Infosys Springboard
ಪತ್ರಕರ್ತರ ತರಬೇತಿಗಾಗಿ ಇನ್ಫೋಸಿಸ್ ಸ್ಪ್ರಿಂಗ್ಬೋರ್ಡ್ – ಕರ್ನಾಟಕ ಮಾಧ್ಯಮ ಅಕಾಡೆಮಿ ಒಡಂಬಡಿಕೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖ ದೇಶದಲ್ಲಿಯೇ ಮೊದಲ ಬಾರಿಗೆ ಜಾಗತಿಕ ಮಟ್ಟದಲ್ಲಿ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ದಿಗ್ಗಜ ಇನ್ಫೋಸಿಸ್ನ ಸ್ಪ್ರಿಂಗ್ಬೋರ್ಡ್ ಸಿಎಸ್ಆರ್ ಕಾರ್ಯಕ್ರಮದಡಿ ಸಹಭಾಗಿತ್ವಕ್ಕಾಗಿ ಕರ್ನಾಟಕ ಮಾಧ್ಯಮ ಅಕಾಡೆಮಿಯು ಪತ್ರಕರ್ತರ ತರಬೇತಿಗಾಗಿ ಒಡಂಬಡಿಕೆ ಮಾಡಿಕೊಂಡಿದೆ. ಪತ್ರಕರ್ತರ ಸಾಫ್ಟ್ಸ್ಕಿಲ್ ತರಬೇತಿಯ ಉದ್ದೇಶಕ್ಕಾಗಿ ಮಾಡಿಕೊಳ್ಳುತ್ತಿರುವ ಈ ಒಡಂಬಡಿಕೆಯು ಸಿ.ಎಸ್.ಆರ್. ಅಡಿ ಕರ್ನಾಟಕ ಮಾಧ್ಯಮ ಅಕಾಡೆಮಿ ಕೈಗೆತ್ತಿಕೊಂಡ ಮೊದಲ ಕಾರ್ಯಕ್ರಮವಾಗಿದೆ. ಇನ್ಫೋಸಿಸ್ CSR ಯೋಜನೆಯ “ಸ್ಪ್ರಿಂಗ್ಬೋರ್ಡ್” ಪ್ಲಾಟ್ಫಾರ್ಮ್ ಮೂಲಕ ಪತ್ರಕರ್ತರ ಡಿಜಿಟಲ್ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು


