India news
ನಿವೃತ್ತ ಉದ್ಯೋಗಿಗಳಿಗೆ ಬೆಳ್ಳಿ ಪದಕದ ಹೆಸರಲ್ಲಿ ತಾಮ್ರ ನೀಡಿದ ರೈಲ್ವೆ ಇಲಾಖೆ
ಪಶ್ಚಿಮ ಮಧ್ಯ ರೈಲ್ವೆ ವಲಯದಲ್ಲಿ ಹಲವು ದಶಕ ಕೆಲಸ ಮಾಡಿ ನಿವೃತ್ತರಾದ ನೌಕರರಿಗೆ ರೈಲ್ವೆ ಇಲಾಖೆಯು ವಿದಾಯದ ವೇಳೆ ಚಿನ್ನಲೇಪಿತ ಬೆಳ್ಳಿಯ ಪದಕವೆಂದು ಹೇಳಿ ಕೊಟ್ಟಿರುವುದು ತಾಮ್ರದ ಮೇಲೆ ಬೆಳ್ಳಿ ಲೇಪನ ಮಾಡಿದ ಪದಕವೆಂಬುದು ಬೆಳಕಿಗೆ ಬಂದಿದೆ. ಈ ನಕಲಿ ಬೆಳ್ಳಿ ಪದಕಗಳನ್ನು 2023 ರಿಂದ 2025 ರ ನಡುವೆ ನಿವೃತ್ತರಾದ ನೌಕರರಿಗೆ ವಿತರಿಸಲಾಗಿದೆ. ಎರಡು ತಿಂಗಳ ಹಿಂದೆ ಹಗರಣ ಬೆಳಕಿಗೆ ಬಂದಿದ್ದು, ಕಳೆದ ಡಿಸೆಂಬರ್‌ನಲ್ಲಿ ದೂರುಗಳು ದಾಖಲಾಗಿವೆ. ಕಳೆದ
PSLV- C62 ನೌಕೆ ಸಮುದ್ರದಲ್ಲಿ ಪತನ, ಸ್ಪೇನ್ ಉಪಗ್ರಹ ಮಾತ್ರ ಸುರಕ್ಷಿತ
ನಿಗದಿಗೊಳಿಸಿದ್ದ ಕಕ್ಷೆ ಸೇರಲು ವಿಫಲವಾಗಿ ಪಥ ಬದಲಿಸಿದ್ದ ಭಾರತೀಯ ಬಾಹ್ಯಕಾಶ ಸಂಸ್ಥೆಯ ಪಿಎಸ್ ಎಲ್ ವಿ ಸಿ 62 ನೌಕೆ ದಕ್ಷಿಣ ಹಿಂದೂ ಮಹಾಸಾಗರ ಪ್ರದೇಶದಲ್ಲಿ ಪತನಗೊಂಡಿದ್ದು, ಸ್ಪೇನ್ ನ ಉಪಗ್ರಹ ಹೊರತುಪಡಿಸಿ ಉಳಿದ ಎಲ್ಲಾ 15 ಉಪಗ್ರಹಗಳು ಹೊತ್ತಿ ಉರಿದು ಹೋಗಿವೆ.
ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಆಸ್ಪತ್ರೆಗೆ ದಾಖಲು
ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರ ಆರೋಗ್ಯದಲ್ಲಿ ತೊಂದರೆಯಾಗಿದ್ದು, ನವದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್)ಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜನವರಿ 10 ರಂದು ಶೌಚಾಲಯಕ್ಕೆ ಹೋದಾಗ ಅವರು ಎರಡು ಬಾರಿ ಪ್ರಜ್ಞಾಹೀನರಾಗಿದ್ದರು ಎಂದು ತಿಳಿದು ಬಂದಿದೆ.
ಮಲ್ಲಿಕಾರ್ಜುನ ಖರ್ಗೆ, ಧರ್ಮಂ ಸಿಂಗ್‌ರಿಂದ 371 ಜೆ ಜಾರಿಯಾಗಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ: ಸಿಎಂ
ಮಲ್ಲಿಕಾರ್ಜುನ ಖರ್ಗೆ ಹಾಗೂ ಧರ್ಮಂ ಸಿಂಗ್ ಅವರು ಇಲ್ಲದೇ ಹೋಗಿದ್ದರೆ 371 ಜೆ ಜಾರಿಯಾಗುತ್ತಿರಲಿಲ್ಲ . 371 ಜೆ ಕಾಯ್ದೆಯಿಂದಾಗಿ ಈ ಭಾಗದಲ್ಲಿ ಹತ್ತು ಸಾವಿರ ವೈದ್ಯರು, 30, 000 ಇಂಜಿನಿಯರ್ ಗಳು , 12,000 ಜನ ದಂತ ವೈದ್ಯರು ಹಾಗೂ
“ಹಿಂದಿ ನಿಮ್ಮ ಭಾಷೆ, ನಮ್ಮದಲ್ಲ, ಹೇರಲು ಬಂದರೆ ಒದ್ದು ಓಡಿಸ್ತೇನೆ” ರಾಜ್ ಠಾಕ್ರೆ ಎಚ್ಚರಿಕೆ
ಉತ್ತರ ಪ್ರದೇಶ ಮತ್ತು ಬಿಹಾರದಿಂದ ಬಂದವರು ಸ್ಪಷ್ಟವಾಗಿ ಅರ್ಥಮಾಡಿಕೊಳ್ಳಿ. ಹಿಂದಿ ನಿಮ್ಮ ಭಾಷೆ, ನಮ್ಮದಲ್ಲ. ನನಗೆ ಆ ಭಾಷೆಯ ಬಗ್ಗೆ ದ್ವೇಷವಿಲ್ಲ. ಆದರೆ ನೀವು ಅದನ್ನು ನಮ್ಮ ಮೇಲೆ ಬಲವಂತವಾಗಿ ಹೇರಲು ಬಂದರೆ ನಾನು ಒದ್ದು ಓಡಿಸುತ್ತೇನೆ ಎಂದು ಮಹಾರಾಷ್ಟ್ರ ನವನಿರ್ಮಾಣ
ರಾತ್ರಿ ಇಲಿ ಪಾಷಾಣ ಆರ್ಡರ್ ಮಾಡಿದ ಮಹಿಳೆ: ಜೀವವುಳಿಸಿದ ಡೆಲಿವರಿ ಬಾಯ್
ತಮಿಳುನಾಡಿನಲ್ಲಿ ರಾತ್ರಿ ಮಹಿಳೆಯೊಬ್ಬರು ಇಲಿ ಪಾಷಾಣ ಆರ್ಡರ್ ಮಾಡಿದ್ದು, ಡೆಲಿವರಿ ಬಾಯ್‌ಗೆ ಮಹಿಳೆ ಸಂಕಷ್ಟದಲ್ಲಿದ್ದಾಳೆಂದು ಅರಿವಾಗಿ ಸಮಯ ಪ್ರಜ್ಞೆಯಿಂದ ಆಕೆಯ ಜೀವವುಳಿಸಿದ್ದಾನೆ. ಬಳಿಕ ಆತ ವೀಡಿಯೊ ಮಡಿ ಈ ವಿಷಯ ಹಂಚಿಕೊಂಡಿದ್ದು, ಎಲ್ಲೆಡೆ ವೈರಲ್ ಆಗಿಆತನ ಬಗ್ಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.
ಇಡಿ ಮೇಲೆ ಮಮತಾ ರೇಡ್: ದಾಳಿ ವೇಳೆ ನುಗ್ಗಿ “ಐಪ್ಯಾಕ್” ಕಡತಗಳನ್ನು ಹೊತ್ತೊಯ್ದ ದೀದಿ
ಚುನಾವಣಾ ತಂತ್ರಗಾರಿಕೆ ಸಂಸ್ಥೆ ‘ಐ ಪ್ಯಾಕ್’ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೋಲ್ಕತಾದಲ್ಲಿರುವ ಐಪ್ಯಾಕ್ ಮುಖ್ಯಸ್ಥನ ಮನೆಯ ಮೇಲೆ ದಾಳಿ ನಡೆದಾಗ ಅಲ್ಲಿಗೆ ನುಗ್ಗಿದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ದಾಖಲೆಗಳನ್ನು ಎತ್ತಿಕೊಂಡು
ದಾಳಿ ಮಾಡಲು ಬಂದ ಚಿರತೆ ಮತ್ತು ರೈತ ಬಾವಿಗೆ ಬಿದ್ದು ಸಾವು
ನಾಸಿಕ್ ಸವ್ತಾ ಮಲಿ ಗ್ರಾಮದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಚಿರತೆ ದಾಳಿ ಮಾಡಿದ ವೇಳೆ ತಪ್ಪಿಸಿಕೊಳ್ಳಲೆತ್ನಿಸಿದ ರೈತ ಮತ್ತು ಚಿರತೆ ಬಾವಿಗೆ ಬಿದ್ದು ಪ್ರಾಣ ಹೋಗಿದೆ. ಸವ್ತಾ ಮಲಿ ಗ್ರಾಮದ ನಿವಾಸಿ ಗೋರಖ್ ಜಾಧವ್ ಮೃತಪಟ್ಟವರು. ಮಧ್ಯಾಹ್ನ ಬೆಳೆಗೆ
ಒಡಿಶಾ ಕಲ್ಲು ಕ್ವಾರಿಯಲ್ಲಿ ಭೂಕುಸಿತ: ಇಬ್ಬರು ಬಲಿ, ಹಲವು ಕಾರ್ಮಿಕರ ಸಾವು ಶಂಕೆ
ಒಡಿಶಾದ ಧೆಂಕಾನಾಲ್ ಜಿಲ್ಲೆಯಲ್ಲಿ ಕಲ್ಲು ಗಣಿಗಾರಿಕೆಯ ವೇಳೆ ಭಾರಿ ಪ್ರಮಾಣದ ಭೂ ಕುಸಿತ ಸಂಭವಿಸಿದ್ದು, ಇಬ್ಬರು ಪ್ರಾಣ ಕಳೆದುಕೊಂಡಿದ್ದು ಹಲವು ಕಾರ್ಮಿಕರು ಮೃತಪಟ್ಟಿರುವುದಾಗಿ ಅನುಮಾನ ವ್ಯಕ್ತವಾಗಿದೆ. ಮೊಟಂಗಾ ಪೊಲೀಸ್ ಠಾಣೆ ವ್ಯಾಪ್ತಿಯ ಗೋಪಾಲಪುರ ಗ್ರಾಮದ ಸಮೀಪ ಕಾರ್ಮಿಕರು ಕಲ್ಲು ಗಣಿಗಾರಿಕೆ ನಡೆಸುತ್ತಿದ್ದ
ವೆನಿಜುವೆಲಾಗೆ ಹೋಗಬೇಡಿ: ಅಮೆರಿಕ ದಾಳಿ ಬಳಿಕ ಭಾರತೀಯರಿಗೆ ಕೇಂದ್ರ ಎಚ್ಚರಿಕೆ
ವೆನಿಜುವೆಲಾದ ಮೇಲೆ ಅಮೆರಿಕ ದಾಳಿ ನಡೆಸಿ ಅಲ್ಲಿನ ಅಧ್ಯಕ್ಷರನ್ನು ಬಂಧಿಸಿದ ಬಳಿಕ ಉಂಟಾಗಿರುವ ಬಿಕ್ಕಟ್ಟು ಪರಿಗಣಿಸಿ ಅಲ್ಲಿಗೆ ಅನಗತ್ಯ ಪ್ರಯಾಣ ಮಾಡಬೇಡಿ ಎಂದು ಕೇಂದ್ರ ಸರ್ಕಾರವು ಭಾರತೀಯರಿಗೆ ಎಚ್ಚರಿಕೆ ನೀಡಿದೆ. ವೆನೆಜುವೆಲಾದಲ್ಲಿರುವ ಎಲ್ಲಾ ಭಾರತೀಯರು ಜಾಗರೂಕರಾಗಿ ಇರಬೇಕು, ಅನಗತ್ಯವಾಗಿ ಹೊರಗಡೆ ಓಡಾಡಬೇಡಿ.ಕ್ಯಾರಕಾಸ್‌ನಲ್ಲಿರುವ




