High Court fine
ಸುಳ್ಳು ಕೇಸ್ ದಾಖಲಿಸಿದ್ದ ಬೆಂಗಳೂರಿನ ಮಹಿಳೆಗೆ ಹೈಕೋರ್ಟ್ನಿಂದ ಎರಡು ಲಕ್ಷ ರೂ. ದಂಡ
ಮಗ ಕಾಣೆಯಾಗಿದ್ದಾನೆ ಎಂದು ಸುಳ್ಳು ಕೇಸ್ ದಾಖಲಿಸಿದ್ದ ಬೆಂಗಳೂರಿನ ಮಹಿಳೆಗೆ ಹೈಕೋರ್ಟ್ ಎರಡು ಲಕ್ಷ ರೂ. ದಂಡ ವಿಧಿಸಿದೆ. ಎರಡು ವಾರದಲ್ಲಿ ದಂಡ ಕಟ್ಟದಿದ್ದರೆ ನ್ಯಾಯಾಂಗ ನಿಂದನೆ ಕೇಸ್ ಹಾಕುವುದಾಗಿ ಎಚ್ಚರಿಕೆ ನೀಡಿದೆ. ಪೊಲೀಸರ ಮೇಲಿನ ಕೋಪಕ್ಕೆ ಬೆಂಗಳೂರಿನ ಇಂದಿರಾನಗರ ನಿವಾಸಿ ತಾಯಿ ಮಹೇಶ್ವರಿ ಎಂಬವರು ಮಗ ಕೃಪಲಾನಿ ಕಾಣೆಯಾಗಿದ್ದಾನೆ ಎಂದು ಸುಳ್ಳು ಕೇಸ್ ಹಾಕಿದ್ದರು. ಪಕ್ಕದ ಮನೆಯವರು ರಾತ್ರಿ ಗಲಾಟೆ ಮಾಡುತ್ತಾರೆ, ಗಾಂಜಾ ಮಾರುತ್ತಾರೆಂದು ಕೃಪಲಾನಿ ದೂರು ನೀಡಿದ್ದ.


