Menu

ಮೆಕ್ಕಾದಲ್ಲಿ ಟ್ಯಾಂಕರ್‌ ಡಿಕ್ಕಿಯಾಗಿ ಬಸ್ಸಿನಲ್ಲಿದ್ದ 42 ಭಾರತೀಯ ಯಾತ್ರಿಗಳು ಸಜೀವ ದಹನ

ಸೌದಿ ಅರೇಬಿಯಾದಲ್ಲಿ ಮೆಕ್ಕಾದಿಂದ ಮದೀನಾಗೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ಬಸ್‌ಗೆ ಡೀಸೆಲ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆದು ಕನಿಷ್ಠ 42 ಭಾರತೀಯ ಯಾತ್ರಿಕರು ಸಜೀವ ದಹನವಾಗಿದ್ದಾರೆ. ಮೆಕ್ಕಾ ಬಳಿಯ ಅಲ್ ಮುಫ್ರಿಹಾತ್‌ನಲ್ಲಿ ಈ ದುರಂತ ಸಂಬವಿಸಿದ್ದು, ಮೃತಪಟ್ಟವರಲ್ಲಿ ಮಹಿಳೆಯರು, ಮಕ್ಕಳು ಕೂಡ ಸೇರಿದ್ದಾರೆ. ಮೃತರು ಹೈದರಾಬಾದ್‌ ಮೂಲದವರು ಎಂದು ಹೇಳಲಾಗುತ್ತಿದೆ. ಮೆಕ್ಕಾದಲ್ಲಿ ಉಮ್ರಾ ವಿಧಿಗಳನ್ನು ನೆರವೇರಿಸಿ ಮದೀನಾಕ್ಕೆ ತೆರಳುತ್ತಿದ್ದಾಗ ಪ್ರವಾಸಿಗರ ಬಸ್ಸಿಗೆ ಡಿಸೇಲ್ ಟ್ಯಾಂಕರ್ ಡಿಕ್ಕಿ ಹೊಡೆದ ರಭಸಕ್ಕೆ ಬೆಂಕಿ ಹೊತ್ತಿಕೊಂಡಿದೆ. ನಸುಕಿನ