Hubli-Dharwad
ಹುಬ್ಬಳ್ಳಿ-ಧಾರವಾಡದಲ್ಲಿ ಧಾರಾಕಾರ ಮಳೆ: ಸಿಡಿಲಿಗೆ ವ್ಯಕ್ತಿ ಬಲಿ
ಬಿಸಿಲಿನ ಝಳದಿಂದ ಕಂಗೆಟ್ಟಿದ್ದ ಹುಬ್ಬಳ್ಳಿ-ಧಾರವಾಡದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಧಾರವಾಡದಲ್ಲಿ ಸತತ ಒಂದು ಗಂಟೆ ಧಾರಾಕಾರವಾಗಿ ಮಳೆಯಾಗಿದ್ದು, ರೈತರ ಮೊಗದಲ್ಲಿ ನಗು ತರಿಸಿದೆ. ಮುಂಗಾರು ಬಿತ್ತನೆಗೆ ಭೂಮಿ ಸಜ್ಜು ಮಾಡಿಕೊಳ್ಳಲು ಈ ಮಳೆ ಸಹಕಾರಿಐಆಗಿದೆ. ನಾಲ್ಕು ದಿನಗಳ ಹಿಂದೆ ಈ ಪ್ರದೇಶದಲ್ಲಿ ಸ್ವಲ್ಪ ಪ್ರಮಾಣದಲ್ಲಿ ಮಳೆಯಾಗಿತ್ತು. ಧಾರಾಕಾರ ಮಳೆಯೊಂದಿಗೆ ಸಿಡಿಲು ಅಬ್ಬರಿಸಿದ್ದು, ಮೇಕೆ ಮೇಯಿಸಲು ಹೋಗಿದ್ದ ವೃದ್ಧರೊಬ ಬರು ಸಿಡಿಲಿಗೆ ಬಲಿಯಾಗಿದ್ದಾರೆ. ಧಾರವಾಡ ತಾಲೂಕಿನ ಮುಗದ