Menu

ಕೈಗಾರಿಕಾ ಪ್ರಗತಿ ಜತೆಗೆ ಸುಸ್ಥಿರ ರಾಜ್ಯ ಮಾಡುವ ಗುರಿ: ಡಿ.ಕೆ.ಶಿವಕುಮಾರ್ 

“ಕರ್ನಾಟಕವನ್ನು ಕೈಗಾರಿಕೆ ಪ್ರಗತಿ ಜತೆಗೆ ಸುಸ್ಥಿರ ರಾಜ್ಯವನ್ನಾಗಿ ರೂಪಿಸುವ ಗುರಿ ಹೊಂದಿದ್ದೇವೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್  ಹೇಳಿದ್ದಾರೆ. ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಇನ್ವೆಸ್ಟ್ ಕರ್ನಾಟಕ 2025 ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಶಿವಕುಮಾರ್  ಮಾತನಾಡಿದರು. “ಇನ್ವೆಸ್ಟ್ ಕರ್ನಾಟಕ 2025 ಕೇವಲ ಹೂಡಿಕೆ ಸಮಾವೇಶ ಮಾತ್ರವಲ್ಲ. ಇದು ಭವಿಷ್ಯವನ್ನು ರೂಪಿಸುವ ನಮ್ಮ ಸಹಯೋಗದ ಹಾಗೂ ಕೈಗಾರಿಕಾ ಪ್ರಗತಿ ಸಾಧಿಸುವ ವೇದಿಕೆ. ಇದು ಎಲ್ಲರನ್ನು ಒಳಗೊಂಡು ಪ್ರಗತಿಯನ್ನು ಖಾತರಿಪಡಿಸುವ ಕಾರ್ಯಕ್ರಮ” ಎಂದರು.