High command
ಗೊಂದಲಗಳಿಗೆ ಶೀಘ್ರ ತೆರೆ ಎಳೆಯಲು ಹೈಕಮಾಂಡ್ ಗೆ ಸಿಎಂ ಸಲಹೆ
ಬೆಂಗಳೂರು: ಅಧಿಕಾರ ಹಸ್ತಾಂತರ ಸೇರಿದಂತೆ ರಾಜ್ಯದಲ್ಲಿ ಉಂಟಾಗಿರುವ ಎಲ್ಲ ಗೊಂದಲಗಳಿಗೆ ತೆರೆ ಎಳೆಯಲು ಹೈಕಮಾಂಡ್ ತೀರ್ಮಾನಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆಯನ್ನು ಪಕ್ಷದ ವರಿಷ್ಠರು ಸೂಚನೆ ನೀಡಿದಾಗ ಕೈಗೊಳ್ಳಲಾಗುವುದು, ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡುವ ಇರಾದೆ ಸದ್ಯಕ್ಕೆ ಇಲ್ಲ ಎಂದು ತಿಳಿಸಿದರು. ಪಕ್ಷದ ಶಾಸಕರಿಗೆ ಅವರ ಅಭಿಪ್ರಾಯ ತಿಳಿಸುವ ಸ್ವಾತಂತ್ರ್ಯ ಇದೆ. ಪಕ್ಷರ ವರಿಷ್ಠರು ಏನು ಹೇಳುತ್ತಾರೆ
ಕೈ ನಾಯಕರ “ಸಿಎಂ” ಬಹಿರಂಗ ಹೇಳಿಕೆ: ವರದಿ ಕೇಳಿದ ಹೈ ಕಮಾಂಡ್
ನೀಡಿರುವ ಎಚ್ಚರಿಕೆ ನಡುವೆಯೂ ಬಹಿರಂಗ ಹೇಳಿಕೆ ನೀಡುತ್ತಿರುವ ಕರ್ನಾಟಕದ ಕಾಂಗ್ರೆಸ್ ಸಚಿವರಿಗೆ ಸಂಬಂಧಿಸಿದಂತೆ ವರದಿಯನ್ನು ಹೈಕಮಾಂಡ್ ಕೇಳಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ತಿಳಿಸಿದ್ದು, ಸಚಿವ ಸತೀಶ್ ಜಾರಕಿಹೊಳಿ, ತಮ್ಮ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಸಮಜಾಯಿಷಿ ನೀಡಿದ್ದಾರೆ. ಹೈಕಮಾಂಡ್



