Menu

ಖೊ-ಖೊ ವಿಶ್ವಕಪ್ : ನೇಪಾಳ ಮಣಿಸಿ ಪ್ರಶಸ್ತಿ ಗೆದ್ದ ಭಾರತ ತಂಡಕ್ಕೆ ಸಿಎಂ ಅಭಿನಂದನೆ

ಮೊಟ್ಟಮೊದಲ ಖೊ – ಖೊ ವಿಶ್ವಕಪ್ ಪಂದ್ಯದಲ್ಲಿ  ನೇಪಾಳವನ್ನು ಬಗ್ಗುಬಡಿದು ಪ್ರಶಸ್ತಿ ಮುಡಿಗೇರಿಸಿಕೊಂಡಿರುವ ಭಾರತದ ಮಹಿಳಾ ಮತ್ತು ಪುರುಷರ ಖೊ-ಖೊ ತಂಡಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಚೊಚ್ಚಲ ಖೊ-ಖೊ ವಿಶ್ವಕಪ್‌ನಲ್ಲಿ ಭಾರತೀಯ ತಂಡಗಳ ಈ ಅಮೋಘ ಸಾಧನೆ ಇತಿಹಾಸದ ಪುಟಗಳಲ್ಲಿ ಶಾಶ್ವತವಾಗಿ ಉಳಿಯಲಿದೆ. ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲೂಕಿನ ಕುರುಬೂರಿನ ಯುವತಿ ಚೈತ್ರ. ಬಿ ಅವರು ವಿಶ್ವವಿಜೇತ ಮಹಿಳಾ ಖೊ-ಖೊ ತಂಡದ ಭಾಗವಾಗಿರುವುದು ನಾಡಿಗೆ ಹೆಮ್ಮೆಯ ಸಂಗತಿ.