Menu

ಆನಂದ್‌ ಸಿಂಗ್‌ ವಿರುದ್ಧದ ಅಕ್ರಮ ಅದಿರು ಗಣಿಗಾರಿಕೆ ಪ್ರಕರಣದ ತೀರ್ಪು ಫೆ.24ಕ್ಕೆ

ಮಾಜಿ ಸಚಿವ ಆನಂದ್‌ ಸಿಂಗ್‌ ವಿರುದ್ಧದ ಅಕ್ರಮ ಅದಿರು ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಅಂತಿಮ ತೀರ್ಪು ಫೆಬ್ರವರಿ 24ಕ್ಕೆ ಪ್ರಕಟವಾಗಲಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪ್ರಕರಣದ ವಿಚಾರಣೆ ನಡೆಸಿದ್ದು, ಅಂತಿಮ ತೀರ್ಪು ಪ್ರಕಟಿಸುವ ದಿನಾಂಕವನ್ನು ಮುಂದೂಡಿದೆ. ನ್ಯಾ. ಸಂತೋಷ್ ಗಜಾನನ ಭಟ್ ಅವರ ಏಕಸದಸ್ಯ ಪೀಠ ಫೆಬ್ರವರಿ 24ಕ್ಕೆ ಅಂತಿಮ ತೀರ್ಪು ಪ್ರಕಟಿಸುವುದಾಗಿ ಹೇಳಿದೆ. ಮಾಜಿ ಸಚಿವ ಆನಂದ್‌ ಸಿಂಗ್‌ ವಿರುದ್ಧ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ