Menu

ಶಿಶುಗಳ ಕಳ್ಳಸಾಗಣೆ ನಡೆದರೆ ಆಸ್ಪತ್ರೆಗಳ ಪರವಾನಗಿ ಅಮಾನತು: ಸುಪ್ರೀಂ

ಆಸ್ಪತ್ರೆಯಿಂದ ನವಜಾತ ಶಿಶುಗಳ ಕಳ್ಳಸಾಗಣೆ ನಡೆದರೆ ಅಂತಹ ಆಸ್ಪತ್ರೆಗಳ ಪರವಾನಗಿಯನ್ನು ಕೂಡಲೇ ಅಮಾನತುಗೊಳಿಸಬೇಕು ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ಮಕ್ಕಳ ಕಳ್ಳಸಾಗಣೆ ತಡೆಗಟ್ಟಲು ಮತ್ತು ಮಕ್ಕಳ ಕಳ್ಳಸಾಗಣೆ ಅಪರಾಧಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ನಿಭಾಯಿಸಲು ರಾಜ್ಯಗಳು ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ನಿಗದಿಪಡಿಸಿದೆ. ಉತ್ತರಪ್ರದೇಶದ ಮಕ್ಕಳ ಕಳ್ಳಸಾಗಣೆ ಪ್ರಕರಣದ ಆರೋಪಿಗಳು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳ ವಿಚಾರಣೆಯ ಸಂದರ್ಭದಲ್ಲಿ ನ್ಯಾ.ಜೆ.ಬಿ ಪಾರ್ದ್ರಿವಾಲಾ ನೇತೃತ್ವದ ದ್ವಿಸದಸ್ಯ ಪೀಠ ಈ ನಿರ್ದೇಶನ ನೀಡಿದೆ. ಪ್ರಕರಣ