Menu

ಮುಂಬೈ ಮಹಾನಗರ ಪಾಲಿಕೆ: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ಗೆಲುವು

ಮುಂಬೈ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಜಲ್ನಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಗೆದ್ದಿದ್ದಾರೆ. 2017ರ ಸೆಪ್ಟೆಂಬರ್ 5ರಂದು ಬೆಂಗಳೂರಿನ ಅವರ ಮನೆಯ ಹೊರಗೆ ಗೌರಿ ಲಂಕೇಶ್ ಅವರ​ ಹತ್ಯೆ ನಡೆದಿತ್ತು. ಪಂಗಾರ್ಕರ್ ಅವರನ್ನು ಪ್ರಕರಣದಲ್ಲಿ ಆರೋಪಿಯನ್ನಾಗಿ ಹೆಸರಿಸಲಾಗಿತ್ತು. ಸೆಪ್ಟೆಂಬರ್ 4, 2024 ರಂದು ಕರ್ನಾಟಕ ಹೈಕೋರ್ಟ್ ಅವರಿಗೆ ಜಾಮೀನು ನೀಡಿತ್ತು. ಶ್ರೀಕಾಂತ್ ಪಂಗಾರ್ಕರ್ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್

ಪಿಎನ್‌ಬಿ ವಂಚನೆ ಪ್ರಕರಣದಲ್ಲಿ ಮೆಹುಲ್ ಚೋಕ್ಸಿ ಮಗನೂ ಭಾಗಿ ಎಂದ ಇಡಿ

ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್‌ಬಿ) ವಂಚನೆ ಪ್ರಕರಣದಲ್ಲಿ ದೇಶದಿಂದ ಪಲಾಯನ ಮಾಡಿರುವ ವಜ್ರ ವ್ಯಾಪಾರಿ ಮೆಹುಲ್ ಚೋಕ್ಸಿ ವಿರುದ್ಧದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯವು (ಇಡಿ) ಚೋಕ್ಸಿ ಮಗ ರೋಹನ್ ಚೋಕ್ಸಿ ಕೂಡ ಅಕ್ರಮ ಹಣ ವರ್ಗಾವಣೆಯಲ್ಲಿ ಸಕ್ರಿಯ ಭಾಗಿ ಎಂದು

ಕೊಲ್ಲಂ SAI ಸ್ಪೋರ್ಟ್ಸ್‌ ಹಾಸ್ಟೆಲ್‌ನಲ್ಲಿ ಹುಡುಗಿಯರಿಬ್ಬರು ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಕೊಲ್ಲಂನಲ್ಲಿರುವ ಭಾರತೀಯ ಕ್ರೀಡಾ ಪ್ರಾಧಿಕಾರದ  ಸ್ಪೋರ್ಟ್ಸ್‌ ಹಾಸ್ಟೆಲ್‌ನಲ್ಲಿ ಇಬ್ಬರು ಹುಡುಗಿಯರು ಗುರುವಾರ ಬೆಳಗ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈ ಸಾವುಗಳ ಬಗ್ಗೆ ಅನುಮಾನ ವ್ಯಕ್ತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ವಿದ್ಯಾರ್ಥಿನಿಯರನ್ನು ಕೋಝಿಕ್ಕೋಡ್ ಜಿಲ್ಲೆಯ 17 ವರ್ಷದ ಸಾಂಡ್ರಾ ಹಾಗೂ

ನಿವೃತ್ತ ಉದ್ಯೋಗಿಗಳಿಗೆ ಬೆಳ್ಳಿ ಪದಕದ ಹೆಸರಲ್ಲಿ ತಾಮ್ರ ನೀಡಿದ ರೈಲ್ವೆ ಇಲಾಖೆ

ಪಶ್ಚಿಮ ಮಧ್ಯ ರೈಲ್ವೆ ವಲಯದಲ್ಲಿ ಹಲವು ದಶಕ ಕೆಲಸ ಮಾಡಿ ನಿವೃತ್ತರಾದ ನೌಕರರಿಗೆ ರೈಲ್ವೆ ಇಲಾಖೆಯು ವಿದಾಯದ ವೇಳೆ  ಚಿನ್ನಲೇಪಿತ  ಬೆಳ್ಳಿಯ ಪದಕವೆಂದು ಹೇಳಿ ಕೊಟ್ಟಿರುವುದು ತಾಮ್ರದ ಮೇಲೆ ಬೆಳ್ಳಿ ಲೇಪನ ಮಾಡಿದ ಪದಕವೆಂಬುದು ಬೆಳಕಿಗೆ ಬಂದಿದೆ. ಈ ನಕಲಿ ಬೆಳ್ಳಿ

 PSLV- C62 ನೌಕೆ ಸಮುದ್ರದಲ್ಲಿ  ಪತನ, ಸ್ಪೇನ್ ಉಪಗ್ರಹ ಮಾತ್ರ ಸುರಕ್ಷಿತ

ನಿಗದಿಗೊಳಿಸಿದ್ದ ಕಕ್ಷೆ ಸೇರಲು ವಿಫಲವಾಗಿ ಪಥ ಬದಲಿಸಿದ್ದ  ಭಾರತೀಯ ಬಾಹ್ಯಕಾಶ ಸಂಸ್ಥೆಯ ಪಿಎಸ್ ಎಲ್ ವಿ ಸಿ 62 ನೌಕೆ ದಕ್ಷಿಣ ಹಿಂದೂ ಮಹಾಸಾಗರ ಪ್ರದೇಶದಲ್ಲಿ ಪತನಗೊಂಡಿದ್ದು, ಸ್ಪೇನ್ ನ ಉಪಗ್ರಹ ಹೊರತುಪಡಿಸಿ ಉಳಿದ ಎಲ್ಲಾ 15 ಉಪಗ್ರಹಗಳು ಹೊತ್ತಿ ಉರಿದು ಹೋಗಿವೆ.

ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಆಸ್ಪತ್ರೆಗೆ ದಾಖಲು

ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರ ಆರೋಗ್ಯದಲ್ಲಿ ತೊಂದರೆಯಾಗಿದ್ದು, ನವದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್)ಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜನವರಿ 10 ರಂದು ಶೌಚಾಲಯಕ್ಕೆ ಹೋದಾಗ ಅವರು ಎರಡು ಬಾರಿ ಪ್ರಜ್ಞಾಹೀನರಾಗಿದ್ದರು ಎಂದು ತಿಳಿದು ಬಂದಿದೆ.

ಮಲ್ಲಿಕಾರ್ಜುನ ಖರ್ಗೆ, ಧರ್ಮಂ ಸಿಂಗ್‌ರಿಂದ 371 ಜೆ ಜಾರಿಯಾಗಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ: ಸಿಎಂ

ಮಲ್ಲಿಕಾರ್ಜುನ ಖರ್ಗೆ ಹಾಗೂ ಧರ್ಮಂ ಸಿಂಗ್ ಅವರು ಇಲ್ಲದೇ ಹೋಗಿದ್ದರೆ 371 ಜೆ ಜಾರಿಯಾಗುತ್ತಿರಲಿಲ್ಲ . 371 ಜೆ ಕಾಯ್ದೆಯಿಂದಾಗಿ ಈ ಭಾಗದಲ್ಲಿ ಹತ್ತು ಸಾವಿರ ವೈದ್ಯರು, 30, 000 ಇಂಜಿನಿಯರ್ ಗಳು , 12,000 ಜನ ದಂತ ವೈದ್ಯರು ಹಾಗೂ

“ಹಿಂದಿ ನಿಮ್ಮ ಭಾಷೆ, ನಮ್ಮದಲ್ಲ, ಹೇರಲು ಬಂದರೆ ಒದ್ದು ಓಡಿಸ್ತೇನೆ” ರಾಜ್‌ ಠಾಕ್ರೆ ಎಚ್ಚರಿಕೆ

ಉತ್ತರ ಪ್ರದೇಶ ಮತ್ತು ಬಿಹಾರದಿಂದ ಬಂದವರು  ಸ್ಪಷ್ಟವಾಗಿ ಅರ್ಥಮಾಡಿಕೊಳ್ಳಿ.  ಹಿಂದಿ ನಿಮ್ಮ ಭಾಷೆ, ನಮ್ಮದಲ್ಲ.  ನನಗೆ ಆ ಭಾಷೆಯ ಬಗ್ಗೆ ದ್ವೇಷವಿಲ್ಲ. ಆದರೆ ನೀವು ಅದನ್ನು ನಮ್ಮ ಮೇಲೆ ಬಲವಂತವಾಗಿ ಹೇರಲು ಬಂದರೆ ನಾನು ಒದ್ದು ಓಡಿಸುತ್ತೇನೆ ಎಂದು ಮಹಾರಾಷ್ಟ್ರ ನವನಿರ್ಮಾಣ

ರಾತ್ರಿ ಇಲಿ ಪಾಷಾಣ ಆರ್ಡರ್‌ ಮಾಡಿದ ಮಹಿಳೆ: ಜೀವವುಳಿಸಿದ ಡೆಲಿವರಿ ಬಾಯ್‌

ತಮಿಳುನಾಡಿನಲ್ಲಿ ರಾತ್ರಿ ಮಹಿಳೆಯೊಬ್ಬರು ಇಲಿ ಪಾಷಾಣ ಆರ್ಡರ್‌ ಮಾಡಿದ್ದು, ಡೆಲಿವರಿ ಬಾಯ್‌ಗೆ ಮಹಿಳೆ ಸಂಕಷ್ಟದಲ್ಲಿದ್ದಾಳೆಂದು ಅರಿವಾಗಿ ಸಮಯ ಪ್ರಜ್ಞೆಯಿಂದ ಆಕೆಯ ಜೀವವುಳಿಸಿದ್ದಾನೆ. ಬಳಿಕ ಆತ ವೀಡಿಯೊ ಮಡಿ ಈ ವಿಷಯ ಹಂಚಿಕೊಂಡಿದ್ದು, ಎಲ್ಲೆಡೆ ವೈರಲ್‌ ಆಗಿಆತನ ಬಗ್ಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

ಇಡಿ ಮೇಲೆ ಮಮತಾ ರೇಡ್‌: ದಾಳಿ ವೇಳೆ ನುಗ್ಗಿ “ಐಪ್ಯಾಕ್‌” ಕಡತಗಳನ್ನು ಹೊತ್ತೊಯ್ದ ದೀದಿ

ಚುನಾವಣಾ ತಂತ್ರಗಾರಿಕೆ ಸಂಸ್ಥೆ ‘ಐ ಪ್ಯಾಕ್‌’ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೋಲ್ಕತಾದಲ್ಲಿರುವ ಐಪ್ಯಾಕ್‌ ಮುಖ್ಯಸ್ಥನ ಮನೆಯ ಮೇಲೆ ದಾಳಿ ನಡೆದಾಗ ಅಲ್ಲಿಗೆ ನುಗ್ಗಿದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ದಾಖಲೆಗಳನ್ನು ಎತ್ತಿಕೊಂಡು