Menu

ಕೋಗಿಲು ಅಕ್ರಮ ಶೆಡ್‌ಗಳ ಧ್ವಂಸ: ಬೈಯ್ಯಪ್ಪನಹಳ್ಳಿಯಲ್ಲಿ ಮನೆ ಹಂಚಿಕೆ, ಇದೊಂದು ಪ್ರಕರಣಕ್ಕೆ ಮಾತ್ರ ಅನ್ವಯ: ಸಿಎಂ

ಕೋಗಿಲು ಬಡಾವಣೆಯಲ್ಲಿ  ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ  ನಿರ್ಮಾಣ ಮಾಡಿದ್ದ  167 ಶೆಡ್‌ಗಳನ್ನು ತೆರವುಗೊಳಿಸಲಾಗಿತ್ತು. ಅವರೆಲ್ಲರಿಗೂ ನೋಟಿಸ್ ನೀಡಿ, ಸರ್ಕಾರದ ಜಾಗವಾಗಿದ್ದು ತೆರವು ಮಾಡುವಂತೆ ಅವರ ಗಮನಕ್ಕೂ ತರಲಾಗಿತ್ತು, ಆದರೂ  ಖಾಲಿ ಮಾಡಿರಲಿಲ್ಲ. ಅವರಿಗೆಲ್ಲ ಬೈಯ್ಯಪ್ಪನಹಳ್ಳಿಯಲ್ಲಿ ಮನೆ ಹಂಚಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಸತಿ ಸಚಿವರಾದ ಜಮೀರ್ ಅಹ್ಮದ್ ಖಾನ್ ಮತ್ತು ನನ್ನ ರಾಜಕೀಯ ಕಾರ್ಯದರ್ಶಿಯಾದ ನಸೀರ್ ಅಹ್ಮದ್ ಅವರನ್ನು ಸ್ಥಳಕ್ಕೆ ಕಳಿಸಿಕೊಟ್ಟಿದ್ದೆ.  ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌  ಅಧಿಕಾರಿಗಳ