Hubli Contractor
ಹೂವಿನಹಡಗಲಿ ಲಾಡ್ಜ್‌ನಲ್ಲಿ ಹುಬ್ಬಳ್ಳಿಯ ಗುತ್ತಿಗೆದಾರ ಆತ್ಮಹತ್ಯೆ
ಹುಬ್ಬಳ್ಳಿ ಮೂಲದ ಗುತ್ತಿಗೆದಾರ ಹಾಗೂ ಹೋಟೆಲ್ ಉದ್ಯಮಿ ಆನಂದ ಉಮೇಶ್ ಹೆಗಡೆ (40) ಎಂಬವರು ವಿಜಯನಗರ ಜಿಲ್ಲೆಯ ಹೂವಿನಹಡಗಲಿ ಪಟ್ಟಣದ ದಾಕ್ಷಾಯಿಣಿ ಲಾಡ್ಜ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆನಂದ ಹುಬ್ಬಳ್ಳಿಯ ಭವಾನಿ ನಗರದ ನಿವಾಸಿಯಾಗಿದ್ದು, ಪತ್ನಿ, ಪುತ್ರ ಮತ್ತು ಪುತ್ರಿ ಇದ್ದಾರೆ. ಅವರುಟೆಂಡರ್ ಸಂಬಂಧಿತ ಕೆಲಸಕ್ಕಾಗಿ ಹುಬ್ಬಳ್ಳಿಯಿಂದ ಹೂವಿನಹಡಗಲಿ ಪಟ್ಟಣಕ್ಕೆ ಆಗಮಿಸಿದ್ದರು. ದಾಕ್ಷಾಯಿಣಿ ಲಾಡ್ಜ್‌ನ 17ನೇ ಕೊಠಡಿಯ ತಂಗಿದ್ದ ಅವರು ರಾತ್ರಿ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ


