High Court Muda
ಮುಡಾ ಹಗರಣ ಸಿಬಿಐಗಿಲ್ಲ: ಸಿದ್ದರಾಮಯ್ಯಗೆ ರಿಲೀಫ್ ನೀಡಿದ ಹೈಕೋರ್ಟ್
ಮುಡಾದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಹೈಕೋರ್ಟ್ನ ಧಾರವಾಡ ಪೀಠ ತೀರ್ಪು ಪ್ರಕಟಿಸಿದ್ದು, ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾ ಗೊಳಿಸಿದೆ. ಲೋಕಾಯುಕ್ತ ಪೊಲೀಸರ ತನಿಖೆ ಅಸಮರ್ಪಕ ಎನ್ನುವುದಕ್ಕೆ ಕಾರಣಗಳಿಲ್ಲ, ಲೋಕಾಯುಕ್ತ ತನಿಖೆ ಪಕ್ಷಪಾತದಿಂದ ಕೂಡಿದೆ ಎಂಬುದಕ್ಕೆ ಆಧಾರಗಳಿಲ್ಲ. ಲೋಕಾಯುಕ್ತ ಸ್ವತಂತ್ರ ತನಿಖಾ ಸಂಸ್ಥೆಯಾಗಿದೆ ಎಂದು ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಹೇಳಿದ್ದು ಪ್ರಕರಣವನ್ನು ಸಿಬಿಐಗೆ ನೀಡಲು ನಿರಾಕರಿಸಿ ಆದೇಶ ಹೊರಡಿಸಿದೆ. ಈ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ