Menu

ನನ್ನ ರಕ್ಷಣೆಗೆ, ಮನಸ್ಸಿನ ನೆಮ್ಮದಿಗೆ ಹೋಮ: ಡಿಸಿಎಂ ಶಿವಕುಮಾರ್

ನನ್ನ ರಕ್ಷಣೆಗಾಗಿ, ಮನಸ್ಸಿನ ನೆಮ್ಮದಿಗೆ, ಸಮಾಧಾನಕ್ಕಾಗಿ ಹೋಮ ಮಾಡಿಸಿದ್ದೇನೆ. ನಾನು ಪ್ರತಿದಿನವೂ ಪೂಜೆ, ಹೋಮ, ದೇವರ ದರ್ಶನ ಮಾಡುವ ವ್ಯಕ್ತಿ ಎಂದು ಡಿಸಿಎಂ ಶಿವಕುಮಾರ್‌ ಹೇಳಿದ್ದಾರೆ. ವೈಕುಂಠ ಏಕಾದಶಿಯ ಪ್ರಯುಕ್ತ ಮಲ್ಲೇಶ್ವರದ ವೆಂಕಟೇಶ್ವರ ದೇಗುಲದಲ್ಲಿ ದೇವರ ದರ್ಶನದ ಬಳಿಕ ಶಿವಕುಮಾರ್  ಮಾಧ್ಯಮಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು. ತಮಿಳುನಾಡಿನ ದೇವಸ್ಥಾನಗಳಲ್ಲಿ ಹೋಮ ಮಾಡಿಸಿರುವ ಬಗ್ಗೆ ಕೇಳಿದಾಗ, ದೇವರ ಮೇಲೆ ನಂಬಿಕೆಯಿಟ್ಟಿರುವ ವ್ಯಕ್ತಿ ನಾನು. ನನಗೆ ಧರ್ಮ, ದೇವರು, ನಮ್ಮ ಆಚರಣೆಗಳ ಮೇಲೆ