Import Tax
ಔಷಧ ಆಮದು: 100% ಸುಂಕ ಘೋಷಿಸಿದ ಟ್ರಂಪ್, ಭಾರತದ ಆರ್ಥಿಕತೆ ಮೇಲೂ ಪರಿಣಾಮ
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಔಷಧಗಳ ಆಮದಿನ ಮೇಲೆ ಶೇ.100 ಸುಂಕ ಘೋಷಿಸಿದ್ದು, ಅಕ್ಟೋಬರ್ 1ರಿಂದ ಜಾರಿಯಾಗಲಿದೆ. ಅಡುಗೆ ಮನೆ ಪಿಠೋಪಕರಣಗಳ ಮೇಲೆ 50% ಹಾಗೂ ಸ್ನಾನಗೃಹ ಪಿಠೋಪಕರಣ ಆಮದುಗಳ ಮೇಲೆ 30% ಸುಂಕ ಹಾಗೂ ಹೆವಿ ಟ್ರಕ್ಗಳ ಮೇಲೆ 25% ಸುಂಕ ವಿಧಿಸುವುದಾಗಿ ಪ್ರಕಟಿಸಿದ್ದಾರೆ. ಟ್ರಂಪ್ ಅವರ ಈ ಸುಂಕ ಭಾರತದ ಆರ್ಥಿಕತೆಯ ಮೇಲೂ ಪರಿಣಾಮ ಬೀರಬಹುದಾಗಿದ್ದು, ಹಣದುಬ್ಬರಕ್ಕೂ ಕಾರಣವಾಗಬಹುದು ಎಂದು ಆರ್ಥಿಕ ತಜ್ಞರು ಹೇಳುತ್ತಿದ್ದಾರೆ. ಅಕ್ಟೋಬರ್ 1ರಿಂದ


