ರಕಟವಾಗಿದ್ದು, ನಿಜಾಂಶ ಬಯಲಾಗಿದೆ. ಪತ್ನಿ ಸುಮಿತ್ರಾ ಪ್ರಸಾದ್(77) ಹೃದಯಾಘಾತದಿಂದ ಮೃತಪಟ್ಟಿದ್ದು, ಆಕೆಯ ಸಾವಿನಿಂದ
ಮೈಸೂರು ಕಾಲೇಜು ಕ್ಯಾಂಪಸ್‌ನಲ್ಲೇ ಕುಸಿದು ವಿದ್ಯಾರ್ಥಿ ಸಾವು
ಮೈಸೂರಿನ ಮರಿಮಲ್ಲಪ್ಪ ಕಾಲೇಜು ಕ್ಯಾಂಪಸ್‌ನಲ್ಲೇ ವಿದ್ಯಾರ್ಥಿಯೊಬ್ಬರು ಹೃದಯಾಘಾತಗೊಂಡು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಮಾದೇಶ್ ಮೃತಪಟ್ಟ ವಿದ್ಯಾರ್ಥಿ. ಇವರು ಮದ್ದೂರು ತಾಲೂಕಿನವರಾಗಿದ್ದು, ಮೈಸೂರು ಮರಿಮಲ್ಲಪ್ಪ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಎಂದಿನಂತೆ ಕಾಲೇಜಿಗೆ ಬಂದಿದ್ದ ಮಾದೇಶ್, ಕ್ಯಾಂಪಸ್‌ನಲ್ಲಿ ಇದ್ದಕ್ಕಿದ್ದಂತೆ ಕುಸಿದುಬಿದ್ದಿದ್ದಾರೆ. ಕಾಲೇಜಿನ ಸಿಬ್ಬಂದಿ
ಹಿರಿಯೂರಿನಲ್ಲಿ ಹೃದಯಾಘಾತದಿಂದ ನಾಲ್ಕು ವರ್ಷದ ಮಗು ಸಾವು
ಎದೆ ಉರಿ ಎಂದು ಹೇಳಿದ ನಾಲ್ಕು ವರ್ಷದ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿರುವಾಗಲೇ ಮೃತಪಟ್ಟಿರುವ ಘಟನೆ ಚಿತ್ರದುರ್ಗದ ಹಿರಿಯೂರಿನಲ್ಲಿ ನಡೆದಿದೆ. ಹಿರಿಯೂರು ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ ವೈಷ್ಣವ್ ಮೃತ ಬಾಲಕ. ವೈಷ್ಣವ್ ಎದೆ ಉರಿಯುತ್ತಿದೆ ಎಂದು ಪೋಷಕರಿಗೆ ತಿಳಿದ್ದು, ಕೂಡಲೇ
ಮಸೀದಿಯಲ್ಲಿ ಆಝಾನ್ ಕೂಗುತ್ತಿರುವಾಗಲೇ ಕುಸಿದು ಮೃತಪಟ್ಟ ಧರ್ಮಗುರು
ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಮಸೀದಿಯಲ್ಲಿ ಆಝಾನ್ ಕೂಗುತ್ತಿರುವಾಗಲೇ ಬಂಟ್ವಾಳದ ಧರ್ಮಗುರು ಹೃದಯಾಘಾತದಿಂದ ಕುಸಿದು ಮೃತಪಟ್ಟ ಘಟನೆ ನಡೆದಿದೆ. ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಪುಚ್ಚೆಕೆರೆ ನಿವಾಸಿ ನೂಜಿ ಉಸ್ಮಾನ್ ಅವರ ಪುತ್ರ ಅಬ್ದುಲ್ ಲತೀಫ್ ಮದನಿ (50) ಮೃತಪಟ್ಟವರು. ಸಂಜೆ




