Menu

ದರ್ಶನ್‌ಗೆ ಮತ್ತೆ ಬೆನ್ನು ನೋವು: ಹೀಟಿಂಗ್ ಬೆಲ್ಟ್ ಗೆ ಜೈಲು ವೈದ್ಯರ ಮನವಿ

ಚಿತ್ರದುರ್ಗದ ರೇಣುಕಾಚಾರ್ಯ ಕೊಲೆ ಪ್ರಕರಣದ ಆರೋಪಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್‌ಗೆ ಮತ್ತೆ ಬೆನ್ನುನೋವು ಹೆಚ್ಚಾದ ಹಿನ್ನೆಲೆಯಲ್ಲಿ ಹೀಟಿಂಗ್ ಬೆಲ್ಟ್ ಒದಗಿಸಲು ಜೈಲಿನ ವೈದ್ಯಾಧಿಕಾರಿಗಳು ಪತ್ರ ಬರೆದಿದ್ದಾರೆ. ಕಾರಾಗೃಹ ಆಸ್ಪತ್ರೆಯ ಮುಖ್ಯ ವೈದ್ಯರು, ಸಿ.ವಿ.ರಾಮನ್ ನಗರ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕರಿಗೆ ಹೀಟಿಂಗ್ ಬೆಲ್ಟ್ ಒದಗಿಸಲು ಮತ್ತು ಅಗತ್ಯ ಇರುವವರೆಗೂ ಫಿಸಿಯೋಥೆರಪಿ ಚಿಕಿತ್ಸೆ ಒದಗಿಸಲು ಮನವಿ ಮಾಡಿದ್ದಾರೆ. ಇತ್ತೀಚೆಗೆ ಜೈಲಿನಲ್ಲಿ ಬೆನ್ನುನೋವಿಗೆ ನಟ ದರ್ಶನ್ ಒಳಗಾಗಿದ್ದರು. ಜೈಲಿನ ವೈದ್ಯರು