india
ನವೆಂಬರ್‌ನಿಂದ ದೇಶಾದ್ಯಂತ ಚುನಾವಣಾ ಪಟ್ಟಿ ವಿಶೇಷ ಪರಿಷ್ಕರಣೆ
ಚುನಾವಣಾ ಆಯೋಗವು ನವೆಂಬರ್ ಆರಂಭದಿಂದ ಹಂತ ಹಂತವಾಗಿ ದೇಶಾದ್ಯಂತ ಚುನಾವಣಾ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR ) ನಡೆಸಲಿದೆ. 2026 ರಲ್ಲಿ ಚುನಾವಣೆ ಎದುರಿಸಲಿರುವ ರಾಜ್ಯಗಳಲ್ಲಿ ಮೊದಲು ಈ ಪ್ರಕ್ರಿಯೆ ಆರಂಭಗೊಳ್ಳಲಿದೆ. ಈ ಸಂಬಂಧ ದೇಶದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಚುನಾವಣಾ ಅಧಿಕಾರಿಗಳ ಸಿದ್ಧತೆಯನ್ನು ಪರಿಶೀಲಿಸುವ ಸಮ್ಮೇಳನ ನಡೆದಿದೆ ಎಂದು ಎಂದು ಚುನಾವಣಾ ಆಯೋಗ ತಿಳಿಸಿದೆ. ಅಂತಿಮ ದಿನಾಂಕಗಳು ಮತ್ತು ವಿವರಗಳು ಇನ್ನಷ್ಟೆ ಪ್ರಕಟವಾಗಬೇಕಿದೆ.
ರಷ್ಯಾದ ತೈಲ ಖರೀದಿಸಲ್ಲವೆಂದು ಮೋದಿ ಹೇಳಿದ್ದಾರೆ, ಖರೀದಿಸಿದ್ರೆ ಭಾರಿ ಸುಂಕ: ಟ್ರಂಪ್ ಬೆದರಿಕೆ
ನಾನು ರಷ್ಯಾದ ತೈಲ ಖರೀದಿ ಮಾಡುವುದಿಲ್ಲ ಎಂದು ಭಾರತದ ಪ್ರಧಾನಿ ನರೇಂದ್ರ ಮೋದಿ ನನಗೆ ವೈಯಕ್ತಿಕವಾಗಿ ಭರವಸೆ ನೀಡಿದ್ದಾರೆ. ಒಂದು ವೇಳೆ ಅವರು ರಷ್ಯಾದಿಂದ ತೈಲ ಖರೀದಿಯನ್ನು ಮುಂದುವರಿಸಿದರೆ ಭಾರಿ ಪ್ರಮಾಣದ ಸುಂಕಗಳನ್ನು ಪಾವತಿಸಬೇಕಾಗುತ್ತದೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್
ವೆಸ್ಟ್ ಇಂಡೀಸ್ ಮಣಿಸಿ ವಿಶ್ವದಾಖಲೆ ಬರೆದ ಟೀಂ ಇಂಡಿಯಾ
ನವದೆಹಲಿ: ಭಾರತ ತಂಡ 7 ವಿಕೆಟ್ ಗಳಿಂದ ವೆಸ್ಟ್ ಇಂಡೀಸ್ ತಂಡವನ್ನು ಸೋಲಿಸಿ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 2-0ಯಿಂದ ಗೆದ್ದು ವಿಶ್ವದಾಖಲೆಯನ್ನು ಸರಿಗಟ್ಟಿದೆ. ದೆಹಲಿಯಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ 121 ರನ್ ಗಳ ಗುರಿ ಪಡೆದಿದ್ದ ಭಾರತ ತಂಡ
ದೇಶಕ್ಕೆ ಮಾತ್ರವಲ್ಲ ಬಿಜೆಪಿಗೂ ಗಾಂಧೀಜಿ, ಕಾಂಗ್ರೆಸ್ಸೇ ಆಸರೆ: ಡಿಕೆ ಶಿವಕುಮಾರ್
ಗಾಂಧೀಜಿಯವರ ಹಾಗೂ ಕಾಂಗ್ರೆಸ್ ಪಕ್ಷದ ಸಿದ್ಧಾಂತ ಒಂದೇ ಆಗಿದೆ. ಆದರೆ ಬಿಜೆಪಿ ಸಿದ್ಧಾಂತ ಬೇರೆ. ಹೀಗಿದ್ದರೂ ಬಿಜೆಪಿಯವರು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಬೇಕಾದರೆ ಗಾಂಧಿ ಪ್ರತಿಮೆ ಮುಂದೆಯೇ ನಿಲ್ಲಬೇಕು. ಇನ್ನು ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳನ್ನು ನಕಲು ಮಾಡಿಕೊಂಡೇ ಬಿಜೆಪಿ ತಮ್ಮ
ಔಷಧ ಆಮದು: 100% ಸುಂಕ ಘೋಷಿಸಿದ ಟ್ರಂಪ್, ಭಾರತದ ಆರ್ಥಿಕತೆ ಮೇಲೂ ಪರಿಣಾಮ
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಔಷಧಗಳ ಆಮದಿನ ಮೇಲೆ ಶೇ.100 ಸುಂಕ ಘೋಷಿಸಿದ್ದು, ಅಕ್ಟೋಬರ್ 1ರಿಂದ ಜಾರಿಯಾಗಲಿದೆ. ಅಡುಗೆ ಮನೆ ಪಿಠೋಪಕರಣಗಳ ಮೇಲೆ 50% ಹಾಗೂ ಸ್ನಾನಗೃಹ ಪಿಠೋಪಕರಣ ಆಮದುಗಳ ಮೇಲೆ 30% ಸುಂಕ ಹಾಗೂ ಹೆವಿ ಟ್ರಕ್‌ಗಳ ಮೇಲೆ 25%
ರಷ್ಯಾದಿಂದ ತೈಲ ಖರೀದಿ ನಿಲ್ಲಿಸಲು ಮತ್ತೆ ಅಮೆರಿಕದಿಂದ ಭಾರತಕ್ಕೆ ಒತ್ತಾಯ
ಭಾರತದ ಜೊತೆಗೆ ಇಂಧನ, ವ್ಯಾಪಾರ ಸೇರಿದಂತೆ ದ್ವಿಪಕ್ಷೀಯ ಸಂಬಂಧ ವರ್ಧನೆ ಕುರಿತು ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರೊಂದೊಗೆ ಚರ್ಚಿಸಿದ್ದೇನೆ. ಆದರೆ ಭಾರತವು ರಷ್ಯಾದಿಂದ ರಿಯಾಯಿತಿ ದರದಲ್ಲಿ ಕಚ್ಚಾತೈಲ ಖರೀದಿ ನಿರ್ಧಾರವನ್ನು ಮರುಪರಿಶೀಲಿಸಬೇಕು. ಭಾರತವು ರಷ್ಯಾದ ತೈಲ ಖರೀದಿಯನ್ನು ನಿಲ್ಲಿಸಬೇಕೆಂದು ಒತ್ತಾಯಿಸುತ್ತೇನೆ,
ರಾಜ್ಯ ಸೇರಿ ದೇಶದ ಹಲವೆಡೆ ಭಾರಿ ಮಳೆ ಸಾಧ್ಯತೆ
ಹವಾಮಾನ ಇಲಾಖೆ ನೀಡಿರುವ ವರದಿ ಪ್ರಕಾರ, ಸೆಪ್ಟೆಂಬರ್ 22ರಂದು ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಪೂರ್ವ ಕರಾವಳಿಯಲ್ಲಿ ಸಮುದ್ರವು ಪ್ರಕ್ಷುಬ್ಧವಾಗುವ ಬಗ್ಗೆ ಇಲಾಖೆ ಎಚ್ಚರಿಕೆ ನೀಡಿದೆ. ಒಡಿಶಾ, ಆಂಧ್ರಪ್ರದೇಶ ಮತ್ತು ಪಶ್ಚಿಮ ಬಂಗಾಳದ ಮೀನುಗಾರರು ಪರಿಸ್ಥಿತಿ ಸುಧಾರಿಸುವವರೆಗೆ
ಅಭಿಮಾನಿಗಳ ನಿರೀಕ್ಷೆಯಂತೆ ಏಷ್ಯಾಕಪ್ ಟೂರ್ನಿಯಲ್ಲಿ ಪಾಕ್‌ಗೆ ಸೋಲುಣಿಸಿ ಬೀಗಿದ ಭಾರತ
ದುಬೈನಲ್ಲಿ ನಡೆದ ಏಷ್ಯಾಕಪ್ ಟೂರ್ನಿ ಬಹಳಷ್ಟು ಕುತೂಹಲ, ನಿರೀಕ್ಷೆಗಳನ್ನು ಹುಟ್ಟು ಹಾಕಿದ್ದಂತೆಯೇ ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಂ ಇಂಡಿಯಾ 7 ವಿಕೆಟ್ ಅಂತರದೊಂದಿಗೆ ಭರ್ಜರಿ ಗೆಲುವನ್ನು ತನ್ನದಾಗಿಸಿಕೊಂಡಿದೆ. ಆರಂಭಿಕ ಬ್ಯಾಟರ್ ಅಭೀಷೇಕ್ ಶರ್ಮಾ, ನಾಯಕ
ಸಿಪಿ ರಾಧಾಕೃಷ್ಣನ್ ಉಪರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕಾರ
ದೇಶದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ರಾಜನಾಥ್ ಸಿಂಗ್, ನಿರ್ಗಮಿತ ರಾಜ್ಯಪಾಲರಾದ ಜಗದೀಪ್ ಧನ್ಕರ್ ಸೇರಿದಂತೆ ಗಣ್ಯರ ಸಮ್ಮುಖ ಇಂದು ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಧಾಕೃಷ್ಣನ್ ಅವರಿಗೆ ಪ್ರಮಾಣವಚನ ಬೋಧಿಸಿದರು.
ಉಕ್ರೇನ್ ವಿರುದ್ಧ ಯುದ್ಧಕ್ಕೆ ರಷ್ಯಾ ಸೇನೆಗೆ ಭಾರತೀಯರ ನೇಮಕ: ಎಚ್ಚರಿಕೆ ನೀಡಿದ ವಿದೇಶ ಸಚಿವಾಲಯ
ಉಕ್ರೇನ್ ವಿರುದ್ಧದ ಯುದ್ಧದಲ್ಲಿ ಹೋರಾಡಲು ರಷ್ಯಾ ಸೇನೆ ಸೇರಲು ಬಯಸುತ್ತಿರುವ ಎಲ್ಲಾ ಭಾರತೀಯರು ಈ ಯೋಚನೆ ಬಿಟ್ಟು ಬಿಡಿ, ಇದು ತುಂಬಾ ಅಪಾಯಕಾರಿ ನಿರ್ಧಾರವಾಗುತ್ತದೆ ಎಂದು ವಿದೇಶ ಸಚಿವಾಲಯ ಎಚ್ಚರಿಕೆ ನೀಡಿದೆ. ದೆಹಲಿ ಮತ್ತು ಮಾಸ್ಕೋದಲ್ಲಿರುವ ರಷ್ಯಾದ ಅಧಿಕಾರಿಗಳೊಂದಿಗೆ ವಿಷಯ ಚರ್ಚಿಸಿ.




