Menu

13 ವರ್ಷಗಳಿಂದ ಕೋಮಾದಲ್ಲಿದ್ದ ವ್ಯಕ್ತಿಗೆ ದಯಾಮರಣ ಸಮ್ಮತಿಸಿದ ಸುಪ್ರೀಂ

13 ವರ್ಷಗಳಿಂದ ಕೋಮಾದಲ್ಲಿದ್ದ 31 ವರ್ಷದ ವ್ಯಕ್ತಿಗೆ ಸುಪ್ರೀಂಕೋರ್ಟ್‌ ದಯಾಮರಣ ನೀಡಲು ಸಮ್ಮತಿಸುವ ಮೂಲಕ ಐತಿಹಾಸಿಕ ತೀರ್ಪು ಪ್ರಕಟಿಸಿದೆ. ರೋಗಿಯ ಆರೋಗ್ಯ ಸ್ಥಿತಿಯ ಕುರಿತು ಎರಡು ವೈದ್ಯಕೀಯ ಮಂಡಳಿಗಳ ಅಭಿಪ್ರಾಯಗಳನ್ನು ಪರಿಗಣಿಸಿ ತೀರ್ಪು ಪ್ರಕಟಿಸಿದೆ. ಪಂಜಾಬ್ ವಿಶ್ವವಿದ್ಯಾಲಯದ ವಿದ್ಯಾರ್ಥಿ ಹರೀಶ್ ರಾಣಾ 2013 ರಲ್ಲಿ ಪೇಯಿಂಗ್ ಗೆಸ್ಟ್‌ನ ನಾಲ್ಕನೇ ಮಹಡಿಯಿಂದ ಬಿದ್ದು ಗಂಭೀರವಾಗಿ ಗಾಯಗೊಂಡು ಕೋಮಾ ತಲುಪಿ ೧೫ ವರ್ಷಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಪಿಜಿಐ ಚಂಡೀಗಢ, ದೆಹಲಿಯ ಏಮ್ಸ್,

ವಾಣಿಜ್ಯ ಬಳಕೆ ಗ್ಯಾಸ್‌ ಸಿಲಿಂಡರ್‌ ಬೆಲೆ ಹೆಚ್ಚಳ?

ಇಸ್ರೇಲ್‌ ಮತ್ತು ಇರಾನ್‌ ಸಂಘರ್ಷ ತೀವ್ರಗೊಂಡು ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯು ನಿರೀಕ್ಷೆಯಂತೆ ಭಾರತದಲ್ಲಿ ಅಡುಗೆ ಅನಿಲ ಪೂರೈಕೆ ಮೇಲೂ ಪರಿಣಾಮ ಬೀರಿದೆ. ವಾಣಿಜ್ಯ ಸಿಲಿಂಡರ್‌ಗಳಿಗೆ ನೀಡಲಾಗಿದ್ದ ರಿಯಾಯಿತಿಗಳನ್ನ ಸ್ಥಗಿತಗೊಳಿಸಿರುವುದಾಗಿ ಇಂಡೇನ್ ಆಯಿಲ್ ತಿಳಿಸಿದೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ ನಿರ್ದೇಶನದನ್ವಯ 19 ಕೆಜಿ

ಚಿತ್ತೂರಿನಲ್ಲಿ ಲಾರಿಗೆ ಕಾರು ಡಿಕ್ಕಿ: ರಾಜ್ಯದ ಐವರು ಸ್ಥಳದಲ್ಲೇ ಸಾವು

ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಪಲಮನೇರು ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬಂದ ಕಾರು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿ ಕರ್ನಾಟಕದ ಐವರು ಪ್ರಯಾಣಿಕರು ಮೃತಪಟ್ಟಿದ್ದಾರೆ. ಬೆಂಗಳೂರಿನಿಂದ ತಿರುಪತಿ ಕಡೆಗೆ ತೆರಳುತ್ತಿದ್ದ ಕಾರು ಪಲಮನೇರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಎದುರುಗಡೆಯಿಂದ

ಶ್ರೀಶೈಲದಲ್ಲಿ ಮಾರ್ಚ್ 16- 20 ಯುಗಾದಿ ಮಹೋತ್ಸವ

ಆಂಧ್ರಪ್ರದೇಶದ ಶ್ರೀಶೈಲದಲ್ಲಿ ಮಾರ್ಚ್ 16ರಿಂದ 20ರವರೆಗೆ ಯುಗಾದಿ ಮಹೋತ್ಸವ ಆಚರಣೆ ನಡೆಯಲಿದ್ದು, ಉತ್ಸವ ಪ್ರಾರಂಭವಾಗುವ ಮೊದಲು ಮಾರ್ಚ್ 06ರಿಂದ 15ರವರೆಗೆ ಪ್ರತಿದಿನ ನಿರ್ದಿಷ್ಟ ಸಮಯಗಳಲ್ಲಿ ನಾಲ್ಕು ಹಂತಗಳಾಗಿ ಮಲ್ಲಿಕಾರ್ಜುನ ಸ್ವಾಮಿಯ ಸ್ಪರ್ಶ ದರ್ಶನಕ್ಕೆ ಅವಕಾಶ ನೀಡಲಾಗಿದೆ ಎಂದು ಧರ್ಮದರ್ಶಿ ಮಂಡಳಿಯ ಅಧ್ಯಕ್ಷ

ಒಬ್ಬರ ಪ್ರಾಣಕ್ಕಾಗಿ ಏಳು ಲಕ್ಷ ನೀಡಿ ಪಡೆದ ಏರ್ ಆಂಬ್ಯುಲೆನ್ಸ್‌ ಅಪಘಾತದಲ್ಲಿ ಏಳು ಜನ ಸಾವು

ಜಾರ್ಖಂಡ್​​ನ ರಾಂಚಿಯಲ್ಲಿ ಏರ್ ಆಂಬ್ಯುಲೆನ್ಸ್ ಅಪಘಾತಕ್ಕೀಡಾಗಿ ಏಳು ಮಂದಿ ಮೃತಪಟ್ಟಿದ್ದಾರೆ. ಒಂದು ಜೀವ ಉಳಿಸುವುದಕ್ಕಾಗಿ ಕುಟುಂಬ ಆಂಬ್ಯುಲೆನ್ಸ್​ಗೆ ಏಳು ಲಕ್ಷ ರೂ. ಪಾವತಿ ಮಾಡಿತ್ತು. ದೆಹಲಿಯಲ್ಲಿ ಹೆಚ್ಚಿನ ಚಿಕಿತ್ಸೆ ಕೊಡಿಲು ಲಕ್ಷಗಟ್ಟಲೆ ಸಾಲನ್ನೂ ಕೂಡ ಮಾಡಿತ್ತು ಎನ್ನಲಾಗಿದೆ. ಆದರೆ ಅದೇ ಆಂಬ್ಯುಲೆನ್ಸ್

ಅಶ್ಲೀಲ ಮತ್ತು ಆಕ್ಷೇಪಾರ್ಹ ವಿಷಯ: ಐದು ಒಟಿಟಿಗಳಿಗೆ ಕೇಂದ್ರ ನಿರ್ಬಂಧ

ಮಾಹಿತಿ ತಂತ್ರಜ್ಞಾನ ಕಾಯಿದೆ 2021 ಮತ್ತು ಐಟಿ ಕಾಯಿದೆಯ ಸೆಕ್ಷನ್ 69A ಅಡಿ ಐದು ಒಟಿಟಿ ಪ್ಲಾಟ್‌ಫಾರ್ಮ್‌ಗಳನ್ನು ಕೇಂದ್ರ ಸರ್ಕಾರ ನಿರ್ಬಂಧಿಸಿದೆ. ಅಶ್ಲೀಲ ಮತ್ತು ಆಕ್ಷೇಪಾರ್ಹ ವಿಷಯ ಪ್ರಸಾರ ಮಾಡುವ ಮೂಲಕ ಸಾಮಾಜಿಕ ಮಾನ ದಂಡಗಳನ್ನು ಪಾಲಿಸದ ಕಾರಣಕ್ಕೆ ನಿರ್ಬಂಧ ವಿಧಿಸಿದೆ.

ನೌಕರಿ ಮಾಡದ ಗೃಹಿಣಿಯ ಶ್ರಮದ ನಿರ್ಲಕ್ಷ್ಯ ಸಲ್ಲ ಎಂದ ದಿಲ್ಲಿ ಹೈಕೋರ್ಟ್‌

ಗೃಹಿಣಿ ಉದ್ಯೋಗ ಮಾಡದಿರುವುದನ್ನು ಆಲಸ್ಯ ಎಂದು ವಿವರಿಸುವುದು ಸುಲಭ, ಮನೆಯನ್ನು ಉಳಿಸಿಕೊಳ್ಳುವಲ್ಲಿ ಆಕೆಯ ಶ್ರಮವನ್ನು ಗುರುತಿಸುವುದು ಹೆಚ್ಚು ಕಷ್ಟ ಎಂದು ದಿಲ್ಲಿ ಹೈಕೋರ್ಟ್ ತೀರ್ಪಿನಲ್ಲಿ ಸ್ಪಷ್ಟಪಡಿಸಿದೆ.  ನೌಕರಿ ಮಾಡದ ಗೃಹಿಣಿಯನ್ನು “ನಿಷ್ಕ್ರಿಯ ಹೆಂಡತಿ” ಎಂದು ಪರಿಗಣಿಸುವುದು, ಶ್ರಮವನ್ನು ನಿರ್ಲಕ್ಷಿಸುವುದು ಸರಿಯಲ್ಲ ಎಂಬುದಾಗಿ

ರಾಜ್ಯಸಭೆಯ 37 ಸ್ಥಾನಗಳಿಗೆ ಮಾರ್ಚ್ 16ಕ್ಕೆ ಚುನಾವಣೆ

ರಾಜ್ಯಸಭೆಯ 37 ಸ್ಥಾನಗಳಿಗೆ ಹತ್ತು ರಾಜ್ಯಗಳಿಗೆ ದ್ವೈವಾರ್ಷಿಕ ಚುನಾವಣೆ ಮಾರ್ಚ್ 16 ರಂದು ನಡೆಯಲಿದೆ ಎಂದು ಚುನಾವಣಾ ಆಯೋಗ ಪ್ರಕಟಿಸಿದೆ. ಏಪ್ರಿಲ್‌ನಲ್ಲಿ ಈ 37 ರಾಜ್ಯಸಭೆಯ ಸ್ಥಾನಗಳು ಖಾಲಿಯಾಗುತ್ತಿವೆ. ಮಹಾರಾಷ್ಟ್ರ, ಒಡಿಶಾ, ತೆಲಂಗಾಣ, ತಮಿಳುನಾಡು, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಅಸ್ಸಾಂ, ಹರಿಯಾಣ,

ಹೋಟೆಲ್‌ನಲ್ಲಿ ಸ್ಕ್ವಿಡ್ ಮಸಾಲ, ಮೊಟ್ಟೆ ಮರಗೆಣಸು ಸೇವಿಸಿದ ಇಬ್ಬರ ಸಾವು

ಹೋಟೆಲ್‌ನಲ್ಲಿ ಸ್ಕ್ವಿಡ್ ಮಸಾಲೆ, ಮೊಟ್ಟೆ ಮರಗೆಣಸು ಜೊತೆ ಪರೋಟ ತಿಂದು ಊಟ ಮುಗಿಸಿ ಹೊರಟ ಕೆಲವೇ ಕ್ಷಣಗಳಲ್ಲಿ ಇಬ್ಬರು ಅಸ್ವಸ್ಥಗೊಂಡು ಮೃತಪಟ್ಟ ಘಟನೆ ಕೇರಳದ ವಿಳಿಂಜಂನಲ್ಲಿ ನಡೆದಿದೆ. ವಿಳಿಂಜಂನ ‘ಅಸ್ಮಾಕ್’ ಹೋಟೆಲ್‌ನಲ್ಲಿ ಊಟ ಮಾಡಿದ್ದ ಕೊಲ್ಲಂ ನಿವಾಸಿಗಳಾದ ಶಾಜಿ ಮತ್ತು ಅವರ

ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶ ನಿರ್ಬಂಧ: ಏ.7 ರಿಂದ ಸುಪ್ರೀಂ ವಿಚಾರಣೆ

ಶಬರಿಮಲೆ ದೇಗುಲ ಸೇರಿದಂತೆ ದೇಶಾದ್ಯಂತ ಹಲವು ಧಾರ್ಮಿಕ ಸ್ಥಳಗಳಲ್ಲಿ ಮಹಿಳೆಯರ ಪ್ರವೇಶ ನಿರ್ಬಂಧಕ್ಕೆ ಸಂಬಂಧಿಸಿದ ವಿಷಯದ ಬಗ್ಗೆ ಸುಪ್ರೀಂಕೋರ್ಟ್‌ನಲ್ಲಿ ಏ.7 ರಿಂದ ವಿಚಾರಣೆ ನಡೆಯಲಿದೆ. ಒಂಬತ್ತು ಸದಸ್ಯರ ಪೀಠದಲ್ಲಿ ವಿಚಾರಣೆ ನಡೆಯಲಿದ್ದು, ಸುಪ್ರೀಂಕೋರ್ಟ್ ಏ.22ಗೊಳಗೆ ವಿಚಾರಣೆ ಪೂರ್ಣಗೊಳಿಸುವ ಗಡುವು ವಿಧಿಸಿಕೊಂಡಿದೆ. ಏಪ್ರಿಲ್