Menu

ರಷ್ಯಾದ ತೈಲ ಖರೀದಿಸಲ್ಲವೆಂದು ಮೋದಿ ಹೇಳಿದ್ದಾರೆ, ಖರೀದಿಸಿದ್ರೆ ಭಾರಿ ಸುಂಕ: ಟ್ರಂಪ್‌ ಬೆದರಿಕೆ

ನಾನು ರಷ್ಯಾದ ತೈಲ ಖರೀದಿ ಮಾಡುವುದಿಲ್ಲ ಎಂದು ಭಾರತದ ಪ್ರಧಾನಿ ನರೇಂದ್ರ ಮೋದಿ ನನಗೆ ವೈಯಕ್ತಿಕವಾಗಿ ಭರವಸೆ ನೀಡಿದ್ದಾರೆ. ಒಂದು ವೇಳೆ ಅವರು ರಷ್ಯಾದಿಂದ ತೈಲ ಖರೀದಿಯನ್ನು ಮುಂದುವರಿಸಿದರೆ ಭಾರಿ ಪ್ರಮಾಣದ ಸುಂಕಗಳನ್ನು ಪಾವತಿಸಬೇಕಾಗುತ್ತದೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌  ಬೆದರಿಕೆಯೊಡ್ಡಿದ್ದಾರೆ. ಏರ್ ಫೋರ್ಸ್ ಒನ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಟ್ರಂಪ್ ಈ ಎಚ್ಚರಿಕೆ ನೀಡಿದ್ದಾರೆ. ಟ್ರಂಪ್‌ ಮತ್ತು ಪ್ರಧಾನಿ ಮೋದಿ ನಡುವಿನ ಯಾವುದೇ ಇತ್ತೀಚಿನ ಸಂಭಾಷಣೆಯ ಬಗ್ಗೆ ತಿಳಿದಿಲ್ಲ