Menu

ಮೈಸೂರು: ಸಂಪಾದಿಸಿದ ಹಣವನ್ನೇ ಕೊಡದ ಪತ್ನಿ ಕೊಲೆಗೆ ಸುಪಾರಿ ನೀಡಿದ ಪತಿ!

ಗಂಡನೊಬ್ಬತಾನು ದುಡಿದು ಸಂಪಾದಿಸಿದ ಹಣವನ್ನು ಹೆಂಡತಿ ತನಗೆ ಕೊಡುತ್ತಿಲ್ಲವೆಂದು ಆಕೆಯನ್ನು  ಕೊಲ್ಲಲು ಸುಪಾರಿ ನೀಡಿರುವ ಪ್ರಕರಣ ಮೈಸೂರಿನ ಬಿಎಂಶ್ರೀ ನಗರದಲ್ಲಿ ನಡೆದಿದೆ. ಗಂಡನ ಈ ಕೃತ್ಯಕ್ಕೆ ಆತನ ಸ್ನೇಹಿತರು ಸಹಕರಿಸಿದ್ದು, ಮೇಟಗಳ್ಳಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಪಾನಿಪುರಿ ವ್ಯಾಪಾರ ಮಾಡುತ್ತಿದ್ದ ಮಹೇಶ್, ಪತ್ನಿ ನಾಗರತ್ನ ಕೊಲೆಗೆ 5 ಲಕ್ಷ ರೂ. ಸುಪಾರಿ ನೀಡಿದ್ದ. ಗಂಡನ ಸಂಪಾದನೆಯನ್ನು ಬಡ್ಡಿಗೆ ಬಿಡುತ್ತಿದ್ದ ಪತ್ನಿಯು ಮಹೇಶ್‌ಗೆ ಹಣ ನೀಡುತ್ತಿರಲಿಲ್ಲ. ಇದರಿಂದ ಅಸಮಾಧಾನಗೊಂಡ ಮಹೇಶ್, ತನಗೆ