Menu

ಭಾರತೀಯ ಬೆಸ್ತರ ಮೇಲೆ ಲಂಕಾ ದಾಳಿ: ಭಾರತ ಖಂಡನೆ

ನವದೆಹಲಿ: ಭಾರತೀಯ ಮೀನುಗಾರರನ್ನು ಬಂಧಿಸಲು ಶ್ರೀಲಂಕಾ ನೌಕಾಪಡೆ ಗುಂಡಿನ ದಾಳಿ ನಡೆಸಿದ್ದು ಇಬ್ಬರು ಮೀನುಗಾರರಿಗೆ ಗಾಯಗಳಾಗಿವೆ. 13 ಭಾರತೀಯ ಮೀನುಗಾರರನ್ನು ಬಂಧಿಸುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಗಂಭೀರವಾಗಿ ಗಾಯಗೊಂಡ ಇಬ್ಬರು ಮೀನುಗಾರರು ಜಾಫ್ನಾ ಬೋಧನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಲಂಕಾದಲ್ಲಿರುವ ಭಾರತೀಯ ದೂತಾವಾಸದ ಅಧಿಕಾರಿಗಳು ಸಹಾಯ ನೀಡಲು ಗಾಯಾಳುಗಳನ್ನು ಭೇಟಿ ಮಾಡಿದ್ದಾರೆ. ಗಾಯಗೊಂಡ ಇಬ್ಬರು ಮೀನುಗಾರರಲ್ಲಿ ಒಬ್ಬರು ಕಾರೈಕಲ್ ಮೂಲದವರಾಗಿದ್ದರೆ, ಇನ್ನೊಬ್ಬರು ತಮಿಳುನಾಡಿನವರು ಎಂದು ಅಧಿಕಾರಿ ಪಿಟಿಐಗೆ ತಿಳಿಸಿದ್ದಾರೆ.

4ನೇ ಟೆಸ್ಟ್ ನಲ್ಲಿ ಭಾರತಕ್ಕೆ 184 ರನ್ ಸೋಲು, ಆಸ್ಟ್ರೇಲಿಯಾ 2-1ರಿಂದ ಮುನ್ನಡೆ

ಬ್ಯಾಟಿಂಗ್ ನಲ್ಲಿ ಮುಗ್ಗರಿಸಿದ ಭಾರತ ತಂಡ ಬಾಕ್ಸಿಂಗ್ ಟೆಸ್ಟ್ ಪಂದ್ಯದಲ್ಲಿ 184 ರನ್ ಗಳಿಂದ ಹೀನಾಯ ಸೋಲುಂಡಿದೆ. ಇದರೊಂದಿಗೆ ಆಸ್ಟ್ರೇಲಿಯಾ ತಂಡ 5 ಪಂದ್ಯಗಳ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ 2-1ರಿಂದ ಮುನ್ನಡೆ ಸಾಧಿಸಿದೆ. ಮೆಲ್ಬೋರ್ನ್ ನಲ್ಲಿ ನಡೆದ ನಾಲ್ಕನೇ ಟೆಸ್ಟ್ ಪಂದ್ಯದ