Menu

ಅಕ್ರಮ ಆಸ್ತಿ ಆರೋಪ: ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ

ಅಕ್ರಮ ಆಸ್ತಿ ಹೊಂದಿರುವ ಆರೋಪದಡಿ ಶಿವಮೊಗ್ಗ, ಬಳ್ಳಾರಿ, ಬೆಳಗಾವಿಯ ಹಲವು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಿಂದುಳಿದ ವರ್ಗಗಳ ಅಧಿಕಾರಿ ಶೋಭಾ ಅವರ ಶಿವಮೊಗ್ಗದ ನವಲೆ ಬಡಾವಣೆಯ ರೂಂ, ಶಿಕಾರಿಪುರದ ಚನ್ನಕೇಶವ ನಗರದ ಮನೆ, ಶಿಕಾರಿಪುರ ತಾಲೂಕು ತರಲಘಟ್ಟದ ತೋಟದ ಮನೆ, ಸಾಗರ ತಾಲೂಕು ಆಚಾಪುರದ ಮಲ್ನಾಡ್ ಇಂಟರ್ ನ್ಯಾಶನಲ್ ಸ್ಕೂಲ್​ಗಳ ಮೇಲೆ ದಾಳಿ ನಡೆಸಲಾಗಿದೆ. ಬಿಸಿಎಂ ಇಲಾಖೆಯ ಅಧಿಕಾರಿ ರಾಘವೇಂದ್ರ ಅವರ ಶಿವಮೊಗ್ಗದ ಚಾಲುಕ್ಯನಗರ ಬಡಾವಣೆಯ ಮನೆ

ಜಮೀರ್‌ ಆಪ್ತನ 14.38 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ ಮಾಡಿದ ಲೋಕಾಯುಕ್ತ

ವಸತಿ ಸಚಿವ ಜಮೀರ್‌ ಅಹಮ್ಮದ್‌ ಅವರ ಆಪ್ತ ಕಾರ್ಯದರ್ಶಿ, ಸಹಕಾರ ಸಂಘಗಳ ಲೆಕ್ಕ ಪರಿಶೋಧನಾ ವಿಭಾಗದ ನಿರ್ದೇಶಕ ಸರ್ಫ್ರಾಜ್‌ ಖಾನ್‌ ಕಚೇರಿ, ಮನೆಗಳು, ರೆಸಾರ್ಟ್‌ಗಳಿಗೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು 14.38 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ ಮಾಡಿದ್ದಾರೆ.

ಮೈಸೂರಿನ ಹಲವೆಡೆ ಐಟಿ ಅಧಿಕಾರಿಗಳಿಂದ ರೇಡ್‌

ಸರ್ಕಾರದ ಕಾಮಗಾರಿಗಳ ಗುತ್ತಿಗೆ ವಹಿಸಿಕೊಂಡಿರುವ ಕಾಂಟ್ರಾಕ್ಟರ್ ರಾಮಕೃಷ್ಣೇಗೌಡ ಮನೆ, ಎಂ ಪ್ರೋ ಪ್ಯಾಲೇಸ್, ಹೋಟೆಲ್, ಕಲ್ಯಾಣ ಮಂಟಪ ಸೇರಿದಂತೆ ಮೈಸೂರಿನ ಹಲವೆಡೆ ಬುಧವಾರ ಬೆಳಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 10ಕ್ಕೂ ಹೆಚ್ಚು ಐಟಿ ಅಧಿಕಾರಿಗಳ ತಂಡ ದಾಳಿ