Sunday, September 20, 2026
Menu

ಟ್ರಂಪ್ ತೆರಿಗೆ ಬರೆ ನಡುವೆ ಭಾರತದ ಜಿಡಿಪಿ ದಾಖಲೆಯ ಶೇ. 8.2ಕ್ಕೆ ಜಿಗಿತ!

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತೆರಿಗೆ ಹೇರಿಕೆ ಸೇರಿದಂತೆ ಹಲವು ಸವಾಲುಗಳ ನಡುವೆ ಭಾರತದ ಆರ್ಥಿಕ ಅಭಿವೃದ್ಧಿ ದರ ವರ್ಷದ ಎರಡನೇ ತ್ರೈಮಾಸಿಕದಲ್ಲಿ ದಾಖಲೆಯ ಶೇ.8.2 ಏರಿಕೆ ದಾಖಲಿಸಿದೆ. ಕೇಂದ್ರ ಸರ್ಕಾರ ಶುಕ್ರವಾರ ಅಧಿಕೃತವಾಗಿ ಬಿಡುಗಡೆ ಮಾಡಿದ ದತ್ತಾಂಶದ ಪ್ರಕಾರ ಪ್ರಸಕ್ತ ಸಾಲಿನ ಎರಡನೇ ತ್ರೈಮಾಸಿಕದಲ್ಲಿ ಶೇ.8.2ರಷ್ಟು ಜಿಡಿಪಿ ದಾಖಲಾಗಿದೆ. ಆರ್ಥಿಕ ತಜ್ಞರು ಶೇ.7ರಿಂದ 7.5ರಷ್ಟು ಅಂದಾಜಿಸಿದ್ದ ಪ್ರಗತಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಅಭಿವೃದ್ಧಿ ದಾಖಲಿಸಿದೆ. ರಾಷ್ಟ್ರೀಯ ಸಾಂಖ್ಯಿಕ ಕಚೇರಿ ಬಿಡುಗಡೆ