Menu

ಐಎಎಫ್ ಅಧಿಕಾರಿ ಮೇಲೆ ಹಲ್ಲೆ: ಆರೋಪಿ ಅರೆಸ್ಟ್

ಬೆಂಗಳೂರು: ಭಾರತೀಯ ಸಶಸ್ತ್ರ ಪಡೆ(ಐಎಎಫ್) ಅಧಿಕಾರಿಯೊಬ್ಬರಿಗೆ ನಗರದಲ್ಲಿ ಅವಾಚ್ಯ ಶಬ್ಧಗಳಿಂದ ನಿಂದಿಸಿ ಹಲ್ಲೆ ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಐಎಎಫ್ ಅಧಿಕಾರಿ ಶಿಲಾಧಿತ್ಯ ಬೋಸ್ ಅವರ ಪತ್ನಿ ಮಧುಮಿತಾ ದತ್ತ ನೀಡಿದ ದೂರಿನ ಮೇರೆಗೆ ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆ‌ರ್ ದಾಖಲಾಗಿದೆ. ಸಿ.ವಿ.ರಾಮನ್‌ ನಗರದ ಗೋಪಾಲನ್ ಗ್ರ್ಯಾಂಡ್ ಮಾಲ್ ಬಳಿ ಕಾರಿನಲ್ಲಿ ಭಾನುವಾರ ಸಂಜೆ ಅಧಿಕಾರಿಯು ಪತ್ನಿಯೊಂದಿಗೆ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದಾಗ ಅಪರಿಚಿತರಿಬ್ಬರು ಅವಾಚ್ಯ ಶಬ್ಧಗಳಿಂದ ನಿಂದಿಸಿ ಹಲ್ಲೆ