Menu

ಪಿಣರಾಯಿ ಎನ್‌ಡಿಎ ಸೇರಿದ್ರೆ ಮೋದಿಯಿಂದ ಕೇರಳಕ್ಕೆ ಬೃಹತ್‌ ಪ್ಯಾಕೇಜ್‌? ಕೇಂದ್ರದ ಅನುದಾನ ಭಿಕ್ಷೆಯಲ್ಲ, ಹಕ್ಕು ಎಂದ ಸಿಪಿಎಂ

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟಕ್ಕೆ ಸೇರಬೇಕು. ಇದರಿಂದ ರಾಜ್ಯಕ್ಕೆ ಕೇಂದ್ರದಿಂದ ಹೆಚ್ಚಿನ ಅನುದಾನ ಬರಲು ಸಾಧ್ಯ. ವಿಜಯನ್ ಎನ್‌ಡಿಎ ಸೇರಿದರೆ ಮುಂದಿನ ವಿಧಾನಸಭಾ ಚುನಾವಣೆ ಯಲ್ಲಿ ಗೆದ್ದು ಮತ್ತೆ ಮುಖ್ಯಮಂತ್ರಿಯಾಗಬಹುದು ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ರಾಮದಾಸ್ ಅಠವಳೆ ಹೇಳಿದ್ದಾರೆ. ವಿಜಯನ್ ಎನ್‌ಡಿಎ ಸೇರಿದರೆ ಅದು ಒಂದು “ಕ್ರಾಂತಿಕಾರಿ” ನಿರ್ಧಾರವಾಗಲಿದೆ ಮತ್ತು ಖಂಡಿತವಾಗಿಯೂ ಕೇರಳಕ್ಕೆ ಹೆಚ್ಚಿನ ಹಣ

ಮನೆಯವರ ವಿರೋಧವಿದ್ದರೂ ಮದುವೆ: ಯುವ ಜೋಡಿಯನ್ನು ಹತ್ಯೆಗೈದ ಕುಟುಂಬ

ಮನೆಯವರ ವಿರೋಧದ ನಡುವೆಯೇ ಮದುವೆಯಾಗಿದ್ದ ಯುವ ಜೋಡಿಯನ್ನು ಯುವತಿಯ ಸಹೋದರರು ಕೊಂದು ಹೊಲದಲ್ಲಿ ಹೂತು ಹಾಕಿರು ಭಯಾನಕ ಘಟನೆಯೊಂದು ಉತ್ತರ ಪ್ರದೇಶದ ಮೊರದಾಬಾದ್‌ನಲ್ಲಿ  ನಡೆದಿದೆ. ಈ ಜೋಡಿ ಕೊಲೆಗೆ ಸಂಬಂಧಿಸಿದಂತೆ ಯುವತಿಯ ಸೋದರರನ್ನು ಬಂಧಿಸಲಾಗಿದೆ. ಕಾಜಲ್‌ ಮತ್ತು ಆಕೆಯ ಸಂಗಾತಿ ಅರ್ಮಾನ್‌

ಏಪ್ರಿಲ್‌ನಿಂದ ಹೈವೇ ಟೋಲ್ ಪ್ಲಾಜಾದಲ್ಲಿ ನಗದು ಪಾವತಿ ಇಲ್ಲ

ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಬಳಿ ನಗದು ಪಾವತಿಗೆ ಸಮಯ ಹಿಡಿಯುವ ಕಾರಣ ವಾಹನಗಳ ದಟ್ಟಣೆ ಉಂಟಾಗುತ್ತದೆ. ಈ ಸಮಸ್ಯೆ ನಿವಾರಣೆಗೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಹತ್ವದ ಕ್ರಮ ಕೈಗೊಂಡಿದೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು 2026 ಏಪ್ರಿಲ್

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್‌ ನಬಿನ್‌ ಅಧಿಕಾರ ಸ್ವೀಕಾರ

ಬಿಜೆಪಿಯ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅಧಿಕಾರ ಸ್ವೀಕರಿಸಿದ್ದಾರೆ. ಕೇಂದ್ರ ಸಚಿವರಾಗಿರುವ ಜೆ.ಪಿ ನಡ್ಡಾ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ಅವಧಿ ಪೂರ್ಣಗೊಳಿಸಿದ ಬಳಿಕ ನಡೆದ ಚುನಾವಣೆಯಲ್ಲಿ ನಿತಿನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ

ತಮಿಳ್ನಾಡು ಅಸೆಂಬ್ಲಿಯಲ್ಲಿ ಭಾಷಣ ಮಾಡದೆ ಹೊರ ನಡೆದ ರಾಜ್ಯಪಾಲರು

ತಮಿಳುನಾಡು ಅಸೆಂಬ್ಲಿಯಲ್ಲಿ ಅಧಿವೇಶವನ್ನುದ್ದೇಶಿಸಿ ಭಾಷಣ ಮಾಡದೆ ರಾಜ್ಯಪಾಲರು ಹೊರ ನಡೆದಿದ್ದಾರೆ. ಈ ಭಾಷಣದಲ್ಲಿ ಆಧಾರರಹಿತ ಮತ್ತು ತಪ್ಪುದಾರಿಗೆಳೆಯುವ ಹೇಳಿಕೆಗಳಿವೆ. ಜನರಿಗೆ ತೊಂದರೆ ನೀಡುವ ನಿರ್ಣಾಯಕ ಸಮಸ್ಯೆಗಳನ್ನು ನಿರ್ಲಕ್ಷಿಸಲಾಗಿದೆ. ತಮಿಳುನಾಡು 12 ಲಕ್ಷ ಕೋಟಿ ರೂ. ಗೂ ಹೆಚ್ಚು ಹೂಡಿಕೆ ಆಕರ್ಷಿಸಿದೆ ಎಂದು

ಶಬರಿಮಲೆ ಚಿನ್ನ ಕಳವು: ಬೆಂಗಳೂರು, ಬಳ್ಳಾರಿಗಳಲ್ಲಿ ಇಡಿ ದಾಳಿ

ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದದ 4.5 ಕೆಜಿ ಚಿನ್ನದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಮಂಗಳವಾರ ಬೆಂಗಳೂರಿನ ಶ್ರೀರಾಂಪುರದಲ್ಲಿರುವ ಅಯ್ಯಪ್ಪ ದೇವಸ್ಥಾನ ಮತ್ತು ಈ ಪ್ರಕರಣದ ಪ್ರಮುಖ ಆರೋಪಿ ಎನ್ನಲಾದ ಉನ್ನಿಕೃಷ್ಣನ್ ಪೊಟ್ಟಿಗೆ ಸೇರಿದ ಮನೆ ಹಾಗೂ ಟ್ರಸ್ಟಿಗಳ ನಿವಾಸಗಳ

ಹೊಸೂರಿನಲ್ಲಿ ವಿಮಾನ ನಿಲ್ದಾಣ: ತಮಿಳುನಾಡು ಮನವಿ ಮತ್ತೆ ತಿರಸ್ಕೃತ

ಹೊಸೂರಿನಲ್ಲಿ ವಿಮಾನ ನಿಲ್ದಾಣ ಸ್ಥಾಪನೆ ಸಂಬಂಧ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಮನವಿಯನ್ನು ರಕ್ಷಣಾ ಸಚಿವಾಲಯ ಮತ್ತೊಮ್ಮೆ ತಿರಸ್ಕರಿಸಿದೆ. ವಾಯುಪ್ರದೇಶವನ್ನು ಹಿಂದೂಸ್ತಾನ್ ಏರೋನಾಟಿಕ್ಸ್ ನಿಯಂತ್ರಿಸುತ್ತದೆ. ಹೀಗಾಗಿ ಹೊಸೂರು ವಿಮಾನ ನಿಲ್ದಾಣಕ್ಕೆ ಅಗತ್ಯವಿರುವ ಪ್ರಮುಖ ಅನುಮತಿಗಳಲ್ಲಿ ಒಂದು ರಕ್ಷಣಾ ಸಚಿವಾಲಯದಿಂದ ಬರಬೇಕು. ಆದರೆ ಅದು

ಮುಂಬೈ ಮಹಾನಗರ ಪಾಲಿಕೆ: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ಗೆಲುವು

ಮುಂಬೈ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಜಲ್ನಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಗೆದ್ದಿದ್ದಾರೆ. 2017ರ ಸೆಪ್ಟೆಂಬರ್ 5ರಂದು ಬೆಂಗಳೂರಿನ ಅವರ ಮನೆಯ ಹೊರಗೆ ಗೌರಿ ಲಂಕೇಶ್ ಅವರ​ ಹತ್ಯೆ

ಪಿಎನ್‌ಬಿ ವಂಚನೆ ಪ್ರಕರಣದಲ್ಲಿ ಮೆಹುಲ್ ಚೋಕ್ಸಿ ಮಗನೂ ಭಾಗಿ ಎಂದ ಇಡಿ

ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್‌ಬಿ) ವಂಚನೆ ಪ್ರಕರಣದಲ್ಲಿ ದೇಶದಿಂದ ಪಲಾಯನ ಮಾಡಿರುವ ವಜ್ರ ವ್ಯಾಪಾರಿ ಮೆಹುಲ್ ಚೋಕ್ಸಿ ವಿರುದ್ಧದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯವು (ಇಡಿ) ಚೋಕ್ಸಿ ಮಗ ರೋಹನ್ ಚೋಕ್ಸಿ ಕೂಡ ಅಕ್ರಮ ಹಣ ವರ್ಗಾವಣೆಯಲ್ಲಿ ಸಕ್ರಿಯ ಭಾಗಿ ಎಂದು

ಕೊಲ್ಲಂ SAI ಸ್ಪೋರ್ಟ್ಸ್‌ ಹಾಸ್ಟೆಲ್‌ನಲ್ಲಿ ಹುಡುಗಿಯರಿಬ್ಬರು ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಕೊಲ್ಲಂನಲ್ಲಿರುವ ಭಾರತೀಯ ಕ್ರೀಡಾ ಪ್ರಾಧಿಕಾರದ  ಸ್ಪೋರ್ಟ್ಸ್‌ ಹಾಸ್ಟೆಲ್‌ನಲ್ಲಿ ಇಬ್ಬರು ಹುಡುಗಿಯರು ಗುರುವಾರ ಬೆಳಗ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈ ಸಾವುಗಳ ಬಗ್ಗೆ ಅನುಮಾನ ವ್ಯಕ್ತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ವಿದ್ಯಾರ್ಥಿನಿಯರನ್ನು ಕೋಝಿಕ್ಕೋಡ್ ಜಿಲ್ಲೆಯ 17 ವರ್ಷದ ಸಾಂಡ್ರಾ ಹಾಗೂ