Menu

ಮಳೆಯಿಂದ ಭಾರಿ ಹಾನಿ ವಿಶೇಷ ಪ್ಯಾಕೇಜ್‌ಗಾಗಿ ಸಿಎಂ ಸಿದ್ದರಾಮಯ್ಯಗೆ ಈಶ್ವರ ಖಂಡ್ರೆ ಮನವಿ

ಬೀದರ್‌ನಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಭಾರಿ ಪ್ರಮಾಣದ ಬೆಳೆ, ಮನೆ ಹಾನಿಯ ಜೊತೆಗೆ ಮೂಲಸೌಕರ್ಯಕ್ಕೂ ಹಾನಿ ಆಗಿದ್ದು, ವೈಮಾನಿಕ ಸಮೀಕ್ಷೆ ನಡೆಸಿ ವಿಶೇಷ ಪ್ಯಾಕೇಜ್ ನೀಡುವಂತೆ ಮುಖ್ಯಮಂತ್ರಿಗಳಿಗೆ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಮನವಿ ಮಾಡಿದ್ದಾರೆ. ಭಾನುವಾರ ರಾತ್ರಿ ಸಚಿವ ರಹೀಂಖಾನ್ ಜೊತೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಅರ್ಪಿಸಿದ ಬಳಿಕ ಮಾತನಾಡಿದ ಈಶ್ವರ ಖಂಡ್ರೆ, ತಮ್ಮ ಮನವಿಗೆ ಮುಖ್ಯಮಂತ್ರಿಗಳು

ವಿಜಯಪುರ ಪ್ರವಾಹ ಪೀಡಿತ ಸ್ಥಳಗಳಿಗೆ ಎಂ ಬಿ ಪಾಟೀಲ ಭೇಟಿ, ತುರ್ತು ಕ್ರಮಕ್ಕೆ ಸೂಚನೆ

ವಿಜಯಪುರ ಜಿಲ್ಲೆಯಲ್ಲಿ ನಿರಂತರ ಮಳೆಯ ಪರಿಣಾಮವಾಗಿ ಹಲವು ಭಾಗಗಳು ಪ್ರವಾಹದ ಭೀತಿಯಲ್ಲಿದ್ದು, ಅಕ್ಷರಶಃ ಜನಜೀವನ ಅಸ್ತವ್ಯಸ್ತಗೊಂಡಿದೆ.  ಈ ಹಿನ್ನೆಲೆ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಿದರು. ಭೀಮಾನದಿ

ರಾಜ್ಯದ ಪ್ರಮುಖ ಜಲಾಶಯಗಳು ಬಹುತೇಕ ಭರ್ತಿ: ಡ್ಯಾಂಗಳಲ್ಲಿ ಎಷ್ಟಿದೆ ನೀರು?

ಸತತ ಮಳೆಯ ಪರಿಣಾಮವಾಗಿ ಕರ್ನಾಟಕದ ಹಲವು ಪ್ರಮುಖ ಜಲಾಶಯಗಳು ತುಂಬಿ ಹರಿಯುವ ಹಂತಕ್ಕೇರಿವೆ. ಕೆಲವೆಡೆ ನೀರಿನ ಮಟ್ಟ ಗರಿಷ್ಠ ಮಟ್ಟ ತಲುಪಿದ್ದು, ಇನ್ನೂ ಕೆಲವು ಜಲಾಶಯಗಳು ಭರ್ತಿಯ ಅಂಚಿನಲ್ಲಿ ನಿಂತಿವೆ. ಸೆಪ್ಟೆಂಬರ್ 28ರ ಪರಿಸ್ಥಿತಿಯಂತೆ ರಾಜ್ಯದ ಕೆ.ಆರ್.ಎಸ್, ಕಬಿನಿ, ಆಲಮಟ್ಟಿ, ತುಂಗಭದ್ರಾ

ಕಲ್ಯಾಣ ಕರ್ನಾಟಕದಲ್ಲಿ ವರುಣನ ಆರ್ಭಟ: ಪ್ರವಾಹ ಪೀಡಿತ ಪ್ರದೇಶಗಳಿಗೆ ಸಚಿವ ಪ್ರಿಯಾಂಕ್​ ಖರ್ಗೆ ಭೇಟಿ

ಕಳೆದ ಮೂರು ದಿನಗಳಿಂದ ಬೆನ್ನುಟ್ಟುತ್ತಿರುವ ಮಳೆರಾಯನ ಆರ್ಭಟಕ್ಕೆ ಉತ್ತರ ಕರ್ನಾಟಕ ಜನ ಕಂಗಾಲಾಗಿದ್ದಾರೆ. ಕಲಬುರಗಿ, ಯಾದಗಿರಿ, ಬೀದರ್, ವಿಜಯಪುರ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಸುರಿಯುತ್ತಿರುವ ಭಾರೀ ಮಳೆಯು ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಳಿಸಿದೆ. ಪ್ರವಾಹ ಹಾಗೂ ಮಳೆಯಿಂದಾಗಿ ಜಾನುವಾರುಗಳ ನಷ್ಟವೂ ಸಂಭವಿಸಿದೆ.

ರಾಜ್ಯದಲ್ಲಿ ಭಾರೀ ಮಳೆ ಎಚ್ಚರಿಕೆ: ಯಾವೆಲ್ಲ ಜಿಲ್ಲೆಗಳಿಗೆ ಅಲರ್ಟ್​?

ರಾಜ್ಯದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮತ್ತೆ ಮಳೆ ಅಬ್ಬರಿಸಲು ಸಜ್ಜಾಗಿದೆ. ಹವಾಮಾನ ಇಲಾಖೆ ಶನಿವಾರದಿಂದ (ಸೆಪ್ಟೆಂಬರ್ 27) ಮುಂದಿನ ಮೂರು ದಿನಗಳಿಗೆ ವ್ಯಾಪಕ ಮಳೆಯ ಮುನ್ಸೂಚನೆ ನೀಡಿದ್ದು, ಆರೆಂಜ್‌ ಅಲರ್ಟ್‌ ಘೋಷಿಸಿದೆ. ಬಂಗಾಳ ಕೊಲ್ಲಿ ಹಾಗೂ ಒಡಿಶಾ ಕರಾವಳಿಯಲ್ಲಿ ವಾಯುಭಾರ ಕುಸಿತ

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಸೆ.27ರಿಂದ ಮತ್ತೆ ಮಳೆ ಆರ್ಭಟ

ಸೆಪ್ಟೆಂಬರ್ 27ರಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಭಾಗದಲ್ಲಿ ಗಾಳಿಯ ವೇಗ ಹೆಚ್ಚಿರಲಿದೆ. ಕರಾವಳಿ ಹಾಗೂ ಒಳನಾಡು ವಿವಿಧ ಜಿಲ್ಲೆಗಳಲ್ಲಿ

ಉತ್ತರಾಖಂಡದಲ್ಲಿ ಭೀಕರ ಮಳೆ, ಪ್ರವಾಹ: ಹಲವರು ನಾಪತ್ತೆ, ಭೂಕುಸಿತ, ಕೊಚ್ಚಿ ಹೋದ ರಸ್ತೆಗಳು

ಉತ್ತರಾಖಂಡದ ಹಲವೆಡೆ ಮೇಘಸ್ಫೋಟದ ಪರಿಣಾಮ ಏಕಾಏಕಿ​ ಪ್ರವಾಹ ಉಂಟಾಗಿದ್ದು, ಭೂಕುಸಿತಗಳು ಸಂಭವಿಸಿವೆ. ಭಾರಿ ಮಳೆ ಮತ್ತು ಪ್ರವಾಹಕ್ಕೆ ರಸ್ತೆಗಳು ಕೊಚ್ಚಿಕೊಂಡು ಹೋಗಿದ್ದ, ಮನೆಗಳು ಕುಸಿದಿವೆ. ಅನೇಕರು ನಾಪತ್ತೆಯಾಗಿದ್ದಾರೆ. ಕಳೆದ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಹಿಮಾಲಯದ ನದಿಗಳು ಉಕ್ಕಿ ಹರಿಯುತ್ತಿದ್ದು, ಹಲವು

ಮಂಡಿಯಲ್ಲಿ ಮಳೆಗೆ ಭೂಕುಸಿತ: ಆರು ಮಂದಿ ಸಾವು

ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯ ಸುಂದರ್‌ನಗರ ಉಪವಿಭಾಗದ ಜಂಗಮ್ ಬಾಗ್‌ನಲ್ಲಿ ವ್ಯಾಪಕ ಮಳೆಯಿಂದಾಗಿ ಭೂಕುಸಿತ ಸಂಭವಿಸಿ ಬಾಲಕಿ ಸೇರಿದಂತೆ ಕನಿಷ್ಠ ಆರು ಜನ ಮೃತಪಟ್ಟಿದ್ದು, ಹಲವರು ಅವಶೇಷಗಳಡಿ ಸಿಲುಕಿದ್ದಾರೆ ಎನ್ನಲಾಗಿದೆ. ಗುಡ್ಡದ ದೊಡ್ಡ ಭಾಗ ಹಠಾತ್ತನೆ ಕುಸಿದು ಎರಡು ಮನೆಗಳು ನಜ್ಜುಗುಜ್ಜಾಗಿದ್ದು,

ಗಾಳಿ ಸಹಿತ ಮಳೆ: ಕರ್ನಾಟಕ ಕರಾವಳಿಗೆ ರೆಡ್‌ ಅಲರ್ಟ್‌

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 5ರವರೆಗೆ ಭಾರಿ ಗಾಳಿಯೊಂದಿಗೆ ವ್ಯಾಪಕ ಮಳೆಯಾಗಲಿದ್ದು, ಹವಾಮಾನ ಇಲಾಖೆ ಆ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ತೀವ್ರ ಮಳೆಯಾಗುವ ಜೊತೆಗೆ ಗಂಟೆಗೆ 30-40 ಕಿ.ಮೀ. ವೇಗದಲ್ಲಿ

ರಾಜ್ಯದಲ್ಲಿ ಏಳು ದಿನ ಭಾರಿ ಮಳೆ, ಕರಾವಳಿಯಲ್ಲಿ ವ್ಯಾಪಕ ವರ್ಷಧಾರೆ

ರಾಜ್ಯದಲ್ಲಿ ಏಳು ದಿನ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ, ಬೆಂಗಳೂರಿನಲ್ಲಿ ಕೆಲವು ಕಡೆ ಸೆಪ್ಟೆಂಬರ್ 4 ರ ವರೆಗೆ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ತಜ್ಞ ಸಿ ಎಸ್ ಪಾಟೀಲ್ ಮಾಹಿತಿ ನೀಡಿದ್ದಾರೆ. ಕರಾವಳಿ