Sunday, September 13, 2026
Menu

ಹೆಲ್ಮೆಟ್‌ ಧರಿಸದ ಬೈಕ್‌ ಸವಾರ ಅಪಘಾತಕ್ಕೆ ಬಲಿ: ಪರಿಹಾರ ಮೊತ್ತ ಕಡಿತಗೊಳಿಸಿದ ಹೈಕೋರ್ಟ್‌

ಅಪಘಾತ ಪ್ರಕರಣವೊಂದರ ವಿಚಾರಣೆ ನಡೆಸಿರುವ ಹೈಕೋರ್ಟ್‌, ಅಪಘಾತ ವೇಳೆ ಬೈಕ್‌ ಸವಾರ ಹೆಲ್ಮೆಟ್‌ ಧರಿಸದಿದ್ದ ಕಾರಣ ಪರಿಗಣಿಸಿ ಪರಿಹಾರ ಮೊತ್ತದಲ್ಲಿ ಏಳೂವರೆ ಲಕ್ಷ ರೂ.. ಕಡಿತಗೊಳಿಸಿ ಆದೇಶಿಸಿದೆ.  ಹೆಲ್ಮೆಟ್‌ ಧರಿಸದೆ ಇರುವುದು ಬೈಕ್‌ ಸವಾರನ ನಿರ್ಲಕ್ಷ್ಯವೆಂದು ಹೇಳಿದ ಕೋರ್ಟ್‌, ನಿಗದಿಪಡಿಸಿದ ಒಟ್ಟು 19,64,400 ರೂ.. ಪರಿಹಾರದಲ್ಲಿ ಶೇ.40ರಷ್ಟು ಅಂದರೆ 7,85,760 ರೂ. ಕಡಿತಗೊಳಿಸಿದೆ. ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಚಿಕ್ಕಂದವಾಡಿ ಗ್ರಾಮದ ನಿವಾಸಿ ಅವಿನಾಶ್‌ (23) ಅಪಘಾತದಿಂದಾಗಿ 2019ರಲ್ಲಿ ಮೃತಪಟ್ಟಿದ್ದು, ಕುಟುಂಬದವರಿಗೆ