India news
ಅಗ್ನಿ ದುರಂತ: ರಕ್ಷಿಸಿ ಎಂದು ಕರೆ ಮಾಡುತ್ತಿದ್ದಂತೆಯೇ ತಾಯಿ, ಮಕ್ಕಳು ಸಜೀವ ದಹನ
ದಕ್ಷಿಣ ದೆಹಲಿಯ ಲೋಧಿ ರಸ್ತೆ ಪ್ರದೇಶದ ಬಿ.ಕೆ. ದತ್ ಕಾಲೋನಿಯಲ್ಲಿ ನಡೆದ ಭೀಕರ ಅಗ್ನಿ ದುರಂತವೊಂದರಲ್ಲಿ ತಾಯಿ ಹಾಗೂ ಇಬ್ಬರು ಪುಟ್ಟ ಹೆಣ್ಣುಮಕ್ಕಳು ಅಸು ನೀಗಿದ್ದಾರೆ. ವಸತಿ ಕಟ್ಟಡದ ಮೂರನೇ ಮಹಡಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಈ ದುರ್ಘಟನೆ ಸಂಭವಿಸಿದೆ. ಅಧಿಕಾರಿಗಳ ಮಾಹಿತಿ ಪ್ರಕಾರ, ಬಿ-ಬ್ಲಾಕ್ನಲ್ಲಿರುವ ಚಾವ್ಲಾ ಸ್ವೀಟ್ಸ್ ಎದುರಿನ ಮನೆಯಲ್ಲಿ ಬೆಂಕಿ ಹೊತ್ತಿಕೊಂಡಿರುವುದಾಗಿ ದೆಹಲಿ ಅಗ್ನಿಶಾಮಕ ದಳಕ್ಕೆ ತುರ್ತು ಕರೆ ಬಂದಿದೆ. ತಕ್ಷಣವೇ ಕಾರ್ಯಪ್ರವೃತ್ತರಾದ ಅಗ್ನಿಶಾಮಕ ಸಿಬ್ಬಂದಿ, ಬೆಂಕಿ
ಹಿಂಸಾಚಾರಕ್ಕೆ ತಗ್ಗದೆ ಸಿಜೆಪಿ ನೇತೃತ್ವದಲ್ಲಿ ಮುಂದುವರಿದ ವಿದ್ಯಾರ್ಥಿ ಪ್ರತಿಭಟನೆ
ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳನ್ನು ಖಂಡಿಸಿ, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆಯನ್ನು ಹತ್ತಿಕ್ಕಲು ಸರ್ಕಾರ ಹಿಂಸೆಯ ಪ್ರಯೋಗ ಮಾಡಿದರೂ ಮಂಗಳವಾರವೂ ಪ್ರತಿಭಟನೆ ಮುಂದುವರಿದಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರ
ಜಮ್ಮು-ಕಾಶ್ಮೀರ ಅಸ್ತಿತ್ವಕ್ಕಾಗಿ ಫಾರೂಕ್ ಮತ್ತು ಒಮರ್ ಅಬ್ದುಲ್ಲಾ ಪ್ರತಿಭಟನೆ
ಜಮ್ಮು ಮತ್ತು ಕಾಶ್ಮೀರ ಪೀಪಲ್ಸ್ ಕಾನ್ಫರೆನ್ಸ್ ಮೆರವಣಿಗೆಯ ಸಂದರ್ಭದಲ್ಲಿ ಉಂಟಾದ ಗೊಂದಲ ಮತ್ತು ಅಶ್ರುವಾಯು ದಾಳಿಯ ನಡುವೆಯೇ, ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಹಲವಾರು ಶಾಸಕರು ಮತ್ತು ಸಚಿವರೊಂದಿಗೆ ದೆಹಲಿಯ ಜಂತರ್ ಮಂತರ್ಗೆ ತಲುಪಿ, ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯತ್ವವನ್ನು ಮರುಸ್ಥಾಪಿಸುವಂತೆ ಒತ್ತಾಯಿಸಿ
ಭಾರತದ ಸೇನಾ ಮುಖ್ಯಸ್ಥರಾಗಿ ಲೆ.ಜ ಧೀರಜ್ ಸೇಠ್
ಭಾರತದ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್ ಅವರನ್ನು ನೇಮಕಗೊಳಿಸಿ ಕೇಂದ್ರ ಸರ್ಕಾರ ದೇಶ ಪ್ರಕಟಿಸಿದೆ. ಸೇನೆಯ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ನಿವೃತ್ತಿ ಬಳಿಕ ಧೀರಜ್ ಸೇಠ್ ಜೂನ್ 30 ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಧೀರಜ್ ಸೇಠ್ ಸೇನಾ
ಮಣಿಪುರ ಹಿಂಸಾಚಾರಕ್ಕೆ ಮೂವರು ಬಲಿ, ಏಳು ಮನೆಗಳು ಭಸ್ಮ
ಮಣಿಪುರದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಕಾಂಗ್ಪೋಕ್ಪಿ ಜಿಲ್ಲೆಯ ಸೈತು-ಗಂಫಜೋಲ್ ಉಪವಿಭಾಗದಲ್ಲಿರುವ ಲೋಯಿಬೋಲ್ ಖುಲ್ಲೆನ್ ಎಂಬಲ್ಲಿ ಮಹಿಳೆ ಸೇರಿದಂತೆ ಮೂವರನ್ನು ಹತ್ಯೆ ಮಾಡಲಾಗಿದೆ ಮತ್ತು ಏಳು ಮನೆಗಳನ್ನು ಸುಟ್ಟು ಹಾಕಲಾಗಿದೆ. ರಾಷ್ಟ್ರೀಯ ಸಮಾಜವಾದಿ ಮಂಡಳಿಯ ನಾಗಲಿಮ್(ಎನ್ಎಸ್ಸಿಎನ್-ಐಎಂ) ಮತ್ತು ಅದರ ಪ್ರಾಕ್ಸಿ ಸಂಘಟನೆದ ಜೆಲಿಯಾಂಗ್ರಾಂಗ್ ಯುನೈಟೆಡ್
ಪೆಟ್ರೋಲ್, ಡಿಸೇಲ್ ದರ ಏರಿಕೆ ಓಟ ಮುಂದುವರಿಕೆ
ದೇಶದಲ್ಲಿ ಪೆಟ್ರೋಲ್, ಡಿಸೇಲ್ ದರ ಏರಿಕೆ ಓಟ ಮುಂದುವರಿದಿದೆ, ಸೋಮವಾರ ಪೆಟ್ರೋಲ್ ದರ ಲೀಟರ್ಗೆ ರೂ.2.61 ಹಾಗೂ ಡೀಸೆಲ್ ದರ 2.71 ಏರಿಕೆಯಾಗಿದೆ. ಕಳೆದ 12 ದಿನಗಳಲ್ಲಿ ನಾಲ್ಕನೇ ಬಾರಿ ನಡೆದ ದರ ಏರಿಕೆಯಾಗಿದೆ. ಮೇ 15ರಿಂದ ಒಟ್ಟಾರೆ ಪೆಟ್ರೋಲ್ ಮತ್ತು
ಮುಂದುವರಿದ ಪೆಟ್ರೋಲ್, ಡೀಸೆಲ್ ದರ ಏರಿಕೆ
ದೇಶದಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ 87 ಪೈಸೆ ಹಾಗೂ ಡೀಸೆಲ್ ಬೆಲೆ 91 ಪೈಸೆ ಹೆಚ್ಚಳವಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 107.14 ರೂ., ಡೀಸೆಲ್ ಬೆಲೆ 95.04 ರೂ. ಆಗಿದೆ. ಮೇ ತಿಂಗಳಲ್ಲಿ ಮೂರನೇ ಬಾರಿಗೆ ತೈಲ ಬೆಲೆಗಳು ಏರಿಕೆ ಕಂಡಿವೆ.
24 ರಾಜ್ಯಸಭಾ ಸ್ಥಾನಗಳಿಗೆ ಜೂನ್ 18ರಂದು ಚುನಾವಣೆ
ಜೂನ್ 18ರಂದು 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಸುವುದಾಗಿ ಚುನಾವಣಾ ಆಯೋಗ ಘೋಷಿಸಿದೆ. 10 ರಾಜ್ಯಗಳ 24 ರಾಜ್ಯಸಭಾ ಸ್ಥಾನಗಳಿಗೆ ಮತದಾನ ನಡೆಯಲಿದೆ. ನಾಮಪತ್ರ ಸಲ್ಲಿಸಲು ಜೂನ್ 8 ಕೊನೆಯ ದಿನಾಂಕ ಎಂದು ಚುನಾವಣಾ ಆಯೋಗ ತಿಳಿಸಿದೆ. ಇದೇ ವೇಳೆ ಮಹಾರಾಷ್ಟ್ರ
ಮೊಬೈಲ್ ಅತಿ ಬಳಕೆಗೆ ಗದರಿದ ಪೋಷಕರು: ಬಾವಿಗೆ ಹಾರಿದ ಮಗಳು
ಅತಿಯಾಗಿ ಮೊಬೈಲ್ ಬಳಸುತ್ತಿರುವುದಕ್ಕೆ ಪೋಷಕರು ಗದರಿಸಿದರೆಂದು ೧೭ ವರ್ಷದ ಮಗಳು ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತೆಲಂಗಾಣದ ಆಸಿಫಾಬಾದ್ನ ಸಂದೀಪ್ ನಗರದಲ್ಲಿ ನಡೆದಿದೆ. ಸ್ವರ್ಣಲತಾ ಮತ್ತು ಪೋಚಿರಾಮ್ ದಂಪತಿಯ ಮಗಳು ಸಾತ್ವಿಕಾ ಸ್ನಾನ ಮಾಡದೆ ಗಂಟೆಗಟ್ಟಲೆ ಮೊಬೈಲ್ ನೋಡುತ್ತಾ ಕುಳಿತಿದ್ದಳು.
ಪೆಟ್ರೋಲ್, ಡಿಸೇಲ್ ದರ ಲೀಟರ್ಗೆ ಮತ್ತೆ 90 ಪೈಸೆ ಏರಿಕೆ
ದೇಶಾದ್ಯಂತ ತೈಲ ಕಂಪನಿಗಳು ಪೆಟ್ರೋಲ್, ಡೀಸೆಲ್ ದರ ಪ್ರತಿ ಲೀಟರ್ಗೆ ಸರಾಸರಿ 90 ಪೈಸೆ ಏರಿಕೆ ಮಾಡಿದ್ದು, ಒಂದೇ ವಾರದಲ್ಲಿ ಎರಡನೇ ಬಾರಿ ತೈಲ ಬೆಲೆ ಏರಿಕೆಯಾಗಿ ಗ್ರಾಹಕರನ್ನು ಕಂಗೆಡಿಸಿದೆ. ಬೆಂಗಳೂರಿನಲ್ಲಿ ಮಂಗಳವಾರ ಡೀಸೆಲ್ ದರದಲ್ಲಿ ಪ್ರತಿ ಲೀಟರ್ಗೆ 94 ಪೈಸೆ




