Menu

ಮದುವೆಯಲ್ಲಿ ಡಾನ್ಸ್‌ ಮಾಡುತ್ತಿರುವಾಗಲೇ ಕುಸಿದು ಯುವತಿ ಸಾವು

ಮಧ್ಯಪ್ರದೇಶದ ವಿದಿಶಾ ಜಿಲ್ಲೆಯ ರೆಸಾರ್ಟ್‌ವೊಂದರಲ್ಲಿ ಮದುವೆ ಕಾರ್ಯಕ್ರಮ ನಡೆಯುತ್ತಿದ್ದಾಗ ನೃತ್ಯ ಮಾಡುತ್ತಿದ್ದ ೨೩ ವರ್ಷದ ಯುವತಿ ಹೃದಯ ಸ್ತಂಭನ ಗೊಂಡು ಕುಸಿದು ಬಿದ್ದು ಮೃತಪಟ್ಟಿದ್ದಾಳೆ. ಯುವತಿಯನ್ನು ಇಂದೋರ್ ನಿವಾಸಿ ಪರಿಣಿತಾ ಜೈನ್ ಎಂದು ಗುರುತಿಸಲಾಗಿದೆ. ಸೋದರ ಸಂಬಂಧಿ ಮದುವೆಯಲ್ಲಿ ಆಕೆ ಪಾಲ್ಗೊಂಡಿದ್ದು, 200ಕ್ಕೂ ಹೆಚ್ಚು ಮಂದಿ ಉಪಸ್ಥಿತರಿದ್ದರು. ಪರಿಣಿತಾ ವೇದಿಕೆಯಲ್ಲಿ ಬಾಲಿವುಡ್‌ ಗೀತೆಯೊಂದಕ್ಕೆ ನೃತ್ಯ ಮಾಡುತ್ತಿದ್ದಾಗಲೇ ಹೃದಯ ಸ್ತಂಭನಗೊಂಡು ಅಸು ನೀಗಿದ್ದಾರೆ. ಆಕೆ ಕುಸಿದು ಬಿದ್ದ ವೀಡಿಯೊ ಸೋಶಿಯಲ್‌ ಮೀಡಿಯಾದಲ್ಲಿ