Thursday, September 17, 2026
Menu

ಬಾಗಲಕೋಟೆ ಹೆಸ್ಕಾಂ ನಿರ್ಲಕ್ಷ್ಯ: ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾವು

ಬಾಗಲಕೋಟೆಯ ನವನಗರದ 49ನೇ ಸೆಕ್ಟರ್‌ನಲ್ಲಿ ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ರಸ್ತೆ ಬದಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ರಾಜಸ್ಥಾನ ಮೂಲದ ವ್ಯಕ್ತಿಯೊಬ್ಬರು ಮೃತಪಟ್ಟ ಹೃದಯವಿದ್ರಾವಕ ಘಟನೆ ನಡೆದಿದೆ. ಕೆಲವು ದಿನಗಳಿಂದ ನೆಲಕ್ಕೆ ಬಿದ್ದುಕೊಂಡಿದ್ದ ವಿದ್ಯುತ್ ತಂತಿ ತುಳಿದು ಈ ಸಾವು ಸಂಭವಿಸಿದೆ. ನೆಲಕ್ಕೆ ಬಿದ್ದಿದ್ದ ತಂತಿ ತೆಗೆದುಹಾಕುವಂತೆ ಹಲವು ಬಾರಿ ಮನವಿ ಮಾಡಿದ್ದರೂ ಹೆಸ್ಕಾಂ ಸಿಬ್ಬಂದಿ ಕಡೆಗಣಿಸಿದ್ದರು ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೀದಿ ಬದಿಯ ವಿದ್ಯುತ್ ದೀಪಗಳ ಸ್ವಿಚ್