High Court bail
ನ್ಯಾಯಾಂಗ ಬಂಧನ ಮುಗಿದರೂ ಹಾಜರುಪಡಿಸದ ಪೊಲೀಸ್: ಆರೋಪಿಗೆ ಜಾಮೀನು ನೀಡಿದ ಹೈಕೋರ್ಟ್
ನ್ಯಾಯಾಂಗ ಬಂಧನದ ಅವಧಿ ಮುಗಿದ ನಂತರ ಪೊಲೀಸರು ಕಸ್ಟಡಿ ವಿಸ್ತರಣೆಗೆ ಕೋರದ ಮತ್ತು ಬಂಧಿತನನ್ನು ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದೆ ಹಾಜರುಪಡಿಸದ ಕಾರಣ ಪ್ರಕರಣವೊಂದರಲ್ಲಿ ಯುವಕನಿಗೆ ಹೈಕೋರ್ಟ್ ಜಾಮೀನು ನೀಡಿದೆ. ನ್ಯಾಯಾಂಗ ಬಂಧನದಲ್ಲಿದ್ದ ಮಂಡ್ಯ ಹುಬ್ಬನಹಳ್ಳಿ ಗ್ರಾಮದ ಎಚ್.ವಿ.ಚರಣ್ ಜಾಮೀನು ಕೋರಿ ಸಲ್ಲಿಸಿದ್ದ ಮೇಲ್ಮನವಿ ಪರಿಗಣಿಸಿ ನ್ಯಾಯಮೂರ್ತಿ ಜಿ.ಬಸವರಾಜ ಅವರಿದ್ದ ಜಾಮೀನು ನೀಡಿದೆ. ಮದುವೆಯಾಗುವುದಾಗಿ ಭರವಸೆ ನೀಡಿ ಲೈಂಗಿಕ ಸಂಬಂಧ ಬೆಳಸಿ ನಂತರ ಬೇರೆ ಜಾತಿಗೆ ಸೇರಿದ್ದಾರೆಂಬ ಕಾರಣಕ್ಕೆ ಮದುವೆಯನ್ನು ನಿರಾಕರಿಸಿದ


