Menu

ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆಯೆಂದರೆ ಬಿಜೆಪಿಯ ರಾಜಕೀಯ ದೌರ್ಜನ್ಯ: ಡಿ.ಕೆ.ಶಿವಕುಮಾರ್

ಜನಸಂಖ್ಯೆಯ ಆಧಾರದ ಮೇಲೆ ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ ಮಾಡಲು ಬಿಜೆಪಿ ಮುಂದಾಗಿರುವುದು ಕೇವಲ ತಾಂತ್ರಿಕ ಕಾರಣವಲ್ಲ, ನಮ್ಮ ಮೇಲೆ ಮಾಡುತ್ತಿರುವ ರಾಜಕೀಯ ದೌರ್ಜನ್ಯ, ಪ್ರಹಾರ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್  ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದರು. ಚೆನ್ನೈನಲ್ಲಿ ನಡೆದ ಮಾಧ್ಯಮಗೋಷ್ಟಿಯಲ್ಲಿ ಹಾಗೂ ನಂತರ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಶಿವಕುಮಾರ್  ಪ್ರತಿಕ್ರಿಯೆ ನೀಡಿದರು. ಈ ವೇಳೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ಶಾಸಕ ಪೊನ್ನಣ್ಣ, ಬಿಎಂಆರ್ ಡಿಎ ಆಯುಕ್ತ ರಾಜೇಂದ್ರ ಚೋಳನ್ ಉಪಸ್ಥಿತರಿದ್ದರು.