Menu

1.2 ಲಕ್ಷ ರೈಲ್ವೆ ಹುದ್ದೆಗಳಿಗೆ ನೇಮಕಾತಿ: ಕೇಂದ್ರ ಸಚಿವ ಅಶ್ವಿನ್ ವೈಭವ್

2024-25ನೇ ಸಾಲಿನಿಂದ ರೈಲ್ವೆ ಇಲಾಖೆಯಲ್ಲಿ 1.2 ಲಕ್ಷ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಭವ್ ತಿಳಿಸಿದ್ದಾರೆ. ದೆಹಲಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಗುರುವಾರ ಲೋಕಸಭೆಯಲ್ಲಿ ಉತ್ತರ ನೀಡಿದ ಅವರು, ಕಳೆದ 11 ವರ್ಷಗಳಲ್ಲಿ ರೈಲ್ವೆ ಇಲಾಖೆಯಲ್ಲಿ 5.08 ಲಕ್ಷ ಹುದ್ದೆ ಭರ್ತಿ ಮಾಡಲಾಗಿದೆ ಎಂದರು. ಭಾರತೀಯ ರೈಲ್ವೆಯು ಬೌಗೋಳಿಕವಾಗಿ ಹಾಗೂ ಆರ್ಥಿಕವಾಗಿ ಸಾಕಷ್ಟು ವಿಸ್ತಾರವಾಗಿ ಇರುವುದರಿಂದ ದೇಶದ್ಯಂತ ನೇಮಕಾತಿ ಪ್ರಕ್ರಿಯೆಗಳು ನಡೆಯುತ್ತಲೇ ಇರುತ್ತವೆ.

ಬೆಂಗಳೂರು-ಮುಂಬೈ ನಡುವೆ ಹೊಸ ಸೂಪರ್‌ ಫಾಸ್ಟ್ ರೈಲಿಗೆ ಸಮ್ಮತಿ

ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ಸೂಪರ್‌ಫಾಸ್ಟ್ ರೈಲು ಸೇವೆಗೆ ಕೇಂದ್ರ ರೈಲ್ವೆ ಸಚಿವಾಲಯ ಹಸಿರು ನಿಶಾನೆ ತೋರಿಸಿದೆ ಎಂದು ಸಂಸದ ತೇಜಸ್ವಿ ಸೂರ್ಯ ತಿಳಿಸಿದ್ದಾರೆ. 30 ವರ್ಷಗಳ ಈ ಬೇಡಿಕೆ ಈಗ ನನಸಾಗಲಿದ್ದು, ಕರ್ನಾಟಕದ ಜನತೆಗೆ ಇದು ಸಂತಸದ ಸುದ್ದಿ

ಕರ್ನಾಟಕ ಸೇರಿ ಹಲವು ರಾಜ್ಯಗಳ ರೈಲ್ವೆಯಲ್ಲಿ 209 ಮೆಗಾವ್ಯಾಟ್‌ ಸೌರ ಸ್ಥಾವರ ಸ್ಥಾಪನೆ

ನವದೆಹಲಿ: ಭಾರತೀಯ ರೈಲ್ವೆ ಕಳೆದೊಂದು ದಶಕದಿಂದ ಸೌರ ಶಕ್ತಿ ಉತ್ಪಾದನೆ ಮತ್ತು ಬಳಕೆಗೆ ಪ್ರಾಧಾನ್ಯತೆ ನೀಡುತ್ತಿದ್ದು, ದೇಶಾದ್ಯಂತ ಈವರೆಗೆ 2,249 ರೈಲು ನಿಲ್ದಾಣಗಳು ಮತ್ತು ಸೇವಾ ಕಟ್ಟಡಗಳಲ್ಲಿ 209 ಮೆಗಾವ್ಯಾಟ್‌ ಸೌರ ಸ್ಥಾವರಗಳನ್ನು ಸ್ಥಾಪಿಸಿದೆ. ಕಳೆದ ಹತ್ತು ವರ್ಷಗಳ ಹಿಂದೆ ಕೇವಲ