Menu

ವಾಹನ ಅಪಘಾತದಲ್ಲಿ ಗಾಯಗೊಂಡವರಿಗೆ ನಗದು ರಚಿತ ಚಿಕಿತ್ಸೆ ಘೋಷಿಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ!

ದೇಶಾದ್ಯಂತ ವಾಹನ ಅಪಘಾತದಲ್ಲಿ ಗಾಯಗೊಂಡವರಿಗೆ ಉಚಿತ ಚಿಕಿತ್ಸೆ ನೀಡುವ ಯೋಜನೆಯನ್ನು ಮಾರ್ಚ್ ನಿಂದ ಆರಂಭಿಸಲಾಗುವುದು ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. ದೆಹಲಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಪ್ರಸ್ತುತ ಅಪಘಾತಕ್ಕೊಳಗಾದ ವ್ಯಕ್ತಿಗೆ ಗರಿಷ್ಠ 1.5 ಲಕ್ಷ ರೂ. ದೊರೆಯುತ್ತಿದೆ. ಖಾಸಗಿ ಸಂಸ್ಥೆಯೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಿದ್ದು, ಪೊಲೀಸರು, ವೈದ್ಯರು ಹಾಗೂ ಸರ್ಕಾರಿ ಸಂಘಟನೆಗಳ ಸಹಯೋಗದೊಂದಿಗೆ ಅಪಘಾತಕ್ಕೊಳಗಾದವರ ಸಂಪೂರ್ಣ ವೆಚ್ಚ ಭರಿಸುವ ಯೋಜನೆ ಜಾರಿಗೆ ತರಲಾಗುತ್ತಿದೆ