hubli police
5 ವರ್ಷದ ಬಾಲಕಿ ಅತ್ಯಾಚಾರಗೈದ ದುಷ್ಕರ್ಮಿ ಎನ್ ಕೌಂಟರ್
ಹುಬ್ಬಳ್ಳಿ: ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಕತ್ತು ಹಿಸುಕಿ ಕೊಲೆ ಮಾಡಿದ ಬಿಹಾರ ಮೂಲದ ವ್ಯಕ್ತಿ ಎನ್ ಕೌಂಟರ್ ಗೆ ಬಲಿಯಾಗಿದ್ದಾನೆ. ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆಟವಾಡುತ್ತಿದ್ದ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ನಂತರ ಆಕೆಯನ್ನು ಕೊಲೆ ಮಾಡಿದ್ದ ಬಿಹಾರ ಮೂಲದ ರಿತೇಶ್ ಕುಮಾರ್ ಪೊಲೀಸರ ಗುಂಡಿಗೆ ಬಲಿಯಾಗಿದ್ದಾನೆ. ಪೊಲೀಸರು ಆರೋಪಿಯನ್ನು ಬಂಧಿಸಲು ಹೋದಾಗ ಪೊಲೀಸರ ಮೇಲೆ ದಾಳಿ ಮಾಡಿ ಪರಾರಿಯಾಗಲು ಯತ್ನಿಸಿದ್ದಾನೆ.