Hindu organization
ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲ ಹಿಂದೂ ಸಂಘಟನೆಗಳ ಕಾರ್ಯಕರ್ತರ ಹತ್ಯೆ: ಆರ್.ಅಶೋಕ
ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲ ಹಿಂದೂ ಸಂಘಟನೆಗಳ ಕಾರ್ಯಕರ್ತರ ಹತ್ಯೆಯಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ಹೊರ ಹಾಕಿದರು. ಮಡಿಕೇರಿಯಲ್ಲಿ ನಡೆದ ಬಿಜೆಪಿ ಜನಾಕ್ರೋಶ ಹೋರಾಟದಲ್ಲಿ ಅವರು ಮಾತನಾಡಿದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲ ಹಿಂದೂ ಸಂಘಟನೆಗಳ ಕಾರ್ಯಕರ್ತರ ಹತ್ಯೆಯಾಗಿದೆ. ಪ್ರಶಾಂತ್ ಪೂಜಾರಿ, ಆರ್‌ಎಸ್‌ಎಸ್ ರಾಜು, ರಾಜೇಶ್ ಕೋಟ್ಯಾನ್, ಪ್ರವೀಣ್ ಪೂಜಾರಿ, ಚರಣ್ ಪೂಜಾರಿ, ವಿಶ್ವನಾಥ್ ಹೀಗೆ ಅನೇಕ ಹಿಂದೂ ಕಾರ್ಯಕರ್ತರ ಕೊಲೆ ಪಿಎಫ್‌ಐ, ಎಸ್‌ಡಿಪಿಐ ಮೊದಲಾದ ಮುಸ್ಲಿಂ ಸಂಘಟನೆಗಳಿಂದ ನಡೆದಿದೆ.


