Menu

ವೆನಿಜುವೆಲಾಗೆ ಹೋಗಬೇಡಿ: ಅಮೆರಿಕ ದಾಳಿ ಬಳಿಕ ಭಾರತೀಯರಿಗೆ ಕೇಂದ್ರ ಎಚ್ಚರಿಕೆ

ವೆನಿಜುವೆಲಾದ ಮೇಲೆ ಅಮೆರಿಕ ದಾಳಿ ನಡೆಸಿ ಅಲ್ಲಿನ ಅಧ್ಯಕ್ಷರನ್ನು ಬಂಧಿಸಿದ ಬಳಿಕ ಉಂಟಾಗಿರುವ ಬಿಕ್ಕಟ್ಟು ಪರಿಗಣಿಸಿ ಅಲ್ಲಿಗೆ ಅನಗತ್ಯ ಪ್ರಯಾಣ ಮಾಡಬೇಡಿ ಎಂದು ಕೇಂದ್ರ ಸರ್ಕಾರವು ಭಾರತೀಯರಿಗೆ ಎಚ್ಚರಿಕೆ ನೀಡಿದೆ. ವೆನೆಜುವೆಲಾದಲ್ಲಿರುವ ಎಲ್ಲಾ ಭಾರತೀಯರು ಜಾಗರೂಕರಾಗಿ ಇರಬೇಕು, ಅನಗತ್ಯವಾಗಿ ಹೊರಗಡೆ ಓಡಾಡಬೇಡಿ.ಕ್ಯಾರಕಾಸ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯೊಂದಿಗೆ ನಿರಂತರ ಸಂಪರ್ಕದಲ್ಲಿರಿ ಎಂದು ವಿದೇಶಾಂಗ ಸಚಿವಾಲಯವು ತಿಳಿಸಿದೆ. ರಾಜಧಾನಿ ಕ್ಯಾರಕಾಸ್‌ ಮೇಲೆ ದಾಳಿ ನಡೆಸಿ ವೆನೆಜುವೆಲಾದ ಅಧ್ಯಕ್ಷ ನಿಕೋಲಸ್‌ ಮಡುರೋ ಅವರನ್ನು ಸೆರೆಹಿಡಿಯಲಾಗಿದೆ