House discussion
ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಕರಿಮಣಿ ಮಾಲೀಕ ಯಾರು ಎನ್ನುವುದು ಕೀಳು ಅಭಿರುಚಿಯ ಪ್ರಯೋಗ
ಅಧಿಕಾರಕ್ಕಾಗಿ ಅಧಿಕಾರ ಮಾಡುವುದಲ್ಲ. ಜನರ ಕಲ್ಯಾಣಕ್ಕೆ ಅಧಿಕಾರ ಬಳಕೆಯಾಗಬೇಕು ಎನ್ನುವ ಕಾಳಜಿಯ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಇವೆಲ್ಲವೂ ವಾಸ್ತವ ಕಾರ್ಯಕ್ರಮಗಳಾಗಿರುವುದರಿಂದ ರಾಜ್ಯಪಾಲರು ಶ್ಲಾಘಿಸಿದ್ದಾರೆ. ಸದನದ ಚರ್ಚೆಗಳು ಬಸವಣ್ಣ ಹೇಳಿದಂತೆ ನುಡಿದರೆ ಮುತ್ತಿನ ಹಾರದಂತಿರಬೇಕು, ನುಡಿದರೆ ಲಿಂಗ ಮೆಚ್ಚಿ ಅಹುದಹುದೆನ್ನುವಂತಿರಬೇಕು. ಸದನದಲ್ಲಿ ಮಾತನಾಡಿದರೆ ಜನರ ಅಭಿರುಚಿಯನ್ನು ಹೆಚ್ಚಿಸಬೇಕು. ವಿದ್ಯಾವಂತರು ಸದನಕ್ಕೆ ಬರುತ್ತಿರು ವುದರಿಂದ ಚರ್ಚೆ ಅರ್ಥ ಪೂರ್ಣ, ಆರೋಗ್ಯಕರವಾಗಿರಬೇಕು. ಜನರೂ, ಸದನವೂ ಇದನ್ನೇ ನಿರೀಕ್ಷಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸಭೆಯಲ್ಲಿ


