Wednesday, September 23, 2026
Menu

ಹೆಸರುಘಟ್ಟ ನೈಸರ್ಗಿಕ ಹುಲ್ಲುಗಾವಲು ಸಂರಕ್ಷಣೆಗೆ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು7: ಸರ್ಕಾರ ಕೆಲವು ತಿಂಗಳ ಹಿಂದೆ ಸಂರಕ್ಷಿತ ಹುಲ್ಲುಗಾವಲು ಎಂದು ಘೋಷಿಸಿರುವ ಹೆಸರುಘಟ್ಟ ಕೆರೆ ಸೇರಿದಂತೆ 5678 ಎಕರೆ ಹುಲ್ಲುಗಾವಲು ಪ್ರದೇಶಕ್ಕೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರಿಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು. ವರ್ಷದಲ್ಲಿ 10 ಲಕ್ಷ ಜನರಿಗೆ ನೀರು ಪೂರೈಸುವ ಸಾಮರ್ಥ್ಯವಿರುವ ಹೆಸರುಘಟ್ಟ ಕೆರೆಗೆ ಗೃಹ ತ್ಯಾಜ್ಯವಾಗಲೀ, ಕೈಗಾರಿಕಾ ತ್ಯಾಜ್ಯವಾಗಲೀ ಸೇರದಂತೆ ಎಚ್ಚರಿಕೆ ವಹಿಸಬೇಕು, ಅರ್ಕಾವತಿ ನದಿ ಮಲಿನವಾಗದಂತೆ ಎಚ್ಚರಿಕೆ ವಹಿಸಬೇಕು

ಹೆಸರಘಟ್ಟದಲ್ಲಿ ಕ್ಯೂ-ಸಿಟಿಗೆ 6.17 ಎಕರೆ ಜಾಗ ಮಂಜೂರು

ಅತ್ಯಾಧುನಿಕ ಪ್ರಯೋಗಾಲಯಗಳು, ಸ್ಟಾರ್ಟ್‌ಅಪ್‌ಗಳಿಗೆ ಇನ್ಕ್ಯೂಬೇಷನ್‌ ಸೌಲಭ್ಯಗಳು ಹಾಗೂ ಕೈಗಾರಿಕಾ-ಶೈಕ್ಷಣಿಕ ಸಹಭಾಗಿತ್ವಕ್ಕೆ ಅಗತ್ಯವಾದ ಮೂಲಸೌಕರ್ಯಗಳನ್ನು ಹೊಂದಿರುವ ಕ್ಯೂ-ಸಿಟಿ (ಕ್ವಾಂಟಮ್‌ ಸಿಟಿ) ಸ್ಥಾಪನೆಗೆ ರಾಜ್ಯ ಸರ್ಕಾರ ಹೆಸರುಘಟ್ಟದಲ್ಲಿ 6.17 ಎಕರೆ ಜಾಗವನ್ನು ಮಂಜೂರು ಮಾಡಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ