India news
ಕೇಂದ್ರವೇ ಭರಿಸಬೇಕಿರುವ ನರೇಗಾ ವೆಚ್ಚ ಇನ್ಮುಂದೆ ರಾಜ್ಯ ಸರ್ಕಾರಕ್ಕೂ ಹೊರೆ, ಉದ್ಯೋಗ ಖಾತರಿಗೆ ಪ್ರಧಾನಿ ಕೊಕ್
ಕೇಂದ್ರ ಸರ್ಕಾರವೇ ಸಂಪೂರ್ಣ ವೆಚ್ಚವನ್ನು ಭರಿಸುವ ನರೇಗಾ ಯೋಜನೆಯ ಸ್ವರೂಪವನ್ನೇ ಬದಲಾಯಿಸಿರುವ ಎನ್ ಡಿ ಎ ಸರ್ಕಾರ, ಯೋಜನೆಯ ಶೇಕಡಾ 40ರಷ್ಟು ವೆಚ್ಚವನ್ನು ರಾಜ್ಯ ಸರ್ಕಾಗಳ ತಲೆಗೆ ಕಟ್ಟಲಾಗುತ್ತಿದೆ. ನರೇಗಾವು ಉದ್ಯೋಗ ಖಾತರಿ ನೀಡುವ ನೈಜ ಯೋಜನೆಯಾಗಿತ್ತು, ನರೇಂದ್ರ ಮೋದಿ ಸರ್ಕಾರದ ಆ ಖಾತರಿಯನ್ನು ಕಸಿಯಲಿದೆ ಮತ್ತು ಉದ್ಯೋಗದ ಭರವಸೆಯನ್ನು ರಾಜಕೀಯ ನಾಯಕರ ಇಚ್ಛೆಗೆ ಬಿಟ್ಟುಬಿಡುತ್ತದೆ. ಇದು ಜಾತಿ ತಾರತಮ್ಯ ಮತ್ತು ಸಾಮಾಜಿಕ ಅಸಮಾನತೆಯನ್ನು ಇನ್ನಷ್ಟು ಆಳವಾಗಿಸಲಿದೆ ಎಂದು ಮುಖ್ಯಮಂತ್ರಿ
ಮಸೂದೆ ಹೆಸರುಗಳಲ್ಲಿ ಹಿಂದಿ ಪದ ಹೆಚ್ಚಳ: ಹಿಂದಿಯೇತರರಿಗೆ ಅನ್ಯಾಯವೆಂದ ಪಿ ಚಿದಂಬರಂ
ಸಂಸತ್ತಿನಲ್ಲಿ ಮಂಡನೆಯಾಗುವ ಮಸೂದೆಗಳ ಹೆಸರುಗಳಿಗೆ ಇಂಗ್ಲಿಷ್ ಲಿಪಿಯಲ್ಲಿ ಬರೆಯಲಾದ ಹಿಂದಿ ಪದಗಳನ್ನು ಬಳಸುವ ಪ್ರವೃತ್ತಿ ಹೆಚ್ಚುತ್ತಿದ್ದು, ಇದು ಹಿಂದಿ ಮಾತನಾಡದ ನಾಗರಿಕರು ಮತ್ತು ರಾಜ್ಯಗಳಿಗೆ ಅನ್ಯಾಯ ಮಾಡಿದಂತೆ ಎಂದು ಕಾಂಗ್ರೆಸ್ ಮುಖಂಡ ಪಿ ಚಿದಂಬರಂ ಹೇಳಿದ್ದಾರೆ. ಕೇಂದ್ರ ಸರ್ಕಾರವು ಹಿಂದಿ ಹೇರಿಕೆ
ಮಗಳು ಮಾದಕ ವ್ಯಸನಿಯೆಂದು ತಿಳಿದ ತಾಯಿ ಆತ್ಮಹತ್ಯೆ ಯತ್ನ
ಆಂಧ್ರಪ್ರದೇಶದ ಗುಂಟೂರಿನಲ್ಲಿ ಮಗಳು ಮಾದಕ ವ್ಯಸನಿ ಎಂಬುದನ್ನು ತಿಳಿದುಕೊಂಡ ಬಳಿಕ ತಾಯಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಇನ್ಸ್ಟಾಗ್ರಾಂನಲ್ಲಿ ಪರಿಚಯವಾದ ವ್ಯಕ್ತಿ ಮಗಳಿಗೆ ಡ್ರಗ್ಸ್ ಕೊಡುತ್ತಿದ್ದ ಎನ್ನುವ ವಿಚಾರ ತಿಳಿಯುತ್ತಿದ್ದಂತೆ ತಾಯಿ ಆಘಾತಕ್ಕೊಳಗಾಗಿದ್ದರು. ಮಗಳು ಓದುತ್ತಿದ್ದ ಕಾಲೇಜಿನಲ್ಲಿ ಓದುತ್ತಿರುವ ಹಿರಿಯ ವಿದ್ಯಾರ್ಥಿಯೊಬ್ಬ ಇನ್‌ಸ್ಟಾಗ್ರಾಮ್
ಕೇಂದ್ರ ಮಾಜಿ ಗೃಹ ಸಚಿವ ಶಿವರಾಜ್ ಪಾಟೀಲ್ ಇನ್ನಿಲ್ಲ
ಕೇಂದ್ರ ಮಾಜಿ ಗೃಹ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಶಿವರಾಜ್ ಪಾಟೀಲ್ (91) ಮಹಾರಾಷ್ಟ್ರದ ಲಾತೂರ್‌ನಲ್ಲಿರುವ ತಮ್ಮ ನಿವಾಸದಲ್ಲಿ ಶುಕ್ರವಾರ ನಿಧನರಾದರು. ಅವರು ದೀರ್ಘಕಾಲದಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಸುದೀರ್ಘ ಕಾಲ ರಾಜಕೀಯವಾಗಿ ಸಕ್ರಿಯರಾಗಿದ್ದ ಶಿವರಾಜ್ ಪಾಟೀಲ್ ಲೋಕಸಭೆಯ ಸ್ಪೀಕರ್ ಆಗಿಯೂ
ಗೋವಾ ನೈಟ್ ಕ್ಲಬ್ ದುರಂತ: ಪಲಾಯನ ಮಾಡಿದ್ದ ಮಾಲೀಕರಾದ ಲುತ್ರಾ ಸೋದರರು ಥೈಲ್ಯಾಂಡ್‌ನಲ್ಲಿ ಅರೆಸ್ಟ್
ಕಳೆದ ಶನಿವಾರ ರಾತ್ರಿ ಗೋವಾದ ಬೀರ್ಚ್ ಬೈ ನೈಟ್‌ಕ್ಲಬ್‌ನಲ್ಲಿ ಅಗ್ನಿ ದುರಂತ ನಡೆದು ೨೫ ಮಂದಿ ಬಲಿಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿದ್ದ ಕ್ಲಬ್ ಮಾಲೀಕರಾದ ಸೌರಭ್ ಮತ್ತು ಗೌರವ್ ಲುತ್ರಾ ಸಹೋದರರನ್ನು ಥೈಲ್ಯಾಂಡ್‌ನಲ್ಲಿ ಪೊಲೀಸರು ಬಂಧಿಸಿದ್ದಾರೆ. ಥೈಲ್ಯಾಂಡ್ ಪೊಲೀಸರು ಲುತ್ರಾ
ನಿದ್ದೆಯಲ್ಲಿ ಮಗ್ಗಲು ಬದಲಿಸಿದ ತಂದೆ: ಪಕ್ಕದಲ್ಲಿದ್ದ 26 ದಿನದ ಮಗು ಸಾವು
ರಾತ್ರಿ ಮಂಚದಲ್ಲಿ ಮಲಗಿದ್ದ ತಂದೆ ಗಾಢ ನಿದ್ರಯಲ್ಲಿದ್ದಾಗ ಪಕ್ಕದಲ್ಲೇ ಮಲಗಿದ್ದ 26 ದಿನದ ಮಗುವಿನ ಮೇಲೆಯೇ ಮಗ್ಗಲು ಬದಲಾಯಿಸಿದ್ದರಿಂದ ಅವರ ಕೆಳಗೆ ಸಿಲುಕಿ ಮಗು ಮೃತಪಟ್ಟಿದೆ. ಉತ್ತರ ಪ್ರದೇಶದ ಗಜ್ರೌಲಾ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಆಕಸ್ಮಿಕವಾಗಿ ಸಿಲುಕಿ ನವಜಾತ ಶಿಶು
ರೈಲಿನಲ್ಲಿ ವ್ಯಾಪಾರಿಯ ನಿದ್ದೆ: 5.53 ಕೋಟಿ ರೂ. ಮೌಲ್ಯದ ಚಿನ್ನದೊಂದಿಗೆ ಕಳ್ಳ ಎಸ್ಕೇಪ್
ಚಿನ್ನದ ವ್ಯಾಪಾರಿಯೊಬ್ಬರು ಸೊಲ್ಲಾಪುರದಿಂದ ಮುಂಬೈಗೆ ರೈಲಿನಲ್ಲಿ ಪ್ರಯಾಣಿಸುವಾಗ ನಿದ್ರೆಗೆ ಜಾರಿದ್ದು, ಅವರ ಬಳಿ ಇದ್ದ 5.53 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆಭರಣಗಳನ್ನು ಕದ್ದು ಕಳ್ಳ ಪರಾರಿಯಾಗಿದ್ದಾನೆ. ಚಿನ್ನದ ವ್ಯಾಪಾರಿ ಸಿದ್ಧೇಶ್ವರ ಎಕ್ಸ್‌ಪ್ರೆಸ್ ರೈಲಿನಲ್ಲಿ ಸೊಲ್ಲಾಪುರದಿಂದ ಮುಂಬೈಗೆ ಪ್ರಯಾಣಿಸುತ್ತಿದ್ದಾಗ ಈ ಘಟನೆ
ನ್ಯಾಷನಲ್ ಹೆರಾಲ್ಡ್ ಕೇಸ್: ಡಿಸಿಎಂ ಆಪ್ತ ಇನಾಯತ್ ಅಲಿಗೆ ದೆಹಲಿ ಪೊಲೀಸ್ ನೋಟಿಸ್
ನ್ಯಾಷನಲ್ ಹೆರಾಲ್ಡ್ ಕೇಸ್‌ನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಆಪ್ತ, ಮಂಗಳೂರಿನ ಕಾಂಗ್ರೆಸ್ ಮುಖಂಡ ಇನಾಯತ್ ಅಲಿಗೂ ದೆಹಲಿ ಪೊಲೀಸರು ತನಿಖೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ಇಡಿ ನೀಡಿದ್ದ ದೂರಿನ ಅನ್ವಯ ದೆಹಲಿ ಪೊಲೀಸರ ಆರ್ಥಿಕ ಅಪರಾಧ ವಿಭಾಗ ಎಫ್‌ಐಆರ್ ದಾಖಲಿಸಿತ್ತು. ಪ್ರಕರಣದಲ್ಲಿ
ಪತ್ನಿಯೊಂದಿಗೆ ಜಗಳ: ಮಕ್ಕಳ ಕೊಂದು ಆತ್ಮಹತ್ಯೆ ಮಾಡಿಕೊಂಡ ಪತಿ
ಉತ್ತರ ಪ್ರದೇಶದ ಬಿಜ್ನೋರ್ನಲ್ಲಿ ವ್ಯಕ್ತಿಯೊಬ್ಬ ಪತ್ನಿಯೊಂದಿಗೆ ಜಗಳವಾಡಿ ಸಿಟ್ಟಿನ ಭರದಲ್ಲಿ ಮಕ್ಕಳನ್ನು ಕೊಂದು ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಕ್ಕಳಿಗೆ ವಿಷಕೊಟ್ಟು ಬಳಿಕ ಆತ ವಿಷ ಸೇವಿಸಿದ್ದಾನೆ. ಮೃತ ಬಾಬುರಾಮ್ ಕುಟುಂಬ ಕೆಲವು ಸಮಯದಿಂದ ವೈವಾಹಿಕ ಬಿಕ್ಕಟ್ಟಿನಲ್ಲಿದೆ. ಪತ್ನಿ ಹೆತ್ತವರ ಮನೆಯಲ್ಲಿ
ತವರು ಮನೆಗೆ ಹೋಗಿರುವ ಪತ್ನಿಯ ಕರೆತನ್ನಿ ಎಂದ ಮಗನ ಕೊಲೆಗೈದ ಪೋಷಕರು
ಮನೆಯಲ್ಲಿ ಕೆಲವೊಂದು ಭಿನ್ನಾಭಿಪ್ರಾಯಗಳಿಂದ ಮುನಿಸಿಕೊಂಡು ತವರಿಗೆ ಹೋಗಿದ್ದ ಪತ್ನಿಯನ್ನು ಕರೆ ತರುವಂತೆ ಹೇಳಿದ ಮಗನನ್ನು ಪೋಷಕರೇ ಹತ್ಯೆಗೈದ ಘಟನೆ ಪಂಜಾಬ್ನ ಅಮೃತಸರದಲ್ಲಿ ನಡೆದಿದೆ. ಸಿಮ್ರಂಜಂಗ್ ಸಿಂಗ್ ಎಂವರ ಪತ್ನಿ ನವಪ್ರೀತ್ ಕೌರ್ ತವರು ಮನೆಗೆ ಹೋಗಿದ್ದರು. ಕೋಪ, ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಆಕೆಯನ್ನು




