Monday, September 21, 2026
Menu

ಪತ್ನಿಯ ಶೀಲ ಶಂಕಿಸಿ ಕೊಲೆ: ವಿದ್ಯುತ್‌ ಶಾಕ್‌ನಿಂದ ಸಾವು ಎಂದು ನಂಬಿಸಿದ್ದ ಪತಿ

ಹೆಬ್ಬಗೋಡಿ ಪೊಲೀಸ್‌ ಠಾಣೆ ವ್ಯಾಪ್ತಿಯ ಮರಗೊಂಡನಹಳ್ಳಿಯಲ್ಲಿ ಶೀಲ ಶಂಕಿಸಿ ಪತ್ನಿಯನ್ನು ಕತ್ತು ಹಿಸುಕಿ ಕೊಂದು ಪರಾರಿಯಾಗಲು ಯತ್ನಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮರಗೊಂಡನಹಳ್ಳಿಯಲ್ಲಿ ವಾಸವಿದ್ದ ನಿವಾಸಿ ಪ್ರಶಾಂತ್ ಬಂಧಿತ, ಮೂರು ದಿನಗಳ ಹಿಂದೆ ಪತ್ನಿ ರೇಷ್ಮಾಳನ್ನು ಕೊಂದು ತಪ್ಪಿಸಿಕೊಂಡಿದ್ದ. ಮೃತ ರೇಷ್ಮಾಳ ಸೋದರಿ ನೀಡಿದ ದೂರಿನ ಅನ್ವಯ ಆರೋಪಿ ಬಂಧನವಾಗಿದೆ. ಕಲುಬರಗಿ ಜಿಲ್ಲೆಯ ರೇಷ್ಮಾ 5 ವರ್ಷಗಳ ಹಿಂದೆ ಪತಿ ಮೃತಪಟ್ಟ ಬಳಿಕ ಮಗಳ ಜತೆ ನಗರಕ್ಕೆ ಬಂದು ನೆಲೆಸಿದ್ದಳು.